Monday , August 20 2018
ಕೇಳ್ರಪ್ಪೋ ಕೇಳಿ
Home / News NOW / ಪುದು : ರಾಷ್ಟ್ರೀಯ ಹೆದ್ದಾರಿಯ ವಿವಿಧ ಸಮಸ್ಯೆಗಳ ಪರಿಶೀಲನೆ

ಪುದು : ರಾಷ್ಟ್ರೀಯ ಹೆದ್ದಾರಿಯ ವಿವಿಧ ಸಮಸ್ಯೆಗಳ ಪರಿಶೀಲನೆ

ಬಂಟ್ವಾಳ: ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಅಧಿಕಾರಿಗಳ ತಂಡ ಗುರುವಾರ ಪುದು ಗ್ರಾಮಪಂಚಾಯಿತಿಗೆ ಭೇಟಿ ನೀಡಿ ಪುದು ಗ್ರಾಮಪಂಚಾಯಿತಿ ವ್ಯಾಪ್ತಿಗೊಳಪಡುವ ರಾಷ್ಟ್ರೀಯ ಹೆದ್ದಾರಿಯ ವಿವಿಧ ಸಮಸ್ಯೆಗಳನ್ನು ಪರಿಶೀಲಿಸಿತು. ಕಳೆದ ಸೋಮವಾರ ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯ ಉಮ್ಮರ್‍ಫಾರೂಕ್ ನೇತೃತ್ವದ ಪುದು ಪಂಚಾಯಿತಿ ಸದಸ್ಯರ ನಿಯೋಗ ರಾಷ್ಟ್ರೀಯ ಹೆದ್ದಾರಿ ಇಲಾಖೆಯ ಇಂಜಿನಿಯರ್ ಅಜಿತ್ ಕುಮಾರ್ ಅವರನ್ನು ಭೇಟಿ ಮಾಡಿ ಇಲ್ಲಿನ ಸಮಸ್ಯೆಗಳ ಬಗ್ಗೆ ಮನವರಿಕೆ ಮಾಡಿತ್ತು. ಆ ಹಿನ್ನಲೆಯಲ್ಲಿ ಅಧಿಕಾರಿಗಳ ತಂಡ ಫರಂಗಿಪೇಟೆ ಹಾಗೂ ಮಾರಿಪಳ್ಳದಲ್ಲಿ ಪರಿಶೀಲನೆ ನಡೆಸಿತು.

ಪುದು ಗ್ರಾಮಪಂಚಾಯಿತಿ ವ್ಯಾಪ್ತಿಯ ಸುಜೀರು ಬಳಿ ಪಾದಚಾರಿಗಳು ರಸ್ತೆ ದಾಟಲು ಮೇಲ್ಸೆತುವೆ ನಿರ್ಮಾಣ ಮಾಡುವಂತೆ ಸ್ಥಳೀಯರು ಅಧಿಕಾರಿಗಳ ಗಮನಕ್ಕೆ ತಂದರು. ಸದ್ಯಕ್ಕೆ ಸ್ಥಳದಲ್ಲಿ ಹೆಚ್ಚುವರಿ ಬ್ಯಾರಿಕೇಡ್‍ಗಳನ್ನು ಅಳವಡಿಸಿ ರಸ್ತೆ ಸುರಕ್ಷತಾ ಫಲಕಗಳನ್ನು ಅಳವಡಿಸಲಾಗುವುದು ಎಂದು ಅಧಿಕಾರಿಗಳು ಭರವಸೆ ನೀಡಿದರು. ಫರಂಗಿಪೇಟೆಯಿಂದ ಮಾರಿಪಳ್ಳದವರೆಗೆ ರಸ್ತೆ ಬದಿಯಲ್ಲಿ ಚರಂಡಿ ನಿರ್ಮಾಣ, ಫರಂಗಿಪೇಟೆಯ ಬಸ್ಸು ನಿಲ್ದಾಣದ ಸುವ್ಯವಸ್ಥೆ, ಜಂಕ್ಷನ್‍ನಲ್ಲಿರುವ ರಸ್ತೆ ವಿಭಜಕಗಳಲ್ಲಿರುವ ಪ್ರವೇಶ ರಸ್ತೆಗಳ ಸ್ಥಳಾಂತರ, ಪ್ರಮುಖ ಸ್ಥಳಗಳಲ್ಲಿ ಬಸ್‍ಬೇ ನಿರ್ಮಾಣ ಸೇರಿದಂತೆ ಇನ್ನಿತರ ಸಮಸ್ಯೆಗಳನ್ನು ಅಧಿಕಾರಿಗಳ ಗಮನಕ್ಕೆ ತರಲಾಯಿತು. ಪಂಚಾಯಿತಿನ ಮನವಿಗೆ ಸ್ಪಂದಿಸಿದ ರಾಷ್ಟ್ರೀಯ ಹೆದ್ದಾರಿ ಇಲಾಖೆಯ ಅಧಿಕಾರಿ ಅಜಿತ್‍ಕುಮಾರ್ ಸಮಸ್ಯೆ ಪರಿಹರಿಸುವ ನಿಟ್ಟಿನಲ್ಲಿ ಶೀಘ್ರ ಕಾಮಗಾರಿ ಆರಂಭಿಸುವುದಾಗಿ ತಿಳಿಸಿದರು.

ಈ ಸಂಧರ್ಭ ಜಿ.ಪಂ.ಮಾಜಿ ಸದಸ್ಯ ಉಮ್ಮರ್‍ಫಾರೂಕ್, ಪುದು ಗ್ರಾ.ಪಂ.ಅಧ್ಯಕ್ಷೆ ಆತೀಕಾ, ಉಪಾಧ್ಯಕ್ಷ ಹಾಶೀರ್ ಪೇರಿಮಾರ್, ಸದಸ್ಯರಾದ ರಮ್ಲಾನ್, ಝಾಹೀರ್, ಇಕ್ಬಾಲ್ ಮಾರಿಪಳ್ಳ, ರಫೀಕ್, ಎಂ.ಕೆ.ಮಹಮ್ಮದ್, ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಪವನ್, ಗುತ್ತಿಗೆದಾರ ರಾಮಚಂದ್ರ ಹಾಜರಿದ್ದರು.

About sudina

Check Also

ದೇಶಕಂಡ ಅಪ್ರತಿಮ ನಾಯಕ, ಅಜಾತ ಶತ್ರು ಇನ್ನಿಲ್ಲ

ನವದೆಹಲಿ : ಮಾಜಿ ಪ್ರಧಾನಿ, ಅಜಾತ ಶತ್ರು ಅಟಲ್ ಬಿಹಾರಿ ವಾಜಪೇಯಿ ವಿಧಿವಶರಾಗಿದ್ದಾರೆ. ಏಮ್ಸ್ ಆಸ್ಪತ್ರೆಯಲ್ಲಿ ವಾಜಪೇಯಿ ಕೊನೆಯುಸಿರೆಳೆದಿದ್ದಾರೆ. ಅವರಿಗೆ …

Leave a Reply

Your email address will not be published. Required fields are marked *

error: Content is protected !!