Saturday , November 17 2018
ಕೇಳ್ರಪ್ಪೋ ಕೇಳಿ
Home / News NOW / ಸಾಂಸ್ಕೃತಿಕ ಹಬ್ಬಕ್ಕೆ ದಿನಗಣನೆ : ಜನವರಿ 13ರಿಂದ ಆಳ್ವಾಸ್ ವಿರಾಸತ್

ಸಾಂಸ್ಕೃತಿಕ ಹಬ್ಬಕ್ಕೆ ದಿನಗಣನೆ : ಜನವರಿ 13ರಿಂದ ಆಳ್ವಾಸ್ ವಿರಾಸತ್

ಮೂಡುಬಿದಿರೆ : ಸಾಂಸ್ಕೃತಿಕ ಲೋಕದಲ್ಲಿ ವಿಶ್ವಮಟ್ಟದಲ್ಲಿ ಹೆಸರು ಮಾಡಿರುವ `ಆಳ್ವಾಸ್ ವಿರಾಸತ್’ಗೆ ದಿನಗಣನೆ ಶುರುವಾಗಿದೆ. ಜನವರಿ 13, 14 ಮತ್ತು 15ಕ್ಕೆ 23ನೇ ವರ್ಷದ ಆಳ್ವಾಸ್ ವಿರಾಸತ್ ರಾಷ್ಟ್ರೀಯ ಸಾಂಸ್ಕೃತಿಕ ಉತ್ಸವ ನಡೆಯಲಿದೆ. ಪುತ್ತಿಗೆಯ ವಿವೇಕಾನಂದ ನಗರದಲ್ಲಿರುವ ಶ್ರೀಮತಿ ವನಜಾಕ್ಷಿ ಕೆ ಶ್ರೀಪತಿ ಭಟ್ ವೇದಿಕೆಯಲ್ಲಿ ಈ ಕಾರ್ಯಕ್ರಮ ನಡೆಯಲಿದೆ.
ಇನ್ನು, 23ನೇ ಆಳ್ವಾಸ್ ವಿರಾಸತ್ ಪ್ರಶಸ್ತಿಯನ್ನು ಪ್ರಸಿದ್ಧ ಭರತನಾಟ್ಯ ಕಲಾವಿದ ಪದ್ಮಭೂಷಣ ವಿ.ಪಿ.ಧನಂಜಯನ್ ಅವರಿಗೆ ಮತ್ತು ಆಳ್ವಾಸ್ ವರ್ಣವಿರಾಸತ್ ಪ್ರಶಸಿಯನ್ನು ರಾಜಸ್ಥಾನದ ರೇವ ಶಂಕರ್ ಶರ್ಮಾ ಅವರಿಗೆ ನೀಡಿ ಗೌರವಿಸಲಾಗುವುದು ಎಂದು ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷ ಡಾ.ಎಂ.ಮೋಹನ್ ಆಳ್ವ ತಿಳಿಸಿದ್ದಾರೆ.

ಮೂರು ದಿನಗಳ ಕಾಲ ನಡೆಯಲಿರುವ ಈ ಸಾಂಸ್ಕೃತಿಕ ಉತ್ಸವದಲ್ಲಿ ಹೊಸಲೋಕವೇ ಅನಾವರಣಗೊಳ್ಳಲಿದೆ.

About sudina

Check Also

ಪತ್ನಿಯನ್ನು ಕೊಂದು ತಲೆಮರೆಸಿಕೊಂಡಿದ್ದ ಟೆಕ್ಕಿ 15 ವರ್ಷದ ಬಳಿಕ ಸೆರೆ…!

ಬೆಂಗಳೂರು : 2003ರಲ್ಲಿ ಗುಜರಾತ್‍ನಲ್ಲಿ ಪತ್ನಿಯನ್ನು ಕೊಂದು ಹೆಸರು ಬದಲಾಯಿಸಿಕೊಂಡು ಬೆಂಗಳೂರಿನ ಪ್ರತಿಷ್ಠಿತ ಐಟಿ ಕಂಪೆನಿಯಲ್ಲಿ ಕೆಲಸ ಮಾಡುತ್ತಿದ್ದ ಟೆಕ್ಕಿಯನ್ನು …

Leave a Reply

Your email address will not be published. Required fields are marked *

error: Content is protected !!