Monday , April 23 2018
Home / Sandalwood / ಅರಗಿಣಿಯ `ಪಾಟೀಲ್’ ಇನ್ನಿಲ್ಲ : ಯುವ ನಟ ಹರೀಶ್ ನಿಧನ

ಅರಗಿಣಿಯ `ಪಾಟೀಲ್’ ಇನ್ನಿಲ್ಲ : ಯುವ ನಟ ಹರೀಶ್ ನಿಧನ

ಬೆಂಗಳೂರು : ಸುವರ್ಣ ವಾಹಿನಿಯಲ್ಲಿ ಪ್ರಸಾರವಾಗುತ್ತಿದ್ದ ‘ಅರಗಿಣಿ’ ಧಾರಾವಾಹಿಯಲ್ಲಿ ನಟಿಸಿದ್ದ ನಟ ಹರೀಶ್ ವಿಧಿವಶರಾಗಿದ್ದಾರೆ. ಅನಾರೋಗ್ಯದಿಂದ ಬಳಲುತ್ತಿದ್ದ ಹರೀಶ್ ಬೆಂಗಳೂರಿನ ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ. ಅರಗಿಣಿ ಧಾರಾವಾಹಿ ಮೂಲಕ ಕಿರುತೆರೆಗೆ ಎಂಟ್ರಿ ಕೊಟ್ಟಿದ್ದ ಹರೀಶ್ ಇಲ್ಲಿ ಪಾಟೀಲ್ ಎಂಬ ಪಾತ್ರವನ್ನು ನಿರ್ವಹಿಸಿದ್ದರು.

ಜಾಂಡೀಸ್ ಮತ್ತು ಡೆಂಗ್ಯೂನಿಂದ ಬಳಲುತ್ತಿದ್ದ ಹರೀಶ್‍ರನ್ನು ವಿಕ್ಟೋರಿಯಾ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ, ಚಿಕಿತ್ಸೆ ಫಲಕಾರಿಯಾಗದೆ ಇವರು ಕೊನೆಯುಸಿರೆಳೆದಿದ್ದಾರೆ. ಇತ್ತೀಚೆಗೆ, ಕಲರ್ಸ್ ಕನ್ನಡ ವಾಹಿನಿಯಲ್ಲಿ ಪ್ರಸಾರವಾಗುತ್ತಿರುವ `ಓಂ ಶಕ್ತಿ ಓಂ ಶಾಂತಿ’ ಧಾರಾವಾಹಿಯಲ್ಲಿ ಹರೀಶ್ ನಟಿಸುತ್ತಿದ್ದರು. ಮೂಲತಃ ಚಿತ್ರದುರ್ಗದ ಆರ್‍ಆರ್ ನಗರದವರಾದ ಹರೀಶ್ ಅಂತ್ಯಕ್ರಿಯೆ ಹುಟ್ಟೂರಿನಲ್ಲೇ ನಡೆಯಲಿದೆ…

About sudina

Check Also

ನಿರ್ದೇಶಕಿ ಪೂರ್ಣಿಮಾ ಮೋಹನ್ ವಿಧಿವಶ

ಬೆಂಗಳೂರು : ಸ್ಯಾಂಡಲ್​ವುಡ್​ ನಿರ್ದೇಶಕಿ ಪೂರ್ಣಿಮಾ ಮೋಹನ್​ ವಿಧಿವಶರಾಗಿದ್ದಾರೆ. ಶುಕ್ರವಾರ ಅವರು ಹೃದಯಾಘಾತದಿಂದ ಕೊನೆಯುಸಿರೆಳೆದಿದ್ದಾರೆ. 48 ವರ್ಷದ ಪೂರ್ಣಿಮಾ ಅವರನ್ನು …

Leave a Reply

Your email address will not be published. Required fields are marked *

error: Content is protected !!