Monday , October 22 2018
ಕೇಳ್ರಪ್ಪೋ ಕೇಳಿ
Home / News NOW / ಅವಿಭಕ್ತ ಕುಟುಂಬದಿಂದ ಮನಸ್ಸಿಗೆ ನೆಮ್ಮದಿ

ಅವಿಭಕ್ತ ಕುಟುಂಬದಿಂದ ಮನಸ್ಸಿಗೆ ನೆಮ್ಮದಿ

ಬಂಟ್ವಾಳ: ಅವಿಭಕ್ತ ಕುಟುಂಬಗಳು ವಿಭಕ್ತ ಕುಟುಂಬಗಳಾಗಿ ಬದಲಾಗುತ್ತಿರುವುದರಿಂದ ಏಕಾಂಗಿ ಬದುಕಿನಿಂದಾಗಿ ಖಿನ್ನತೆಗಳು ಆವರಿಸಿಕೊಂಡು ಮಾನಸಿಕ ರೋಗಗಳು ಕಾಡಲಾರಂಭಿಸುತ್ತವೆ. ಪ್ರೀತಿಯೇ ಮನೋರೋಗಗಳಿಗೆ ಮೊದಲ ಚಿಕಿತ್ಸೆ ಎಂದು ಬಂಟ್ವಾಳ ತಾಲೂಕು ಜನಜಾಗೃತಿ ವೇದಿಕೆಯ ಅಧ್ಯಕ್ಷ ಪ್ರಕಾಶ ಕಾರಂತ ಹೇಳಿದರು.

ಸೇವಾಂಜಲಿ ಪ್ರತಿಷ್ಠಾನ ಫರಂಗಿಪೇಟೆ, ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನೆ ಬಂಟ್ವಾಳ ಇದರ ಆಶ್ರಯದಲ್ಲಿ ಜ.ಕೆ.ಎಸ್.ಹೆಗ್ಡೆ ಚಾರಿಟೇಬಲ್ ಆಸ್ಪತ್ರೆ ದೇರಳಕಟ್ಟೆ ಇದರ ಮನೋರೋಗ ಚಿಕಿತ್ಸಾ ವಿಭಾಗದ ವತಿಯಿಂದ ಸೇವಾಂಜಲಿ ಸಭಾಂಗಣದಲ್ಲಿ ನಡೆದ ಮನೋರೋಗದ ಬಗೆಗಿನ ಮಾಹಿತಿ ಮತ್ತು ಮುಕ್ತ ಸಂವಾದ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಮೊಬೈಲ್, ಟಿ.ವಿ.ಹಾಗೂ ಆಧುನಿಕ ತಂತ್ರಜ್ಞಾನಗಳ ಅತಿಯಾದ ಬಳಕೆಯಿಂದ ಮಕ್ಕಳು ಖಿನ್ನತೆಗೆ ತುತ್ತುಗುತ್ತಿದ್ದಾರೆ. ಈ ಬಗ್ಗೆ ಪೋಷಕರು ಹೆಚ್ಚು ಜಾಗೃತೆ ವಹಿಸಿ ಪ್ರೀತಿಯಿಂದ ಅವರನ್ನು ಮನಪರಿವರ್ತಿಸುವ ಕಾರ್ಯ ನಡೆಸಬೇಕಾಗಿದೆ ಎಂದರು.

ಜ.ಕೆ.ಎಸ್.ಹೆಗ್ಡೆ  ಆಸ್ಪತ್ರೆಯ ಮನೋರೋಗ ಚಿಕಿತ್ಸಾ ವಿಭಾಗದ ಆಪ್ತ ಸಮಾಲೋಚಕಿ ಸುಮನ್ ಪಿಂಟೋ ಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಿಸಿ ಮಾತನಾಡಿ, ಮಕ್ಕಳು ಮೊಬೈಲ್ ಬಳಕೆಯ ಬಗ್ಗೆ ಪೋಷಕರು ಎಚ್ಚರ ವಹಿಸಬೇಕು. ಅತಿಯಾಗಿ ಮೊಬೈಲ್ ಬಳಕೆಯಿಂದ ಮಕ್ಕಳ ಮೆದುಳು ನಿಷ್ಕ್ರಿಯಗೊಳ್ಳುವುದು. ಅಲ್ಲದೆ  ಚಟುವಟಿಕೆಗಳು ಕಡಿಮೆಯಾಗುತ್ತದೆ. ಸಾಮಾಜಿಕ, ಕೌಟುಂಬಿಕ ಸಂಬಂಧಗಳು ಕೂಡ ಇದರಿಂದಾಗಿ ಕ್ಷೀಣವಾಗುತ್ತದೆ. ಅವಶ್ಯಕತೆ ಎನಿಸಿದರೆ ಮಾತ್ರ ಮೊಬೈಲ್ ನೀಡಿ ಮತ್ತು ಅದರ ಬಳಕೆಯ ಬಗ್ಗೆ ನಿಗಾ ಇಡಿ  ಎಂದು ಸಲಹೆ ನೀಡಿದರು.
ಮನೋರೋಗ ವೈದ್ಯ ಡಾ. ಶ್ರೀನಿವಾಸ ಭಟ್ ವೃದ್ದಾಪ್ಯ ಒಂದು ಶಾಪವೇ ಎನ್ನುವ ವಿಚಾರದ ಬಗ್ಗೆ ಮಾಹಿತಿ ನೀಡಿದರು.

ವೇದಿಕೆಯಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮೀಣಾಭಿವೃದ್ಧಿಯ ಯೋಜನಾಧಿಕಾರಿ ಸುನೀತಾ ನಾಯಕ್, ಪುದು ಗ್ರಾ.ಪಂ.ಸದಸ್ಯ ಎಂ.ಕೆ.ಖಾದರ್ ಉಪಸ್ಥಿತರಿದ್ದರು. ಸೇವಾಂಜಲಿ ಪ್ರತಿಷ್ಠಾನದ ಆಡಳಿತ ಟ್ರಸ್ಟಿ ಕೃಷ್ಣಕುಮಾರ್ ಪೂಂಜಾ ಸ್ವಾಗತಿಸಿ, ವಂದಿಸಿದರು.

About sudina

Check Also

ಮಾಜಿ ಪ್ರೇಯಸಿ ಮೇಲೆ ಸೇಡು : ವೈದ್ಯೆ ಜೊತೆಗಿನ `ಸರಸ’ದ ಫೋಟೋ ಇಂಟರ್‍ನೆಟ್ ನಲ್ಲಿ ಹರಿಬಿಟ್ಟ ಲವರ್…!

ಬೆಂಗಳೂರು : ತನ್ನ ವಿರುದ್ಧ ದೂರು ಕೊಟ್ಟರು ಎಂಬ ಕಾರಣಕ್ಕೆ ಮಾಜಿ ಪ್ರಿಯಕರನೊಬ್ಬ ವೈದ್ಯೆಯೊಂದಿಗಿನ ತನ್ನ ಸರಸದ ಫೋಟೋವನ್ನು ಸಾಮಾಜಿಕ …

Leave a Reply

Your email address will not be published. Required fields are marked *

error: Content is protected !!