Friday , October 19 2018
ಕೇಳ್ರಪ್ಪೋ ಕೇಳಿ
Home / News NOW / ಭಾಸ್ಕರ್ ಶೆಟ್ಟಿ ಕೊಲೆ ಪ್ರಕರಣ : ಆರೋಪಿ ರಾಜೇಶ್ವರಿ ಶೆಟ್ಟಿಗೆ ಜೈಲಲ್ಲೇ ನ್ಯೂ ಇಯರ್

ಭಾಸ್ಕರ್ ಶೆಟ್ಟಿ ಕೊಲೆ ಪ್ರಕರಣ : ಆರೋಪಿ ರಾಜೇಶ್ವರಿ ಶೆಟ್ಟಿಗೆ ಜೈಲಲ್ಲೇ ನ್ಯೂ ಇಯರ್

ಉಡುಪಿ : ತೀವ್ರ ಕುತೂಹಲ ಕೆರಳಿಸಿದ್ದ ಉದ್ಯಮಿ ಭಾಸ್ಕರ್ ಶೆಟ್ಟಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಮುಖ ಆರೋಪಿ ಭಾಸ್ಕರ್ ಶೆಟ್ಟಿ ಪತ್ನಿ ರಾಜೇಶ್ವರಿ ಶೆಟ್ಟಿ ಜಾಮೀನು ಅರ್ಜಿ ತಿರಸ್ಕøತವಾಗಿದೆ. ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ರಾಜೇಶ್ವರಿ ಶೆಟ್ಟಿ ಜಾಮೀನು ಅರ್ಜಿ ತಿರಸ್ಕರಿಸಿದೆ. ಹೀಗಾಗಿ, ರಾಜೇಶ್ವರಿ ಶೆಟ್ಟಿ ಜೈಲಿನಲ್ಲೇ ನ್ಯೂ ಇಯರ್ ಆಚರಿಸಬೇಕಾಗಿದೆ.

ಅರಬ್ ರಾಷ್ಟ್ರ ಮತ್ತು ಉಡುಪಿ ಸೇರಿದಂತೆ ಹಲವು ಕಡೆ ಉದ್ಯಮ ಹೊಂದಿದ್ದ ಭಾಸ್ಕರ್ ಶೆಟ್ಟಿ ನಿಗೂಢವಾಗಿ ಕೊಲೆಯಾಗಿದ್ದರು. ಹೆಂಡತಿ ರಾಜೇಶ್ವರಿ, ಮಗ ನವನೀತ್ ಮತ್ತು ಜ್ಯೋತಿಷಿ ನಿರಂಜನ್ ಭಟ್ ಸೇರಿ ಮೂವರು ಭಾಸ್ಕರ್ ಶೆಟ್ಟಿಯನ್ನು ಹತ್ಯೆ ಮಾಡಿದ್ದರು ಎನ್ನಲಾಗಿತ್ತು. ಅಲ್ಲದೆ, ನಿರಂಜನ್ ಭಟ್ ಮನೆಯ ಹೋಮಕುಂಡದಲ್ಲಿ ಭಾಸ್ಕರ್ ಶೆಟ್ಟಿ ಅವರನ್ನು ಸುಡಲಾಗಿತ್ತು ಎಂದು ಆರೋಪಿಸಲಾಗಿದ್ದು, ಈ ಬಗ್ಗೆ ತನಿಖೆ ಮುಂದುವರಿದಿದೆ. ಆದರೆ, ಇದುವರೆಗೆ ಭಾಸ್ಕರ್ ಶೆಟ್ಟಿ ಸಾವಿನ ರಹಸ್ಯ ಹೊರಬಿದ್ದಿಲ್ಲ.

About sudina

Check Also

ಮಾಜಿ ಪ್ರೇಯಸಿ ಮೇಲೆ ಸೇಡು : ವೈದ್ಯೆ ಜೊತೆಗಿನ `ಸರಸ’ದ ಫೋಟೋ ಇಂಟರ್‍ನೆಟ್ ನಲ್ಲಿ ಹರಿಬಿಟ್ಟ ಲವರ್…!

ಬೆಂಗಳೂರು : ತನ್ನ ವಿರುದ್ಧ ದೂರು ಕೊಟ್ಟರು ಎಂಬ ಕಾರಣಕ್ಕೆ ಮಾಜಿ ಪ್ರಿಯಕರನೊಬ್ಬ ವೈದ್ಯೆಯೊಂದಿಗಿನ ತನ್ನ ಸರಸದ ಫೋಟೋವನ್ನು ಸಾಮಾಜಿಕ …

Leave a Reply

Your email address will not be published. Required fields are marked *

error: Content is protected !!