Wednesday , March 20 2019
ಕೇಳ್ರಪ್ಪೋ ಕೇಳಿ
Home / News NOW / ತಪ್ಪಿದ ಗುರಿ : ಸಿಎಂ ಕುರಿತ ಪುಸ್ತಕ ಖರೀದಿ ಆದೇಶ ವಾಪಸ್

ತಪ್ಪಿದ ಗುರಿ : ಸಿಎಂ ಕುರಿತ ಪುಸ್ತಕ ಖರೀದಿ ಆದೇಶ ವಾಪಸ್

ಬೆಂಗಳೂರು : ಸಿಎಂ ಸಿದ್ದರಾಮಯ್ಯ ಅವರ ರಾಜಕೀಯ ಬದುಕು ಹಾಗೂ ಜನಪ್ರಿಯ ಯೋಜನೆಗಳನ್ನೊಳಗೊಂಡ ಪುಸ್ತಕ `ಇಟ್ಟ ಗುರಿ – ದಿಟ್ಟ ಹೆಜ್ಜೆ’ ಪುಸ್ತಕ ಖರೀದಿ ಆದೇಶಕ್ಕೆ ಕೊನೆಗೂ ಬ್ರೇಕ್ ಬಿದ್ದಿದೆ. ಹಿರಿಯ ಸಾಹಿತಿಗಳು ಸೇರಿದಂತೆ ಹಲವರು ಬರೆದಿರುವ ಲೇಖನಗಳ ಸಂಗ್ರಹವಾದ ಈ ಪುಸ್ತಕವನ್ನು ಎಲ್ಲಾ ಸರ್ಕಾರಿ ಮತ್ತು ಅನುದಾನಿತ ಶಾಲಾ ಗ್ರಂಥಾಲಯಗಳಿಗೆ ಖರೀದಿಸಬೇಕೆಂದು ಸಾರ್ವಜನಿಕ ಶಿಕ್ಷಣ ಇಲಾಖೆ ಆದೇಶ ಹೊರಡಿಸಿತ್ತು. ಈ ಆದೇಶ ಭಾರೀ ಚರ್ಚೆಗೆ ಗ್ರಾಸವಾಗಿತ್ತು. ಹೀಗಾಗಿ, ಈ ಆದೇಶವನ್ನು ಸಾರ್ವಜನಿಕ ಶಿಕ್ಷಣ ಇಲಾಖೆ ಹಿಂಪಡೆದಿದೆ.
cm book
ಈ ಪ್ರಕರಣದ ವಿವಾದದ ರೂಪ ಪಡೆಯುತ್ತಿದ್ದಂತೆಯೇ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಶಿಕ್ಷಣ ಸಚಿವ ತನ್ವೀರ್ ಸೇಠ್ ಇದರ ಬಗ್ಗೆ ನಮಗೇನು ಗೊತ್ತೇ ಇಲ್ಲ ಎಂದು ಹೇಳಿ ನುಣುಚಿಕೊಂಡಿದ್ದರು. ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಇಲಾಖೆ ಪ್ರಧಾನ ಕಾರ್ಯದರ್ಶಿ ಅಜಯ್ ಸೇಠ್ ಕೂಡಾ ಇದೇ ಮಾತನ್ನು ಹೇಳಿದ್ದರು. ಆದರೆ, ಕಳೆದ ಮಾರ್ಚ್‍ನಲ್ಲೇ ಶಿಕ್ಷಣ ಇಲಾಖೆ ಈ ಸುತ್ತೋಲೆಯನ್ನು ಹೊರಡಿಸಿತ್ತು. ಇದೀಗ ಈ ಆದೇಶವನ್ನು ಇಲಾಖೆ ಹಿಂದಕ್ಕೆ ಪಡೆದಿದೆ. ಈ ಮೂಲಕ ಈ ಪ್ರಕರಣಕ್ಕೆ ತೆರೆ ಬಿದ್ದಿದೆ.

About sudina

Check Also

ಖಡಕ್ ಐಪಿಎಸ್ ಅಧಿಕಾರಿ ಮಧುಕರ್ ಶೆಟ್ಟಿ ವಿಧಿವಶ

ಹೈದರಾಬಾದ್ : ಖಡಕ್ ಮತ್ತು ಜನಾನುರಾಗಿ ಎಂದು ಹೆಸರು ಪಡೆದಿದ್ದ ಹಿರಿಯ ಐಪಿಎಸ್ ಅಧಿಕಾರಿ ಮಧುಕರ್ ಶೆಟ್ಟಿ ವಿಧಿವಶರಾಗಿದ್ದಾರೆ. ಅವರಿಗೆ …

Leave a Reply

Your email address will not be published. Required fields are marked *

error: Content is protected !!