Tuesday , February 19 2019
ಕೇಳ್ರಪ್ಪೋ ಕೇಳಿ
Home / News NOW / ಗುರು ಶಿಷ್ಯ ಪರಂಪರೆಯ ಮಹತ್ವ ಸಾರಿದ್ದ ವಿಶ್ವಕರ್ಮರು

ಗುರು ಶಿಷ್ಯ ಪರಂಪರೆಯ ಮಹತ್ವ ಸಾರಿದ್ದ ವಿಶ್ವಕರ್ಮರು

ಬಂಟ್ವಾಳ : ವಿಶ್ವಕರ್ಮರು ಗುರು ಶಿಷ್ಯ ಪರಂಪರೆಯ ಮಹತ್ವವನ್ನು ಸಾರುವುದರ ಜೊತೆಗೆ ಗುರುಶಿಷ್ಯರ ಬಾಂಧವ್ಯವನ್ನು ಇನ್ನೂ ಉಳಿಸಿ-ಬೆಳೆಸಿಕೊಂಡಿರುವುದು ಹೆಮ್ಮೆಯ ವಿಚಾರ ಎಂದು  ಬಂಟ್ವಾಳ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಮೌನೇಶ ವಿಶ್ವಕರ್ಮ ಹೇಳಿದ್ದಾರೆ. ಬಂಟ್ವಾಳ ತಾಲೂಕು ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿಯ ಆಶ್ರಯದಲ್ಲಿ ಬಿ.ಸಿ.ರೋಡಿನ ಸಾಮಥ್ರ್ಯ ಸೌಧದಲ್ಲಿ ಶನಿವಾರ ನಡೆದ ಬಂಟ್ವಾಳ ತಾಲೂಕು ಮಟ್ಟದ ವಿಶ್ವಕರ್ಮ ಜಯಂತಿಯಲ್ಲಿ ಪ್ರಧಾನ ಭಾಷಣ ಮಾಡಿದರು.

ತಮ್ಮದೇ ಆದ ಜೀವನ ಶೈಲಿ, ಕರ್ತವ್ಯ ಪಾಲನೆಯ ಜೊತೆಗೆ ಎಲ್ಲರಿಗೆ ಬೇಕಾಗುವ ರೀತಿಯಲ್ಲಿ ಸಮಾಜದಲ್ಲಿ ಬಾಳುತ್ತಿರುವ ವಿಶ್ವಕರ್ಮರ ಪಾತ್ರ ಮಹತ್ವದ್ದಾಗಿದೆ ಎಂದರು.

ತಾಲೂಕು ವಿಶ್ವಕರ್ಮ ಸಮಾಜ ಸೇವಾ ಸಂಘದ ಅಧ್ಯಕ್ಷ ಸುಧಾಕರ ಆಚಾರ್ಯ ಮಾರ್ನಬೈಲು ಅಧ್ಯಕ್ಷತೆ ವಹಿಸಿ ಮಾತನಾಡಿ, ಮುಂದಿನ ವರ್ಷಗಳಿಂದ  ವಿಶ್ವಕರ್ಮ ಜಯಂತಿಯನ್ನು ಮತ್ತಷ್ಟು ವಿಜೃಂಭಣೆಯಿಂದ ನಡೆಸುವ ನಿಟ್ಟಿನಲ್ಲಿ ಯೋಜನೆ ರೂಪಿಸಲಾಗುವುದು ಎಂದರು.

ಸಂಘದ ಗೌರವಾಧ್ಯಕ್ಷ ಮನೋಜ್ ಆಚಾರ್ಯ ಮಾತನಾಡಿ, ಕೇಂದ್ರ ಹಾಗೂ ರಾಜ್ಯ ಸರ್ಕಾರ ವಿಶ್ವಕರ್ಮ ಜಯಂತಿಯನ್ನು ಆಚರಿಸುತ್ತಿರುವುದು ಇಡೀ ವಿಶ್ವಕರ್ಮ ಸಮಾಜಕ್ಕೆ ಹೆಮ್ಮೆಯ ಸಂಗತಿ ಎಂದರು. ತಾಲೂಕು ಪಂಚಾಯತ್ ಉಪಾಧ್ಯಕ್ಷ ಅಬ್ಬಾಸ್ ಆಲಿ ಮಾತನಾಡಿ, ಸರ್ಕಾರದಿಂದ ಸಿಗುವ ಸವಲತ್ತುಗಳನ್ನು ಸಮರ್ಪಕವಾಗಿ ಬಳಸಿಕೊಳ್ಳುವ ಜೊತೆಯಲ್ಲಿ ವಿಶ್ವಕರ್ಮ ಸಮಾಜ ಮತ್ತಷ್ಟು ಅಭಿವೃದ್ದಿಯನ್ನು ಕಾಣಲಿ ಎಂದು ಹಾರೈಸಿದರು. ಪ್ರಾಸ್ತಾವಿಕವಾಗಿ ಮಾತನಾಡಿದ ಬಂಟ್ವಾಳ ತಹಶೀಲ್ದಾರ್ ಪುರಂದರ ಹೆಗ್ಡೆ, ಸರ್ಕಾರವೇ ವಿಶ್ವಕರ್ಮ ಜಯಂತಿಯನ್ನು ಆಚರಿಸುವ ಸಂಪ್ರದಾಯಕ್ಕೆ ನಾಂದಿ ಹಾಡಿ ಕರ್ನಾಟಕದಲ್ಲಿ ಹೊಸ ಇತಿಹಾಸ ನಿರ್ಮಾಣವಾಗಿದೆ ಎಂದರು.

ವೇದಿಕೆಯಲ್ಲಿ ಪುರಸಭಾ ಸದಸ್ಯ ಜಗದೀಶ್ ಕುಂದರ್, ವಿಶ್ವಜ್ಯೋತಿ ಮಹಿಳಾ ಮಂಡಳಿ ಅಧ್ಯಕ್ಷೆ ಗೀತಾ ರಮೇಶ್ ಆಚಾರ್ಯ, ಸಂಘದ ಕಾರ್ಯದರ್ಶಿ ಸಂದೀಪ್ ಬಿ, ಕೋಶಾಧಿಕಾರಿ ಜಯಚಂದ್ರ ಮತ್ತಿತರ ಪದಾಧಿಕಾರಿಗಳು ಉಪಸ್ಥಿತರಿದ್ದರು. ಉಪತಹಶೀಲ್ದಾರ್ ಪರಮೇಶ್ವರ ನಾಯ್ಕ ಸ್ವಾಗತಿಸಿದರು. ವಿಶುಕುಮಾರ್ ವಂದಿಸಿದರು.

About sudina

Check Also

ಖಡಕ್ ಐಪಿಎಸ್ ಅಧಿಕಾರಿ ಮಧುಕರ್ ಶೆಟ್ಟಿ ವಿಧಿವಶ

ಹೈದರಾಬಾದ್ : ಖಡಕ್ ಮತ್ತು ಜನಾನುರಾಗಿ ಎಂದು ಹೆಸರು ಪಡೆದಿದ್ದ ಹಿರಿಯ ಐಪಿಎಸ್ ಅಧಿಕಾರಿ ಮಧುಕರ್ ಶೆಟ್ಟಿ ವಿಧಿವಶರಾಗಿದ್ದಾರೆ. ಅವರಿಗೆ …

Leave a Reply

Your email address will not be published. Required fields are marked *

error: Content is protected !!