Sunday , July 22 2018
ಕೇಳ್ರಪ್ಪೋ ಕೇಳಿ
Home / Film News / Bollywood / ಸ್ಟಂಟ್ ಮಾಡುವಾಗ ಬಿದ್ದು ತಲೆಗೆ ಗಾಯ ಮಾಡಿಕೊಂಡ ಪ್ರಿಯಾಂಕಾ ಚೋಪ್ರಾ

ಸ್ಟಂಟ್ ಮಾಡುವಾಗ ಬಿದ್ದು ತಲೆಗೆ ಗಾಯ ಮಾಡಿಕೊಂಡ ಪ್ರಿಯಾಂಕಾ ಚೋಪ್ರಾ

ಮುಂಬೈ : ಬಾಲಿವುಡ್ ನಟಿ ಪ್ರಿಯಾಂಕಾ ಚೋಪ್ರಾ ಸ್ಟಂಟ್ ಮಾಡುವಾಗ ಬಿದ್ದು ತಲೆಗೆ ಗಾಯ ಮಾಡಿಕೊಂಡಿದ್ದಾರೆ. ಅಮೇರಿಕಾದ ಖ್ಯಾತ ಟಿವಿ ಸೀರಿಯಲ್ ಶೂಟಿಂಗ್ ಸಂದರ್ಭದಲ್ಲಿ ಈ ಘಟನೆ ನಡೆದಿದೆ. ಸ್ಟಂಟ್ ಮಾಡುವಾಗ ಕೆಳಗೆ ಬಿದ್ದ ಪರಿಣಾಮ ಪ್ರಿಯಾಂಕಾ ತಲೆಗೆ ಗಾಯಗಳಾಗಿದ್ದು, ತಕ್ಷಣ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು.

ಗುರುವಾರ ಸಂಜೆ ಈ ಘಟನೆ ನಡೆದಿದೆ. ಚಿಕಿತ್ಸೆ ಬಳಿಕ ಪ್ರಿಯಾಂಕಾ ಡಿಸ್ಚಾರ್ಜ್ ಆಗಿದ್ದಾರೆ. ಆದರೂ, ವೈದ್ಯರು ಪ್ರಿಯಾಂಕಾಗೆ ವಿಶ್ರಾಂತಿಗೆ ಸೂಚಿಸಿದ್ದಾರೆ. ಹೀಗಾಗಿ, ಪ್ರಿಯಾಂಕಾ ಶೂಟಿಂಗ್‍ಗೆ ಮರಳಲು ಕೆಲವು ದಿನ ಆಗಬಹುದು. ಬಹುತೇಕ ವಾರಾಂತ್ಯದಲ್ಲಿ ಪ್ರಿಯಾಂಕಾ ಕೆಲಸಕ್ಕೆ ಮರಳಲಿದ್ದಾರೆ ಎಂದು ಹೇಳಲಾಗುತ್ತಿದೆ.

About sudina

Check Also

ಹಿಂದಿ ಬಿಗ್​ಬಾಸ್​​ನಲ್ಲಿ ಮಾಟ ಮಂತ್ರ…!!!

ಮುಂಬೈ : ಖಾಸಗಿ ವಾಹಿನಿಯಲ್ಲಿ ಪ್ರಸಾರವಾಗುವ ಬಿಗ್​ಬಾಸ್​ ರಿಯಾಲಿಟಿ ಶೋ ಈಗ ಸಖತ್​​ ಕ್ರೇಜ್ ಹುಟ್ಟಿಸಿದೆ. ಹಿಂದಿಯಲ್ಲಿ ಈ ರಿಯಾಲಿಟಿ …

Leave a Reply

Your email address will not be published. Required fields are marked *

error: Content is protected !!