Saturday , February 16 2019
ಕೇಳ್ರಪ್ಪೋ ಕೇಳಿ
Home / News NOW / ಕಾವಳಪಡೂರು : ಪ್ರತಿಭಾ ಕಾರಂಜಿ ಮತ್ತು ಕಲೋತ್ಸವ

ಕಾವಳಪಡೂರು : ಪ್ರತಿಭಾ ಕಾರಂಜಿ ಮತ್ತು ಕಲೋತ್ಸವ

ಬಂಟ್ವಾಳ ಬ್ಯುರೋ ವರದಿ
ಬಂಟ್ವಾಳ: ತಾಲೂಕಿನ ಕಾವಳಪಡೂರು ವಗ್ಗ ಸ.ಪೂ.ಕಾಲೇಜಿನ ಪ್ರೌಢಶಾಲಾ ವಿಭಾಗದಲ್ಲಿ ಸಾರ್ವಜನಿಕ ಶಿಕ್ಷಣ ಇಲಾಖೆ, ದ.ಕ. ಜಿ.ಪಂ. ಉಪ ನಿರ್ದೇಶಕರ ಕಚೇರಿ, ಬಂಟ್ವಾಳ ಕ್ಷೇತ್ರ ಶಿಕ್ಷಣಾಕಾರಿ ಕಚೇರಿ, ಕ್ಷೇತ್ರ ಸಂಪನ್ಮೂಲ ಕೇಂದ್ರ ಮತ್ತು ವಗ್ಗ ಸ.ಪ.ಪೂ ಕಾಲೇಜು ಪ್ರೌಢ ಶಾಲಾ ವಿಭಾಗದ ಸಂಯುಕ್ತ ಆಶ್ರಯದಲ್ಲಿ ಎರಡು ದಿನಗಳ ಕಾಲ ನಡೆದ ದ.ಕ. ಜಿಲ್ಲಾ ಮಟ್ಟದ ಪ್ರತಿಭಾ ಕಾರಂಜಿ ಮತ್ತು ಕಲೋತ್ಸವ-2016 ಮಂಗಳವಾರ ಸಂಜೆ ತೆರೆ ಬಿದ್ದಿದೆ.

ಜಿಲ್ಲಾ ಮಟ್ಟದ ಸ್ಪರ್ಧೆಗಳಲ್ಲಿ ಕಿರಿಯ ವಿಭಾಗದಲ್ಲಿ ಬಂಟ್ವಾಳ ತಾಲೂಕು ಮತ್ತು ಹಿರಿಯ ವಿಭಾಗದಲ್ಲಿ ಪುತ್ತೂರು ತಾಲೂಕು ಹಾಗೂ ಪ್ರೌಢ ವಿಭಾಗದಲ್ಲಿ ಮೂಡಬಿದಿರೆ ತಾಲೂಕು ಸಮಗ್ರ ಪ್ರಶಸ್ತಿ ಪಡೆದವು.
sಸಮಾರೋಪದ ಅಧ್ಯಕ್ಷತೆ ವಹಿಸಿ ಮಾತನಾಡಿದ ಶಾಲಾಭಿವೃದ್ಧಿ ಮತ್ತು ಮೇಲುಸ್ತುವಾರಿ ಸಮಿತಿ ಅಧ್ಯಕ್ಷ ಪಿ.ಜಿನರಾಜ ಆರಿಗ ಅವರು ಪ್ರತಿಭಾ ಕಾರಂಜಿ ಸ್ಪರ್ಧೆಗಳಲ್ಲಿ ತೀರ್ಪುಗಾರರ ಪಾತ್ರ ಮಹತ್ವದ್ದಾಗಿದ್ದು ಮಕ್ಕಳಿಗೆ ಅನ್ಯಾಯವಾಗದ ರೀತಿಯಲ್ಲಿ ಚಾಣಾಕ್ಷತೆಯಿಂದ ನಿರ್ವಹಿಸಬೇಕು. ಸ್ಪರ್ಧೆಯಲ್ಲಿ ಎಲ್ಲರಿಗೂ ಗೆಲುವು ಅಸಾಧ್ಯವಾದರೂ ಅವರ ಪ್ರತಿಭೆಗೆ ತಕ್ಕ ಫಲಿತಾಂಶ ದೊರಕಬೇಕು ಎಂದ ಅವರು ಜಿಲ್ಲಾ ಮಟ್ಟದ ಸ್ಪರ್ಧೆಯ ಫಲಿತಾಂಶಗಳಿಂದ ಮಕ್ಕಳು ಯಾರು ಬೇಸರಗೊಳ್ಳದೆ ಮುಂದಕ್ಕೆ ನಿರಂತರವಾಗಿ ಪ್ರಯತ್ನಿಸಬೇಕು ಎಂದರು.

ಡಯಟ್ ಸಂಸ್ಥೆಯ ಪ್ರಾಂಶುಪಾಲ ಶಿವರಾಮಯ್ಯ, ಸಾ.ಶಿ. ಇಲಾಖೆ ಉಪ ನಿರ್ದೇಶಕ ವಾಲ್ಟರ್ ಡಿಮೆಲ್ಲೊ, ತಾ.ಪಂ. ಸ್ಥಾಯಿ ಸಮಿತಿ ಅಧ್ಯಕ್ಷೆ ಧನಲಕ್ಷ್ಮೀ ಬಂಗೇರ, ಕಾವಳಪಡೂರು ಗ್ರಾ.ಪಂ. ಅಧ್ಯಕ್ಷ ಪ್ರಮೋದ್ ಕುಮಾರ್ ರೈ, ಗ್ರಾ.ಪಂ ಮಾಜಿ ಅಧ್ಯಕ್ಷ ಮಾಣಿಕ್ಯರಾಜ್ ಜೈನ್, ಗ್ರಾ.ಪಂ. ಸದಸ್ಯ ಚಂದ್ರಶೇಖರ ಕರ್ಣ ಸ್ಪರ್ಧಾಳುಗಳನ್ನು ಅಭಿನಂದಿಸಿದರು. ದ.ಕ.ಜಿಲ್ಲಾ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷ ಶಿವಶಂಕರ ಭಟ್, ಸಹ ಶಿಕ್ಷಕರ ಸಂಘದ ಜಿಲ್ಲಾಧ್ಯಕ್ಷ ಸ್ಟಾ ್ಯನಿ ತಾವ್ರೋ, ಉದ್ಯಮಿ ಅಹ್ಮದ್ ತ್ವಾಹ ತನ್ವೀರ್, ಸರ್ವ ಶಿಕ್ಷಾ ಅಭಿಯಾಣ ಅಧಿಕಾರಿ ಜೇಮ್ಸ್, ಸಿಟಿಇ ರೀಡರ್ ಬಸವರಾಜಪ್ಪ, ಡಯಟ್ ನಿರ್ದೇಶಕಿ ಚಂದ್ರಪ್ರಭ, ಸರ್ವ ಶಿಕ್ಷಣ ಅಭಿಯಾನ ಪರಿವೀಕ್ಷಕ ಸದಾನಂದ ಪೂಂಜ, ಅಧಿಕಾರಿ ಗೀತಾ, ಡಯಟ್ ಉಪನ್ಯಾಸಕಿ ಸುಮಂಗಲ ನಾಯಕ್, ಗ್ರಾ.ಪಂ. ಸದಸ್ಯ ವೀರೇಂದ್ರ ಅಮೀನ್, ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ತಾಲೂಕು ಅಧ್ಯಕ್ಷ ಶಿವಪ್ರಕಾಶ್ ರೈ, ಉಪ ನಿರ್ದೇಶಕರ ಕಚೇರಿ ವಿಷಯ ಪರಿವೀಕ್ಷಕ ಪುರುಷೋತ್ತಮ, ರಾಷ್ಟ್ರಪ್ರಶಸ್ತಿ ಪುರಸ್ಕøತ ಶಿಕ್ಷಕ ರಮೇಶ್ ನಾಯಕ್ ರಾಯಿ, ಶಿಕ್ಷಕ ಸಂಘಟನೆಗಳ ಪದಾಧಿಕಾರಿಗಳಾದ ಜೋಯಲ್ ಲೋಬೋ, ತಾರೇಶ್, ಕ್ಷೇತ್ರ ಶಿಕ್ಷಣಾಧಿಕಾರಿ ಲೊಕೇಶ್ ಸಿ., ಸ.ಪ.ಪೂ ಕಾಲೇಜಿನ ಪ್ರಾಂಶುಪಾಲೆ ರೇಖಾ, ತಾಲೂಕು ನೋಡಲ್ ಅಧಿಕಾರಿ ಸುಜಾತ ಆರ್. ಶೆಟ್ಟಿ, ಕ್ಷೇತ್ರ ಸಮನ್ವಯ ಅಧಿಕಾರಿ ರಾಜೇಶ್ ಜಿ., ಶಿಕ್ಷಣ ಸಂಯೋಜಕರು, ಸಿ.ಆರ್.ಪಿ.ಯವರು, ಶಾಲಾ ಶಿಕ್ಷಕ ವೃಂದ, ಕಾಲೇಜು ಉಪನ್ಯಾಸಕ ವೃಂದ, ಸಿಬ್ಬಂದಿಗಳು ಉಪಸ್ಥಿತರಿದ್ದರು.

ಇದೇ ವೇಳೆ 2017-18ರ ಪ್ರತಿಭಾ ಕಾರಂಜಿ ಸ್ಪರ್ಧೆಗಳನ್ನು ನಡೆಸಲು ಪುತ್ತೂರು ತಾಲೂಕಿಗೆ ವೀಳ್ಯ ನೀಡಲಾಯಿತು. ಸ್ಪರ್ಧೆಗಳ ವಿಜೇತರಿಗೆ ಬಹುಮಾನ ವಿತರಿಸಲಾಯಿತು. ಜಿಲ್ಲಾ ನೋಡಲ್ ಅಧಿಕಾರಿ ರಾಧಾಕೃಷ್ಣ ಭಟ್ ಸ್ವಾಗತಿಸಿದರು. ಪ್ರದೀಪ್ ವಿಜೇತರ ವಿವರ ನೀಡಿದರು. ದೈಹಿಕ ಶಿಕ್ಷಣ ಪರಿವೀಕ್ಷಣಾಧಿಕಾರಿ ಗುರುನಾಥ ಬಾಗೇವಾಡಿ ವಂದಿಸಿದರು. ಅನುದಾನಿತ ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷ ಬಿ.ರಾಮಚಂದ್ರ ರಾವ್ ಕಾರ್ಯಕ್ರಮ ನಿರ್ವಹಿಸಿದರು.

About sudina

Check Also

ಖಡಕ್ ಐಪಿಎಸ್ ಅಧಿಕಾರಿ ಮಧುಕರ್ ಶೆಟ್ಟಿ ವಿಧಿವಶ

ಹೈದರಾಬಾದ್ : ಖಡಕ್ ಮತ್ತು ಜನಾನುರಾಗಿ ಎಂದು ಹೆಸರು ಪಡೆದಿದ್ದ ಹಿರಿಯ ಐಪಿಎಸ್ ಅಧಿಕಾರಿ ಮಧುಕರ್ ಶೆಟ್ಟಿ ವಿಧಿವಶರಾಗಿದ್ದಾರೆ. ಅವರಿಗೆ …

Leave a Reply

Your email address will not be published. Required fields are marked *

error: Content is protected !!