Wednesday , December 12 2018
ಕೇಳ್ರಪ್ಪೋ ಕೇಳಿ
Home / Sandalwood / `ಲೀಡರ್’ನಲ್ಲಿ ವಿಜಯ್ ರಾಘವೇಂದ್ರ, ಗುರು ಜಗ್ಗೇಶ್

`ಲೀಡರ್’ನಲ್ಲಿ ವಿಜಯ್ ರಾಘವೇಂದ್ರ, ಗುರು ಜಗ್ಗೇಶ್

ಬೆಂಗಳೂರು : ಹ್ಯಾಟ್ರಿಕ್ ಹೀರೋ ಶಿವರಾಜ್‍ಕುಮಾರ್ ಬಹುನಿರೀಕ್ಷಿತ `ಲೀಡರ್’ ಚಿತ್ರದಲ್ಲಿ ವಿಜಯ್ ರಾಘವೇಂದ್ರ ಮತ್ತು ಜಗ್ಗೇಶ್ ಪುತ್ರ ಗುರು ಜಗ್ಗೇಶ್ ನಟಿಸಲಿದ್ದಾರೆ. ವಿಜಯ್ ಮತ್ತು ಗುರು ಪ್ರಮುಖ ಪಾತ್ರಗಳನ್ನು ನಿರ್ವಹಿಸಲಿದ್ದಾರೆ ಎಂದು ಗೊತ್ತಾಗಿದೆ. ರೋಜ್ ಖ್ಯಾತಿ ಸಹನಮೂರ್ತಿ ಈ ಚಿತ್ರವನ್ನು ನಿರ್ದೇಶನ ಮಾಡಲಿದ್ದಾರೆ. ಈ ಹಿಂದೆ ವಿಜಯ ರಾಘವೇಂದ್ರ ಶಿವರಾಜ್‍ಕುಮಾರ್ ಅವರ ಶ್ರೀಕಂಠ ಚಿತ್ರದಲ್ಲಿ ನಟಿಸಿದ್ದರು. ಈಗ ಮತ್ತೊಮ್ಮೆ ವಿಜಯ್ ಶಿವಣ್ಣ ಜೊತೆ ಸ್ಕ್ರೀನ್ ಹಂಚಿಕೊಳ್ಳಲಿದ್ದಾರೆ. ಈ ಚಿತ್ರಕ್ಕೆ ನಾಯಕಿಯಾಗಿ ಪ್ರಣೀತಾ ಆಯ್ಕೆಯಾಗಿದ್ದಾರೆ. ತರುಣ್ ಶಿವಪ್ಪ ಈ ಚಿತ್ರ ನಿರ್ಮಾಣ ಮಾಡಲಿದ್ದಾರೆ.

About sudina

Check Also

ನಿರ್ದೇಶಕಿ ಪೂರ್ಣಿಮಾ ಮೋಹನ್ ವಿಧಿವಶ

ಬೆಂಗಳೂರು : ಸ್ಯಾಂಡಲ್​ವುಡ್​ ನಿರ್ದೇಶಕಿ ಪೂರ್ಣಿಮಾ ಮೋಹನ್​ ವಿಧಿವಶರಾಗಿದ್ದಾರೆ. ಶುಕ್ರವಾರ ಅವರು ಹೃದಯಾಘಾತದಿಂದ ಕೊನೆಯುಸಿರೆಳೆದಿದ್ದಾರೆ. 48 ವರ್ಷದ ಪೂರ್ಣಿಮಾ ಅವರನ್ನು …

Leave a Reply

Your email address will not be published. Required fields are marked *

error: Content is protected !!