Thursday , December 14 2017
Home / Bollywood / ಹಿರಿಯ ಬಾಲಿವುಡ್ ನಟ ಓಂ ಪುರಿ ವಿಧಿವಶ

ಹಿರಿಯ ಬಾಲಿವುಡ್ ನಟ ಓಂ ಪುರಿ ವಿಧಿವಶ

ಮುಂಬೈ : ಬಾಲಿವುಡ್ ಹಿರಿಯ ನಟ ಓಂ ಪುರಿ ವಿಧಿವಶರಾಗಿದ್ದಾರೆ. ಹೃದಯಾಘಾತದಿಂದ ಇವರು ಕೊನೆಯುಸಿರೆಳೆದಿದ್ದಾರೆ. ಇವರಿಗೆ 66 ವರ್ಷ ವಯಸ್ಸಾಗಿತ್ತು. ಬಾಲಿವುಡ್‍ನಲ್ಲಿ ಖಳನಟ, ಪೋಷಕ ಪಾತ್ರ, ಹಾಸ್ಯ ಪಾತ್ರ ಸೇರಿದಂತೆ ಎಲ್ಲಾ ಪಾತ್ರಗಳಿಗೂ ಜೀವ ತುಂಬಿದ್ದ ಓಂ ಪುರಿ ದಕ್ಷಿಣ ಭಾರತದ ಹಲವು ಭಾಷೆಗಳಲ್ಲೂ ಗಮನ ಸೆಳೆದಿದ್ದಾರೆ.

ಶಿವರಾಜ್‍ಕುಮಾರ್ ಅಭಿನಯದ `ಎ.ಕೆ.47′ ಚಿತ್ರದಲ್ಲಿ ಖಡಕ್ ಪೊಲೀಸ್ ಆಫೀಸರ್ ಪಾತ್ರದಲ್ಲಿ ಕಾಣಿಸಿಕೊಂಡಿದ್ದ ಓಂ ಪುರಿ ತನ್ನ ಉರಿಗಣ್ಣಿನ ನೋಟದಿಂದಲೇ ವಿಶೇಷವಾಗಿ ಗಮನ ಸೆಳೆಯುತ್ತಿದ್ದರು.

ಇನ್ನು, ಹಿರಿಯ ನಟನ ಅಗಲಿಕೆಗೆ ಚಿತ್ರರಂಗದ ಹಲವು ಗಣ್ಯರು ಸಂತಾಪ ವ್ಯಕ್ತಪಡಿಸಿದ್ದಾರೆ.

About sudina

Check Also

ಹಿಂದಿ ಬಿಗ್​ಬಾಸ್​​ನಲ್ಲಿ ಮಾಟ ಮಂತ್ರ…!!!

ಮುಂಬೈ : ಖಾಸಗಿ ವಾಹಿನಿಯಲ್ಲಿ ಪ್ರಸಾರವಾಗುವ ಬಿಗ್​ಬಾಸ್​ ರಿಯಾಲಿಟಿ ಶೋ ಈಗ ಸಖತ್​​ ಕ್ರೇಜ್ ಹುಟ್ಟಿಸಿದೆ. ಹಿಂದಿಯಲ್ಲಿ ಈ ರಿಯಾಲಿಟಿ …

Leave a Reply

Your email address will not be published. Required fields are marked *

error: Content is protected !!