Monday , June 25 2018
ಕೇಳ್ರಪ್ಪೋ ಕೇಳಿ
Home / News NOW / ಕಾವೇರಿ ವಿಚಾರವಾಗಿ ಕೊನೆಗೂ ಪ್ರಧಾನಿ ಮೋದಿ ಮಧ್ಯಪ್ರವೇಶ…

ಕಾವೇರಿ ವಿಚಾರವಾಗಿ ಕೊನೆಗೂ ಪ್ರಧಾನಿ ಮೋದಿ ಮಧ್ಯಪ್ರವೇಶ…

ನವದೆಹಲಿ : ಕಾವೇರಿ ವಿವಾದ ವಿಚಾರದಲ್ಲಿ ಪ್ರಧಾನಿ ನರೇಂದ್ರ ಮೋದಿ ಕೊನೆಗೂ ಮಧ್ಯಪ್ರವೇಶಿಸಿದ್ದಾರೆ. ಕಾವೇರಿ ಸ್ಥಿತಿಗತಿ ಬಗ್ಗೆ ನವದೆಹಲಿಯಲ್ಲಿ ಹಿರಿಯ ಸಚಿವರೊಂದಿಗೆ ಮೋದಿ ಮಾತುಕತೆ ನಡೆಸಿದ್ದಾರೆ. ತಮಿಳುನಾಡು ಮತ್ತು ಕರ್ನಾಟಕದ ಸ್ಥಿತಿಗತಿ ಬಗ್ಗೆ ಪ್ರಧಾನಿ ಚರ್ಚೆ ನಡೆಸಿದ್ದಾರೆ.

ಸಂಪುಟದ ಪ್ರಮುಖ ಸಚಿವರೊಂದಿಗೆ ಪ್ರಧಾನಿ ಮಾತುಕತೆ ನಡೆಸಿದ್ದು, ಕರ್ನಾಟಕ ಮತ್ತು ತಮಿಳುನಾಡಿನ ಸ್ಥಿತಿಗತಿ ಬಗ್ಗೆ ಪ್ರಧಾನಿ ಮಾಹಿತಿ ಪಡೆದಿದ್ದಾರೆ.

ಇವತ್ತು ಸುಪ್ರೀಂಕೋರ್ಟ್‍ನಲ್ಲಿ ನಡೆದ ವಿಚಾರಣೆ ಸಂದರ್ಭದಲ್ಲಿ ಕರ್ನಾಟಕ ತಮಿಳುನಾಡಿಗೆ ಆರು ದಿನ ಪ್ರತಿದಿನ ಆರು ಸಾವಿರ ಕ್ಯೂಸೆಕ್ ನೀರಿನಂತೆ 36 ಕ್ಯೂಸೆಕ್ ನೀಡು ಬಿಡುವಂತೆ ಆದೇಶ ನೀಡಿತ್ತು. ಅಲ್ಲದೆ, ಮೂರು ದಿನಗಳ ಒಳಗಾಗಿ ಕಾವೇರಿ ಜಲ ನಿರ್ವಹಣ ಮಂಡಳಿ ರಚಿಸುವಂತೆಯೂ ತೀರ್ಪು ನೀಡಿತ್ತು.

About sudina

Check Also

ಬಂಟ್ವಾಳ : ತಾಲೂಕಿನ ವಿವಿಧ ಸುದ್ದಿಗಳ ಒಂದು ನೋಟ

ರೈಲಿನಡಿಗೆ ಬಿದ್ದು ಸಾವು : ವ್ಯಕ್ತಿಯೊಬ್ಬರು ಆಕಸ್ಮಿಕವಾಗಿ ರೈಲಿನಡಿಗೆ ಬಿದ್ದು ಮೃತಪಟ್ಟ ಘಟನೆ ಬಂಟ್ವಾಳ ತಾಲೂಕಿನ ಪುದು ಗ್ರಾಮದ ಅಮೆಮಾರ್ …

Leave a Reply

Your email address will not be published. Required fields are marked *

error: Content is protected !!