Saturday , January 19 2019
ಕೇಳ್ರಪ್ಪೋ ಕೇಳಿ
Home / Film News / Tollywood / ಬಾಹುಬಲಿ ನಿರ್ಮಾಪಕರ ಮನೆ ಮೇಲೆ ಆದಾಯ ತೆರಿಗೆ ಇಲಾಖೆ ದಾಳಿ…!

ಬಾಹುಬಲಿ ನಿರ್ಮಾಪಕರ ಮನೆ ಮೇಲೆ ಆದಾಯ ತೆರಿಗೆ ಇಲಾಖೆ ದಾಳಿ…!

ಹೈದರಾಬಾದ್ : ಬ್ಲಾಕ್ ಬ್ಲಾಸ್ಟರ್ ಚಿತ್ರ ಬಾಹುಬಲಿಯ ನಿರ್ಮಾಪಕರ ಮನೆ ಮೇಲೆ ಆದಾಯ ತೆರಿಗೆ ಇಲಾಖೆ ಅಧಿಕಾರಿಗಳು ದಾಳಿ ಮಾಡಿದ್ದಾರೆ. ಐತಿಹಾಸಿಕ ಫಿಕ್ಷನ್ ಚಿತ್ರ ಕಳೆದ ವರ್ಷ ತೆಲುಗು ಮತ್ತು ತಮಿಳು ಭಾಷೆಯಲ್ಲಿ ಬಿಡುಗಡೆಯಾಗಿತ್ತು. ಈ ಚಿತ್ರ ಹಿಂದಿಗೂ ಡಬ್ ಆಗಿತ್ತು. ಈ ಚಿತ್ರ ವಿಶ್ವದಾದ್ಯಂತ ಸುಮಾರು 650 ಕೋಟಿ ರೂಪಾಯಿ ಸಂಪಾದಿಸಿತ್ತು. ಇದಾದ ಬಳಿಕ ಬಾಹುಬಲಿ 2 ಚಿತ್ರ ಕೂಡಾ ತಯಾರಾಗುತ್ತಿದ್ದು, ಏಪ್ರಿಲ್‍ನಲ್ಲಿ ಬಿಡುಗಡೆಯಾಗಲಿದೆ. ಈ ಚಿತ್ರದ ರೈಟ್ಸ್ ನೂರಾರು ಕೋಟಿ ರೂಪಾಯಿಗೆ ಮಾರಾಟವಾಗಿದೆ.

ಈ ನಡುವೆ ಚಿತ್ರದ ನಿರ್ಮಾಪಕರಾದ ಶೋಭಾ ಯರ್ಲಾಗುಡ್ಡ ಮತ್ತು ಪ್ರಸಾದ್ ದೇವಿನೇನು ಮನೆಗೆ ಅಧಿಕಾರಿಗಳು ದಾಳಿ ಮಾಡಿದ್ದಾರೆ. ದಾಖಲೆ ಇಲ್ಲದ ಸುಮಾರು 60 ಕೋಟಿ ರೂಪಾಯಿ ಮೌಲ್ಯದ 500 ಮತ್ತು 1000 ಮುಖಬೆಲೆಯ ಇವರಿಬ್ಬರ ಮನೆಯಲ್ಲಿ ಇದೆ ಎಂಬ ಆರೋಪದಲ್ಲಿ ಈ ದಾಳಿ ಮಾಡಲಾಗಿದೆ. ಇದು ಪ್ರಧಾನಿ ನರೇಂದ್ರ ಮೋದಿ ಅವರು 500 ಮತ್ತು 1000 ರೂಪಾಯಿ ಮುಖಬೆಲೆಯ ನೋಟುಗಳ ಬಳಕೆ ರದ್ದು ಮಾಡಿದ ಎಫೆಕ್ಟ್ ಆಗಿದೆ.

About sudina

Check Also

ಎನ್​ಟಿಆರ್​ ಪಾತ್ರಕ್ಕೆ ಪ್ರಕಾಶ್​ ರೈ, ಲಕ್ಷ್ಮಿ ಪಾರ್ವತಿ ಪಾತ್ರದಲ್ಲಿ ರೋಜಾ…?

ಹೈದರಾಬಾದ್ : ರಾಮ್​ ಗೋಪಾಲ್​ ವರ್ಮಾ… ಟಾಲಿವುಡ್​ನ ಅತ್ಯದ್ಭುತ ನಿರ್ದೇಶಕ… ಹಲವು ಸೂಪರ್​ ಹಿಟ್ ಚಿತ್ರಗಳನ್ನು ಕೊಟ್ಟವರು ಇವರು… ಇಂತಹ …

Leave a Reply

Your email address will not be published. Required fields are marked *

error: Content is protected !!