Monday , December 10 2018
ಕೇಳ್ರಪ್ಪೋ ಕೇಳಿ
Home / Sandalwood / ನಾಗತಿಹಳ್ಳಿ ಚಂದ್ರಶೇಖರ್, ಹರಿಣಿ ಮತ್ತು ರಾಜನ್‍ರಿಗೆ ರಾಜ್ಯ ಪ್ರಶಸ್ತಿ

ನಾಗತಿಹಳ್ಳಿ ಚಂದ್ರಶೇಖರ್, ಹರಿಣಿ ಮತ್ತು ರಾಜನ್‍ರಿಗೆ ರಾಜ್ಯ ಪ್ರಶಸ್ತಿ

ಬೆಂಗಳೂರು : ಹಿರಿಯ ನಟಿ ಹರಿಣಿ, ಖ್ಯಾತ ನಿರ್ದೇಶಕ ನಾಗತಿಹಳ್ಳಿ ಚಂದ್ರಶೇಖರ್ ಮತ್ತು ಖ್ಯಾತ ಸಂಗೀತ ನಿರ್ದೇಶಕ ರಾಜನ್‍ರಿಗೆ 2015ರ ರಾಜ್ಯ ಚಲನಚಿತ್ರ ಪ್ರಶಸ್ತಿ ಸಂದಿದೆ. ಡಾ.ರಾಜ್ ಅಭಿನಯದ ಬಹುತೇಕ ಚಿತ್ರಗಳಲ್ಲಿ ಕಾಣಿಸಿಕೊಂಡಿದ್ದ ನಟಿ ಹರಿಣಿ ಅವರಿಗೆ ಡಾ.ರಾಜ್‍ಕುಮಾರ್ ಪ್ರಶಸ್ತಿ ಲಭಿಸಿದೆ. ನಾಗತಿಹಳ್ಳಿ ಚಂದ್ರಶೇಖರ್ ಅವರಿಗೆ ಪುಟ್ಟಣ್ಣ ಕಣಗಾಲ್ ಪ್ರಶಸ್ತಿ ಮತ್ತು ಸಂಗೀತ ನಿರ್ದೇಶಕ ರಾಜನ್ ಅವರು ಡಾ.ವಿಷ್ಣುವರ್ಧನ್ ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆ.

2015ರ ಸಾಲಿನ ಪ್ರಶಸ್ತಿಯನ್ನು ಎರಡು ತಿಂಗಳ ಹಿಂದೆಯೇ ಘೋಷಣೆ ಮಾಡಲಾಗಿತ್ತು. ಆದರೆ, ಡಾ.ರಾಜ್‍ಕುಮಾರ್ ಪ್ರಶಸ್ತಿ, ಪುಟ್ಟಣ್ಣ ಕಣಗಾಲ್ ಪ್ರಶಸ್ತಿ ಮತ್ತು ಡಾ.ವಿಷ್ಣುವರ್ಧನ್ ಪ್ರಶಸ್ತಿಗೆ ಮಾತ್ರ ಯಾರನ್ನೂ ಆಯ್ಕೆ ಮಾಡಿರಲಿಲ್ಲ. ಇದಕ್ಕೆಂದು ಹಿರಿಯ ನಿರ್ದೇಶಕ ಭಗವಾನ್, ಹಂಸಲೇಖ ಮತ್ತು ಗಂಗಾಧರ ಮೊದಲಿಯಾರ್ ನೇತೃತ್ವದ ಪ್ರತ್ಯೇಕ ಸಮಿತಿಯನ್ನು ರಚಿಸಲಾಗಿತ್ತು.

About sudina

Check Also

ನಿರ್ದೇಶಕಿ ಪೂರ್ಣಿಮಾ ಮೋಹನ್ ವಿಧಿವಶ

ಬೆಂಗಳೂರು : ಸ್ಯಾಂಡಲ್​ವುಡ್​ ನಿರ್ದೇಶಕಿ ಪೂರ್ಣಿಮಾ ಮೋಹನ್​ ವಿಧಿವಶರಾಗಿದ್ದಾರೆ. ಶುಕ್ರವಾರ ಅವರು ಹೃದಯಾಘಾತದಿಂದ ಕೊನೆಯುಸಿರೆಳೆದಿದ್ದಾರೆ. 48 ವರ್ಷದ ಪೂರ್ಣಿಮಾ ಅವರನ್ನು …

Leave a Reply

Your email address will not be published. Required fields are marked *

error: Content is protected !!