Tuesday , August 21 2018
ಕೇಳ್ರಪ್ಪೋ ಕೇಳಿ
Home / Sandalwood / ಜುಲೈ 8ಕ್ಕೆ `ರನ್ ಆ್ಯಂಟನಿ’ ರಿಲೀಸ್…?

ಜುಲೈ 8ಕ್ಕೆ `ರನ್ ಆ್ಯಂಟನಿ’ ರಿಲೀಸ್…?

ಬೆಂಗಳೂರು : ರಾಜ್ ವಂಶದ ಕುಡಿ ವಿನಯ್ ರಾಜ್‍ಕುಮಾರ್ ಅಭಿನಯದ ಎರಡನೇ ಚಿತ್ರ `ರನ್ ಆ್ಯಂಟನಿ’ಯ ಬಿಡುಗಡೆ ಸಿದ್ಧತೆ ನಡೆಯುತ್ತಿದೆ. ಆರಂಭದಲ್ಲಿ ಜುಲೈ 1ಕ್ಕೆ ಈ ಚಿತ್ರ ರಿಲೀಸ್ ಮಾಡಲು ನಿರ್ಧರಿಸಲಾಗಿತ್ತು ಎನ್ನಲಾಗಿದೆ. ಆದರೆ, ಚಿತ್ರದ ಪೋಸ್ಟ್ ಪ್ರೊಡಕ್ಷನ್ ಕೆಲಸ ಬಾಕಿ ಇರುವುದರಿಂದ ಈ ಚಿತ್ರವನ್ನು ಜುಲೈ 8ಕ್ಕೆ ಬಿಡುಗಡೆ ಮಾಡಲು ನಿರ್ಧರಿಸಲಾಗಿದೆ ಎಂದು ಹೇಳಲಾಗುತ್ತಿದೆ. ಈ ಬಗ್ಗೆ ಪ್ರಖ್ಯಾತ ಆಂಗ್ಲ ಮಾಧ್ಯಮವೊಂದು ವರದಿ ಮಾಡಿದೆ. ರಾಜ್ ಕುಟುಂಬದ ಹೋಮ್ ಪ್ರೊಡೆಕ್ಷನ್‍ನಲ್ಲಿ ಈ ಚಿತ್ರ ನಿರ್ಮಾಣವಾಗುತ್ತಿದೆ. ರಘು ಶಾಸ್ತ್ರಿ ಈ ಚಿತ್ರವನ್ನು ನಿರ್ದೇಶನ ಮಾಡುತ್ತಿದ್ದಾರೆ. ಕಳೆದ ವಾರ ಈ ಚಿತ್ರದ ಟೀಸರ್ ರಿಲೀಸ್ ಆಗಿದ್ದು, ಬಹಳ ಸದ್ದು ಮಾಡಿದೆ.

About sudina

Check Also

ನಿರ್ದೇಶಕಿ ಪೂರ್ಣಿಮಾ ಮೋಹನ್ ವಿಧಿವಶ

ಬೆಂಗಳೂರು : ಸ್ಯಾಂಡಲ್​ವುಡ್​ ನಿರ್ದೇಶಕಿ ಪೂರ್ಣಿಮಾ ಮೋಹನ್​ ವಿಧಿವಶರಾಗಿದ್ದಾರೆ. ಶುಕ್ರವಾರ ಅವರು ಹೃದಯಾಘಾತದಿಂದ ಕೊನೆಯುಸಿರೆಳೆದಿದ್ದಾರೆ. 48 ವರ್ಷದ ಪೂರ್ಣಿಮಾ ಅವರನ್ನು …

Leave a Reply

Your email address will not be published. Required fields are marked *

error: Content is protected !!