Monday , July 23 2018
ಕೇಳ್ರಪ್ಪೋ ಕೇಳಿ
Home / Film News / Bollywood / ಸಲ್ಮಾನ್ ಖಾನ್ ಜೊತೆಗೆ ಯಾವುದೇ ಸಂಬಂಧ ಇಲ್ಲ : ಆಮಿ ಜಾಕ್ಸನ್

ಸಲ್ಮಾನ್ ಖಾನ್ ಜೊತೆಗೆ ಯಾವುದೇ ಸಂಬಂಧ ಇಲ್ಲ : ಆಮಿ ಜಾಕ್ಸನ್

ಮುಂಬೈ : ನಟಿ ಆಮಿ ಜಾಕ್ಸನ್ ಹೆಸರು ಇತ್ತೀಚೆಗೆ ಬಾಲಿವುಡ್ ನಟ ಸಲ್ಮಾನ್ ಖಾನ್ ಜೊತೆ ಥಳುಕು ಹಾಕಿಕೊಂಡಿತ್ತು. ಆದರೆ, ಇದಕ್ಕೆ ಆಮಿ ಸ್ಪಷ್ಟನೆ ನೀಡಿದ್ದಾರೆ. ಸಲ್ಮಾನ್ ಜೊತೆ ನನಗೆ ಯಾವುದೇ ಸಂಬಂಧ ಇಲ್ಲ ಎಂದು ಇವರು ಸ್ಪಷ್ಟಪಡಿಸಿದ್ದಾರೆ.

ಇವತ್ತು 25ನೇ ವರ್ಷಕ್ಕೆ ಕಾಲಿಟ್ಟ ಆಮಿ ಎರಡನೇ ಬಾರಿಗೆ ತಮ್ಮ ಹುಟ್ಟುಹಬ್ಬವನ್ನು ಚಿತ್ರದ ಸೆಟ್‍ನಲ್ಲಿ ಆಚರಿಸಿಕೊಂಡಿದ್ದಾರೆ. ಕಳೆದ ವರ್ಷ ಈ ಬ್ರಿಟಿಷ್ ನಟಿ ಶಂಕರ್ ನಿರ್ದೇಶನದ ಚಿತ್ರದಲ್ಲಿ ನಟಿಸುತ್ತಿದ್ದರು. ಹೀಗಾಗಿ, ಇದೇ ಚಿತ್ರದ ಸೆಟ್‍ನಲ್ಲಿ ಇವರು ಹುಟ್ಟುಹಬ್ಬ ಆಚರಿಸಿಕೊಂಡಿದ್ದರು. ಈ ವರ್ಷ ಕೂಡಾ ಅಮಿ ಶಂಕರ್ ನಿರ್ದೇಶನದ ರಜನಿಕಾಂತ್ ಅಭಿನಯದ 2.0 ಚಿತ್ರದಲ್ಲಿ ನಟಿಸುತ್ತಿದ್ದು, ಇಲ್ಲೇ ಬರ್ತ್‍ಡೇ ಆಚರಿಸಿಕೊಂಡಿದ್ದಾರೆ.

ಈ ವೇಳೆ ಆಮಿ ಸಲ್ಮಾನ್ ಬಗ್ಗೆ ಮಾತನಾಡಿದ್ದಾರೆ. ಸಲ್ಮಾನ್ ಅವರ ಕಿಕ್ ಚಿತ್ರದಲ್ಲಿ ನಾನು ನಟಿಸಬೇಕಿತ್ತು. ಆದರೆ, ಅದು ಸಾಧ್ಯ ಆಗಿರಲಿಲ್ಲ. ಆದರೂ ಸಲ್ಮಾನ್ ಚಿತ್ರದಲ್ಲಿ ನಟಿಸುವುದು ನನ್ನ ಕನಸಾಗಿದೆ ಎಂದು ಹೇಳಿದ್ದಾರೆ.

About sudina

Check Also

ಹಿಂದಿ ಬಿಗ್​ಬಾಸ್​​ನಲ್ಲಿ ಮಾಟ ಮಂತ್ರ…!!!

ಮುಂಬೈ : ಖಾಸಗಿ ವಾಹಿನಿಯಲ್ಲಿ ಪ್ರಸಾರವಾಗುವ ಬಿಗ್​ಬಾಸ್​ ರಿಯಾಲಿಟಿ ಶೋ ಈಗ ಸಖತ್​​ ಕ್ರೇಜ್ ಹುಟ್ಟಿಸಿದೆ. ಹಿಂದಿಯಲ್ಲಿ ಈ ರಿಯಾಲಿಟಿ …

Leave a Reply

Your email address will not be published. Required fields are marked *

error: Content is protected !!