Wednesday , March 27 2019
ಕೇಳ್ರಪ್ಪೋ ಕೇಳಿ
Home / News NOW / ರಸ್ತೆ ದುರಸ್ತಿ ಮಾಡದಿದ್ದರೆ ಕೋರ್ಟ್ ಮೊರೆ : ಪುರುಷ ಎನ್. ಸಾಲಿಯಾನ್
Jpeg

ರಸ್ತೆ ದುರಸ್ತಿ ಮಾಡದಿದ್ದರೆ ಕೋರ್ಟ್ ಮೊರೆ : ಪುರುಷ ಎನ್. ಸಾಲಿಯಾನ್

ಬಂಟ್ವಾಳ : ಸಂಪೂರ್ಣ ಹದೆಗೆಟ್ಟು ಸಂಚಾರಕ್ಕೆ ಅಯೋಗ್ಯವಾಗಿರುವ ತಾಲೂಕಿನ ಕಳ್ಳಿಗೆ ಗ್ರಾಮದ ದರಿಬಾಗಿನಿಂದ ನೆತ್ರಕೆರೆ – ಬೆಂಜನಪದವು ರಸ್ತೆ ಮತ್ತು ಜಾರದಗುಂಡಿಯಿಂದ ಕನಪಾಡಿ – ಬೆದ್ರಾಡಿ ವರೆಗಿನ 6 ಕಿಲೋ ಮೀಟರ್ ರಸ್ತೆಯ ಕಾಮಗಾರಿಯನ್ನು ಮಳೆಗಾಲ ಮುಗಿದಾಕ್ಷಣ ಕೈಗೆತ್ತಿಕೊಳ್ಳದಿದ್ದರೆ ರಾಜ್ಯ ಮತ್ತು ಕೇಂದ್ರ ಸರಕಾರದ ವಿರುದ್ಧ ಉಚ್ಛ ನ್ಯಾಯಾಲಯದಲ್ಲಿ ದಾವೆ ಹೂಡಲಾಗುವುದು ಎಂದು ಕಳ್ಳಿಗೆ ಗ್ರಾಮ ಪಂಚಾಯತ್ ಉಪಾಧ್ಯಕ್ಷ ಪುರುಷ ಎನ್. ಸಾಲಿಯಾನ್ ಎಚ್ಚರಿಸಿದ್ದಾರೆ.

ಬಧವಾರ ಸಂಜೆ ಬಿ.ಸಿ.ರೋಡ್ ಪ್ರೆಸ್‍ಕ್ಲಬ್‍ನಲ್ಲಿ ಕರೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಪ್ರಧಾನಿ ನರೇಂದ್ರ ಮೋದಿಯವರಿಗೆ ಕಳೆದ ಫೆಬ್ರವರಿ ತಿಂಗಳಲ್ಲಿ ಬರೆದ ಪತ್ರದ ಹಿನ್ನೆಲೆಯಲ್ಲಿ ಪ್ರಧಾನಿಯವರು ತುರ್ತು ಸ್ಪಂದನೆ ನೀಡಿ ಈ ರಸ್ತೆಯ ಬಗ್ಗೆ ಸಂಪೂರ್ಣ ವರದಿ ಸಲ್ಲಿಸುವಂತೆ ರಾಜ್ಯ ಸರಕಾರದ ಮುಖ್ಯ ಕಾರ್ಯದರ್ಶಿಯವರಿಗೆ ಸೂಚನೆ ನೀಡಿದ್ದರು. ಅದರಂತೆ ಬಂಟ್ವಾಳ ಜಿಪಂನ ಕಾರ್ಯನಿರ್ವಾಹನ ಎಂಜಿನಿಯವರು ಸ್ಥಳ ಪರಿಶೀಲನೆ ನಡೆಸಿ ಈ ರಸ್ತೆ ಸಂಪೂರ್ಣ ಹದೆಗೆಟ್ಟಿದ್ದು ಪುನರ್ ನಿರ್ಮಾಣ ಕಾಮಗಾರಿಗೆ ಒಟ್ಟು ಮೂರೂವರೆ ಕೋಟಿ ರೂಪಾಯಿ ಅನದಾನ ಅವಶ್ಯಕತೆಯಿದೆ ಎಂದು ಸರಕಾರಕ್ಕೆ ವರದಿ ಸಲ್ಲಿಸಿದ್ದಾರೆ. ಇದನ್ನು ವಿಶೇಷ ಪ್ರಕರಣವೆಂದು ಪರಿಗಣಿಸಿ ತಕ್ಷಣ ಅನುದಾನ ಬಿಡುಗಡೆಗೊಳಿಸುವಂತೆ ರಾಜ್ಯ ಸರಕಾರದ ಗ್ರಾಮಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯ ಅಪರ ಮುಖ್ಯ ಕಾರ್ಯದರ್ಶಿಯವರಿಗೆ ವರದಿ ಸಲ್ಲಿಸಿದ್ದಾರೆ ಎಂದು ವಿವರಿಸಿದರು.

ಈ ರಸ್ತೆ ಜಿಲ್ಲಾ ಉಸ್ತುವಾರಿ ಸಚಿವ ರಮಾನಾಥ ರೈ ಅವರ ಸ್ವ ಗ್ರಾಮದಲ್ಲಿ ಇದ್ದು. ಇದೇ ರಸ್ತೆಯಲ್ಲಿ ಅವರು ದಿನನಿತ್ಯ ಓಡಾಡುತ್ತಿದ್ದಾರೆ. ಸಚಿವರ ಸಹಿತ ಸಂಸದರ ಗಮನಕ್ಕೂ ರಸ್ತೆ ಅಭಿವೃದ್ಧಿಗೆ ಕೋರಿ ಮನವಿ ಸಲ್ಲಿಸಲಾಗಿದೆ ಎಂದ ಅವರು, ಇವರಿಂದ ಯಾವುದೇ ಸ್ಪಂದನೆ ದೊರೆಯದ ಹಿನ್ನೆಲೆಯಲ್ಲಿ ಕಳೆದ ಫೆಬ್ರವರಿ ತಿಂಗಳಲ್ಲಿ ಪ್ರಧಾನಿಯವರಿಗೆ ಪತ್ರ ಬರೆಯಲಾಗಿತ್ತು. ಇದೀಗ ಈ ರಸ್ತೆಯ ಅಭಿವೃದ್ಧಿಗೆ ಅನುದಾನ ಬಿಡುಗಡೆಯಾಗುವ ನಿರೀಕ್ಷೆಯಲ್ಲಿದ್ದೇವೆ. ಇಲ್ಲದಿದ್ದಲ್ಲಿ ನ್ಯಾಯಾಲಯದ ಮೊರೆ ಹೋಗಲಾಗುವುದು. ಇದರ ಹಿಂದೆ ಯಾವುದೇ ರಾಜಕೀಯ ದುರುದ್ದೇಶವಿಲ್ಲ. ಗ್ರಾಮದ ಹಿತ ದೃಷ್ಠಿಯಿಂದ ಈ ನಿರ್ಧಾರಕ್ಕೆ ಬಂದಿದ್ದೇವೆ ಎಂದು ಪ್ರಶ್ನೆಯೊಂದಕ್ಕೆ ಸ್ಪಷ್ಟಪಡಿಸಿದರು.

ಅದೇ ರೀತಿ ಕಳ್ಳಿಗೆ ಗ್ರಾಮದ ಸಮಗ್ರ ಅಭಿವೃದ್ಧಿಯ ದೃಷ್ಟಿಯಿಂದ ಕಳ್ಳಿಗೆ ಗ್ರಾಮವನ್ನು ಸ್ಮಾರ್ಟ್ ವಿಲೇಜ್ ಯೋಜನೆಗ ಸೇರಿಸಿಕೊಳ್ಳಲು ಪ್ರಧಾನಿಯವರ ಬಳಿಗೆ ಗ್ರಾಮಸ್ಥರ ನಿಯೋಗವೊಂದನ್ನು ಕರೆದೊಯ್ಯಲು ನಿರ್ಧರಿಸಲಾಗಿದೆ. ಈ ಸಂಬಂಧ ಪ್ರಧಾನಿಯವರ ಅನುಮತಿಗಾಗಿ ಕಾಯಲಾಗುತ್ತಿದೆ ಎಂದರು.

ಸುದ್ದಿಗೋಷ್ಠಿಯಲ್ಲಿ ಗ್ರಾಪಂ ಸದಸ್ಯ ಮಹೇಶ್ ಚಂದ್ರಿಗೆ, ಬ್ರಹ್ಮರಕೊಟ್ಲು ಸರಕಾರಿ ಶಾಲಾ ಎಸ್‍ಡಿಎಂಸಿ ಅಧ್ಯಕ್ಷ ಮಾಧವ ಎಂ. ಪೂಜಾರಿ, ಕಳ್ಳಿಗೆ ಗ್ರಾಮ ಸಮಿತಿ ಬಿಜೆಪಿಯ ಪ್ರ.ಕಾರ್ಯದರ್ಶಿ ನವೀನ್ ಪೆರಿಯೋಡಿ, ಮನೋಜ್ ವಳವೂರು ಉಪಸ್ಥಿತರಿದ್ದರು.

About sudina

Check Also

ಖಡಕ್ ಐಪಿಎಸ್ ಅಧಿಕಾರಿ ಮಧುಕರ್ ಶೆಟ್ಟಿ ವಿಧಿವಶ

ಹೈದರಾಬಾದ್ : ಖಡಕ್ ಮತ್ತು ಜನಾನುರಾಗಿ ಎಂದು ಹೆಸರು ಪಡೆದಿದ್ದ ಹಿರಿಯ ಐಪಿಎಸ್ ಅಧಿಕಾರಿ ಮಧುಕರ್ ಶೆಟ್ಟಿ ವಿಧಿವಶರಾಗಿದ್ದಾರೆ. ಅವರಿಗೆ …

Leave a Reply

Your email address will not be published. Required fields are marked *

error: Content is protected !!