ಬಂಟ್ವಾಳ: ದ.ಕ. ಜಿಲ್ಲಾ ಗ್ಯಾರೇಜು ಮಾಲಕರ ಸಂಘ ಬಂಟ್ವಾಳ ವಲಯದ ವತಿಯಿಂದ ವನಮಹೋತ್ಸವ ಕಾರ್ಯಕ್ರಮ ಭಾನುವಾರ ಬೆಳಿಗ್ಗೆ ಬಿ.ಸಿ.ರೋಡಿನ ಕೈಕಂಬದಲ್ಲಿ ನಡೆಯಿತು.
ರಾಷ್ಟ್ರೀಯ ಹೆದ್ದಾರಿಯ ಮಧ್ಯೆ ಇರುವ ರಸ್ತೆ ವಿಭಜಕದಲ್ಲಿ ಆಕರ್ಷಕ ಹೂವಿನ ಗಿಡಗಳನ್ನು ನೆಟ್ಟು ಜಾನುವಾರುಗಳಿಂದ ರಕ್ಷಿಸಲು ತಂತಿ ಬೇಲಿಗಳನ್ನು ಅಳವಡಿಸಲಾಯಿತು. ಕೈಕಂಬದಿಂದ ತಲಪಾಡಿಯವರೆಗೆ ರಸ್ತೆ ವಿಭಜಕದಲ್ಲಿ ಗಿಡಗಳನ್ನು ನೆಡಲಾಯಿತು. ಈ ಸಂದರ್ಭ ಸಂಘದ ಗೌರವ ಸಲಹೆಗಾರ ಸುಧಾಕರ ಸಾಲ್ಯಾನ್ ಸುದ್ದಿಗಾರರೊಂದಿಗೆ ಮಾತಾನಾಡಿ ಗ್ಯಾರೇಜು ಮಾಲಕರ ಸಂಘ ಹಲವಾರು ಸಮಾಜಮುಖಿ ಕಾರ್ಯಗಳನ್ನು ನಿರಂತರವಾಗಿ ನಡೆಸಿಕೊಂಡು ಬರುತ್ತಿದ್ದು, ಸಮಾಜದ ಗಣ್ಯರಿಂದ ಪ್ರಶಂಸಗೆ ಪಾತ್ರವಾಗಿದೆ. ಆ.21ರಂದು ಭಾನುವಾರ ಸಂಘದ ವತಿಯಿಂದ ಪ್ರತೀ ವರ್ಷದಂತೆ ರಕ್ತದಾನ ಶಿಬಿರ ಆಯೋಜಿಸುತ್ತಿರುವುದಾಗಿ ಅವರು ತಿಳಿಸಿದರು.
ಸಂಘದ ಅಧ್ಯಕ್ಷ ರಾಜೇಶ್ ಸಾಲ್ಯಾನ್, ಕಾರ್ಯದರ್ಶಿ ಜಗದೀಶ ರೈ, ಖಜಾಂಚಿ ವಿಶ್ವನಾಥ ಬಿ., ಉಪಾಧ್ಯಕ್ಷರಾದ ರಾಜೇಂದ್ರ, ಸುಧೀರ್, ಜತೆಕಾರ್ಯದರ್ಶಿಗಳಾದ ರಮೇಶ್ ಭಂಡಾರಿ, ಭಾಸ್ಕರ ಕುಲಾಲ್, ಸಂಘಟನಾ ಕಾರ್ಯದರ್ಶಿ ಗಣೇಶ್ ಸುವರ್ಣ ತುಂಬೆ, ಮಾಜಿ ಅಧ್ಯಕ್ಷ ಸುಧಾಕರ ಸಾಲ್ಯಾನ್ ಹಾಗೂ ಸದಸ್ಯರು ಪಾಲ್ಗೊಂಡಿದ್ದರು.