Monday , September 24 2018
ಕೇಳ್ರಪ್ಪೋ ಕೇಳಿ
Home / News NOW / ಬಸ್ ಮುಷ್ಕರ ಕೊನೆಗೂ ಅಂತ್ಯ : ರಸ್ತೆಗಿಳಿದಿವೆ ಬಸ್‍ಗಳು

ಬಸ್ ಮುಷ್ಕರ ಕೊನೆಗೂ ಅಂತ್ಯ : ರಸ್ತೆಗಿಳಿದಿವೆ ಬಸ್‍ಗಳು

ಬೆಂಗಳೂರು : ವೇತನ ಹೆಚ್ಚಳ ಸೇರಿದಂತೆ ವಿವಿಧ ಬೇಡಿಕೆ ಈಡೇರಿಗೆಗೆ ಒತ್ತಾಯಿಸಿ ಮೂರು ದಿನಗಳಿಂದ ಸಾರಿಗೆ ನೌಕರರು ನಡೆಸುತ್ತಿದ್ದ ಮುಷ್ಕರ ಅಂತ್ಯವಾಗಿದೆ. ಸರ್ಕಾರ ಮತ್ತು ಸಾರಿಗೆ ನೌಕರರ ನಡುವಿನ ಮಾತುಕತೆ ಯಶಸ್ವಿಯಾಗಿದೆ.. ಹೀಗಾಗಿ, ಸಿಬ್ಬಂದಿ ಮತ್ತೆ ಕೆಲಸಕ್ಕೆ ಹಾಜರಾಗಿದ್ದಾರೆ.

ಇಂದು ಬೆಳಗ್ಗೆ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಜೊತೆ ಸಾರಿಗೆ ಸಂಘಟನೆಗಳ ಮುಖಂಡರು ಚರ್ಚೆ ನಡೆಸಿದರು. ಈ ವೇಳೆ ಶೇ.18ರಷ್ಟು ವೇತನ ಹೆಚ್ಚಳಕ್ಕೆ ಒತ್ತಾಯಿಸಿದ್ದರು. ಆದರೆ, ಸರ್ಕಾರ ತಾನು ಈ ಹಿಂದೆ ಹೇಳಿದ್ದಂತೆ ಶೇ.10ಕ್ಕಿಂತ ಹೆಚ್ಚು ವೇತನ ಸಾಧ್ಯವಿಲ್ಲ ಎಂದು ಹೇಳಿತು. ಮಧ್ಯಾಹ್ನ ನಡೆದ ಮತ್ತೊಂದು ಸುತ್ತಿನ ಮಾತುಕತೆಯಲ್ಲಿ ಶೇ.12.5ರಷ್ಟು ವೇತನ ಹೆಚ್ಚಳಕ್ಕೆ ಸಂಘದ ಸದಸ್ಯರು ಸಮ್ಮತಿ ಸೂಚಿಸಿದರು. ಈ ಮೂಲಕ ಹೋರಾಟಕ್ಕೆ ಜಯ ಸಿಕ್ಕ ಸಂಭ್ರಮದಲ್ಲಿ ಸಿಬ್ಬಂದಿ ಇದ್ದರು. ಇನ್ನು, ಮೂರು ದಿನ ಕೆಲಸಕ್ಕೆ ರಜೆ ಹಾಕಿದ್ದರಿಂದ ಸಿಬ್ಬಂದಿ ಸಂಬಳ ಕಡಿತ ಮಾಡಲಾಗುವುದು ಎಂದು ಕೆಎಸ್‍ಆರ್‍ಟಿಸಿ ಎಂಡಿ ಕಠಾರಿಯಾ ಹೇಳಿದ್ದಾರೆ.

About sudina

Check Also

ಬಂಟ್ವಾಳ : ವಿವಿಧ ಸುದ್ದಿಗಳ ಒಂದು ನೋಟ

ಸೋಣ ಅಮಾವಾಸ್ಯೆ ತೀರ್ಥಸ್ನಾನ : ಭೂಲೋಕದ ಕೈಲಾಸವೆಂದೇ ಪ್ರಖ್ಯಾತವಾದ ನರಹರಿ ಪರ್ವತದಲ್ಲಿ ಸೆಪ್ಟೆಂಬರ್ 9ರ ಭಾನುವಾರ ಬೆಳಗ್ಗೆ 5 ಗಂಟೆಯಿಂದ …

Leave a Reply

Your email address will not be published. Required fields are marked *

error: Content is protected !!