Tuesday , February 19 2019
ಕೇಳ್ರಪ್ಪೋ ಕೇಳಿ
Home / News NOW / ತುಳು ಭಾಷೆಯನ್ನು 8ನೇ ಪರಿಚ್ಛೇದಕ್ಕೆ ಸೇರಿಸಿ : ಪ್ರಧಾನಿ ಮೋದಿಗೆ ವೀರೇಂದ್ರ ಹೆಗ್ಗಡೆ ಮನವಿ

ತುಳು ಭಾಷೆಯನ್ನು 8ನೇ ಪರಿಚ್ಛೇದಕ್ಕೆ ಸೇರಿಸಿ : ಪ್ರಧಾನಿ ಮೋದಿಗೆ ವೀರೇಂದ್ರ ಹೆಗ್ಗಡೆ ಮನವಿ

dhl-veerendra hegde21ನವದೆಹಲಿ : ತುಳು ಭಾಷೆಯನ್ನು ಸಂವಿಧಾನದ 8ನೇ ಪರಿಚ್ಛೇದಕ್ಕೆ ಸೇರಿಸಬೇಕೆಂದು ಧರ್ಮಸ್ಥಳದ ಧರ್ಮಾಧಿಕಾರಿ ಡಾ.ವೀರೇಂದ್ರ ಹೆಗ್ಗಡೆ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಮನವಿ ಮಾಡಿಕೊಂಡಿದ್ದಾರೆ. ದೆಹಲಿಯಲ್ಲಿ ಪ್ರಧಾನಿ ಮೋದಿ ಅವರನ್ನು ವೀರೇಂದ್ರ ಹೆಗ್ಗಡೆ ಭೇಟಿಯಾಗಿ ಈ ಬಗ್ಗೆ ಮಾತುಕತೆ ನಡೆಸಿದರು. dhl-veerendra hegde1ಇದಕ್ಕೂ ಮೊದಲು ಗೃಹಸಚಿವ ರಾಜ್‍ನಾಥ್ ಸಿಂಗ್ ಅವರನ್ನೂ ವೀರೇಂದ್ರ ಹೆಗ್ಗಡೆ ಅವರು ಭೇಟಿಯಾಗಿದ್ದರು. ಪ್ರಧಾನಿ ಮೋದಿ ಬಳಿಕ ಮಾತನಾಡಿದ ಅವರು, ತುಳುವನ್ನು 8ನೇ ಪರಿಚ್ಛೇದಕ್ಕೆ ಸೇರಿಸುವಂತೆ ಒತ್ತಾಯಿಸಿದ್ದೇವೆ. ಗಮನಿಸಿ ಪರಿಗಣಿಸುತ್ತೇವೆಂದು ಪ್ರಧಾನಿ ಹೇಳಿದ್ದಾರೆ ಎಂಬುದಾಗಿ ವೀರೇಂದ್ರ ಹೆಗ್ಗಡೆ ಅವರು ತಿಳಿಸಿದ್ದಾರೆ.

About sudina

Check Also

ಖಡಕ್ ಐಪಿಎಸ್ ಅಧಿಕಾರಿ ಮಧುಕರ್ ಶೆಟ್ಟಿ ವಿಧಿವಶ

ಹೈದರಾಬಾದ್ : ಖಡಕ್ ಮತ್ತು ಜನಾನುರಾಗಿ ಎಂದು ಹೆಸರು ಪಡೆದಿದ್ದ ಹಿರಿಯ ಐಪಿಎಸ್ ಅಧಿಕಾರಿ ಮಧುಕರ್ ಶೆಟ್ಟಿ ವಿಧಿವಶರಾಗಿದ್ದಾರೆ. ಅವರಿಗೆ …

Leave a Reply

Your email address will not be published. Required fields are marked *

error: Content is protected !!