ಬಂಟ್ವಾಳ: ತಾಲೂಕಿನ ಬಹುತೇಕ ಗೂಡಂಗಡಿಗಳಲ್ಲಿ ಅಕ್ರಮವಾಗಿ ಸಾರಾಯಿ ಮಾರಾಟ ಮಾಡಲಾಗುತ್ತಿದ್ದು, ಇದನ್ನು ತಡೆಗಟ್ಟಲು ಅಬಕಾರಿ ಇಲಾಖೆಯ ಜೊತೆ ಪೊಲೀಸ್ ಇಲಾಖೆ ಕೈಜೋಡಿಸಿ ಕಟ್ಟುನಿಟ್ಟಿನ ಕ್ರಮಕೈಗೊಳ್ಳಬೇಕು ಎಂದು ಪರಿಶಿಷ್ಟಜಾತಿ ಮತ್ತು ಪರಿಶಿಷ್ಟ ಪಂಗಡದ ಸಭೆಯಲ್ಲಿ ಒತ್ತಾಯ ಕೇಳಿ ಬಂದಿದೆ. ಭಾನುವಾರ ಬಂಟ್ವಾಳ ನಗರ ಠಾಣೆ, ಬಂಟ್ವಾಳ ಗ್ರಾಮಾಂತರ ಠಾಣೆ ಮತ್ತು ಟ್ರಾಫಿಕ್ ಪೋಲೀಸ್ ಠಾಣಾ ವ್ಯಾಪ್ತಿಯ ಪರಿಶಿಷ್ಟಜಾತಿ ಮತ್ತು ಪರಿಶಿಷ್ಟ ಪಂಗಡದ ಬಂಟ್ವಾಳ ನಗರ ಠಾಣೆಯಲ್ಲಿ ನಡೆದ ಕುಂದುಕೊರತೆಗಳ ಸಭೆಯಲ್ಲಿ ಈ ವಿಷಯ ಪ್ರಸ್ತಾಪಿಸಲಾಯಿತು.
ಈ ಬಗ್ಗೆ ಅಬಕಾರಿ ಇನ್ಸ್ಪೆಕ್ಟರ್ ಸುಬ್ರಮಣ್ಯ ಮಾತನಾಡಿ ಅಂತಹ ಪ್ರಕರಣಗಳು ಕಂಡುಬಂದಲ್ಲಿ ತಮ್ಮ ಗಮನಕ್ಕೆ ತಂದರೆ ಕಾನೂನು ಕ್ರಮ ಕೈಗೊಳ್ಳುವ ಬಗ್ಗೆ ಭರವಸೆ ನೀಡಿದರು.