Wednesday , January 23 2019
ಕೇಳ್ರಪ್ಪೋ ಕೇಳಿ
Home / News NOW / `ಜನಸಾಮಾನ್ಯನಿಗೂ ಕಾನೂನಿನ ಅರಿವೂ ಮೂಡಬೇಕು’

`ಜನಸಾಮಾನ್ಯನಿಗೂ ಕಾನೂನಿನ ಅರಿವೂ ಮೂಡಬೇಕು’

ಬಂಟ್ವಾಳ: ಪ್ರತಿಯೊಬ್ಬ ಜನಸಾಮಾನ್ಯನಿಗೂ ಕಾನೂನಿನ ಅರಿವೂ ಮೂಡಬೇಕು ಎನ್ನುವ ಹಿತದೃಷ್ಟಿಯಿಂದ ನಿರಂತರವಾಗಿ ಕಾನೂನು ಮಾಹಿತಿ ಕಾರ್ಯಕ್ರಮಗಳನ್ನು ನಡೆಸಿಕೊಂಡು ಬರಲಾಗುತ್ತಿದ್ದು ಪ್ರತಿಯಬ್ಬರೂ ಇದರ ಪ್ರಯೋಜನ ಪಡೆದುಕೊಳ್ಳಬೇಕು ಎಂದು ಪ್ರಧಾನ ಸಿವಿಲ್ ನ್ಯಾಯಾಧೀಶ ಆರ್.ಮಹೇಶ್ ಹೇಳಿದ್ದಾರೆ. ತಾಲೂಕು ಕಾನೂನು ಸೇವೆಗಳ ಸಮಿತಿ ಬಂಟ್ವಾಳ, ವಕೀಲರ ಸಂಘ ಬಂಟ್ವಾಳ, ಸೌತ್ ಕೆನರಾ ಪೊಟೋಗ್ರಾಫರ್ಸ್ ಅಸೋಸಿಯೇಷನ್ ಬಂಟ್ವಾಳ ವಲಯ ಹಾಗೂ ಬೊಂಡಾಲ ಜಗನ್ನಾಥ ಶೆಟ್ಟಿ ಸ್ಮಾರಕ ಸರ್ಕಾರಿ ಪ್ರೌಢಶಾಲೆ ಶಂಭೂರು ಇದರ ಸಂಯುಕ್ತ ಆಶ್ರಯದಲ್ಲಿ ಶನಿವಾರ ಶಂಭೂರು ಪ್ರೌಢಶಾಲೆಯಲ್ಲಿ ನಡೆದ ಕಾನೂನು ಮಾಹಿತಿ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.

ಶಂಭೂರು ಪ್ರೌಢಶಾಲೆಯ ಶಾಲಾಭಿವೃದ್ಧಿ ಸಮಿತಿ ಅಧ್ಯಕ್ಷ ಸಚ್ಚಿದಾನಂದ ಶೆಟ್ಟಿ ಅಧ್ಯಕ್ಷತೆ ವಹಿಸಿದ್ದರು. ಮುಖ್ಯ ಅತಿಥಿಗಳಾಗಿ ತಾಲೂಕು ವಕೀಲರ ಸಂಘದ ಅಧ್ಯಕ್ಷ ವೆಂಕಟರಮಣ ಶೆಣೈ, ಸಹಾಯಕ ಸರ್ಕಾರಿ ವಕೀಲ ಸತೀಶ್‍ಕುಮಾರ್ ಶಿವಗಿರಿ, ಎಸ್‍ಕೆಪಿಎ ಅಧ್ಯಕ್ಷ ಸುಕುಮಾರ ಬಂಟ್ವಾಳ, ಶಾಲಾ ಮುಖ್ಯೋಪಾಧ್ಯಾಯ ಕಮಲಾಕ್ಷ ಭಾಗವಹಿಸಿದ್ದರು. ಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಿಸಿದ್ದ ನ್ಯಾಯವಾದಿ ಎಂ.ಸುದರ್ಶನ ಕುಮಾರ್ ಪೋಕ್ಸೋ ಕಾಯ್ದೆ 2015ರ ಬಗ್ಗೆ ಮಾಹಿತಿ ನೀಡಿದರು. ಎಸ್‍ಕೆಪಿಎ ಕಾರ್ಯದರ್ಶಿ ಹರೀಶ್ ಕುಂದರ್ ಸ್ವಾಗತಿಸಿ, ನ್ಯಾಯವಾದಿ ರವೀಂದ್ರ ಕುಕ್ಕಾಜೆ ಪ್ರಾಸ್ತಾವಿಕವಾಗಿ ಮಾತನಾಡಿದರು, ವಕೀಲರ ಸಂಘದ ಮಾಜಿ ಅಧ್ಯಕ್ಷ ಶ್ರೀಧರ ಪೈ ವಂದಿಸಿದರು, ಎಸ್‍ಕೆಪಿಎ ಜಿಲ್ಲಾ ಕೋಶಾಧಿಕಾರಿ ದಯಾನಂದ ಬಂಟ್ವಾಳ ನಿರೂಪಿಸಿದರು.

About sudina

Check Also

ಖಡಕ್ ಐಪಿಎಸ್ ಅಧಿಕಾರಿ ಮಧುಕರ್ ಶೆಟ್ಟಿ ವಿಧಿವಶ

ಹೈದರಾಬಾದ್ : ಖಡಕ್ ಮತ್ತು ಜನಾನುರಾಗಿ ಎಂದು ಹೆಸರು ಪಡೆದಿದ್ದ ಹಿರಿಯ ಐಪಿಎಸ್ ಅಧಿಕಾರಿ ಮಧುಕರ್ ಶೆಟ್ಟಿ ವಿಧಿವಶರಾಗಿದ್ದಾರೆ. ಅವರಿಗೆ …

Leave a Reply

Your email address will not be published. Required fields are marked *

error: Content is protected !!