Wednesday , March 27 2019
ಕೇಳ್ರಪ್ಪೋ ಕೇಳಿ
Home / News NOW / ಅಂಧೇರಿಯಲ್ಲಿ ಅಗ್ನಿ ಆಕಸ್ಮಿಕ : 8 ಮಂದಿಯ ಸಜೀವ ದಹನ

ಅಂಧೇರಿಯಲ್ಲಿ ಅಗ್ನಿ ಆಕಸ್ಮಿಕ : 8 ಮಂದಿಯ ಸಜೀವ ದಹನ

ಮುಂಬೈ : ಅಂಧೇರಿಯ ಕಟ್ಟಡವೊಂದರಲ್ಲಿ ಇಂದು ಮುಂಜಾನೆ ಅಗ್ನಿ ಆಕಸ್ಮಿಕ ಸಂಭವಿಸಿದೆ. ಈ ದುರಂತದಲ್ಲಿ 8 ಮಂದಿ ಸಜೀವ ದಹನವಾಗಿದ್ದಾರೆ. ಬೆಳಗ್ಗೆ ಸುಮಾರು 5.15ಕ್ಕೆ ಈ ಘಟನೆ ನಡೆದಿರುವುದಾಗಿ ಪ್ರತ್ಯಕ್ಷದರ್ಶಿಗಳು ತಿಳಿಸಿದ್ದಾರೆ. ಕಟ್ಟಡದ ಕೆಳಮಹಡಿಯಲ್ಲಿದ್ದ ಮೆಡಿಕಲ್ ಶಾಪ್‍ನಲ್ಲಿ ಕಾಣಿಸಿಕೊಂಡ ಬೆಂಕಿ ಬಳಿಕ ಮೊದಲ ಮಹಡಿಗೆ ಹಬ್ಬಿತ್ತು. ಮೊದಲ ಮಹಡಿಯಲ್ಲಿ ಕೆಲವೊಂದು ಕುಟುಂಬಗಳು ವಾಸವಾಗಿದ್ದವು. ಇನ್ನು, ಸುದ್ದಿ ತಿಳಿದ ತಕ್ಷಣ ಸ್ಥಳಕ್ಕೆ ಆಗಮಿಸಿದ ಅಗ್ನಿಶಾಮಕ ದಳ ಬೆಂಕಿ ನಂದಿಸಿದೆ. ವಿದ್ಯುತ್ ಶಾರ್ಟ್ ಸಕ್ರ್ಯೂಟ್‍ನಿಂದಾಗಿ ಈ ದುರ್ಘಟನೆ ಸಂಭವಿಸಿದೆ ಎಂದು ಹೇಳಲಾಗುತ್ತಿದೆ.

About sudina

Check Also

ಖಡಕ್ ಐಪಿಎಸ್ ಅಧಿಕಾರಿ ಮಧುಕರ್ ಶೆಟ್ಟಿ ವಿಧಿವಶ

ಹೈದರಾಬಾದ್ : ಖಡಕ್ ಮತ್ತು ಜನಾನುರಾಗಿ ಎಂದು ಹೆಸರು ಪಡೆದಿದ್ದ ಹಿರಿಯ ಐಪಿಎಸ್ ಅಧಿಕಾರಿ ಮಧುಕರ್ ಶೆಟ್ಟಿ ವಿಧಿವಶರಾಗಿದ್ದಾರೆ. ಅವರಿಗೆ …

Leave a Reply

Your email address will not be published. Required fields are marked *

error: Content is protected !!