ಹೈದರಾಬಾದ್ : ಖ್ಯಾತ ನಿರ್ದೇಶಕ ರಾಜಮೌಳಿ ನಿರ್ದೇಶನದ ಬಹುನಿರೀಕ್ಷಿತ ಬಾಹುಬಲಿ 2 ಚಿತ್ರ ಹಲವು ಕುತೂಹಲಕ್ಕೆ ಕಾರಣವಾಗಿದೆ. ಈ ಚಿತ್ರವನ್ನು ಎಲ್ಲರೂ ಎದುರು ನೋಡುತ್ತಿದ್ದಾರೆ. ಈ ನಡುವೆ, ಬಾಲಿವುಡ್ ನಟ ಶಾರೂಖ್ ಖಾನ್ ಕೂಡಾ ಈ ಚಿತ್ರದಲ್ಲಿ ನಟಿಸಲಿದ್ದಾರೆ ಎಂದು ಹೇಳಲಾಗುತ್ತಿದೆ. ಶಾರೂಖ್ ಈ ಚಿತ್ರದಲ್ಲಿ ಸಣ್ಣ ಪಾತ್ರವನ್ನು ನಿರ್ವಹಿಸಲಿದ್ದಾರೆ ಎನ್ನಲಾಗಿದೆ. ಏಪ್ರಿಲ್ 28ಕ್ಕೆ ಬಾಹುಬಲಿ 2 ಚಿತ್ರ ಬಿಡುಗಡೆಯಾಗುವ ಸಾಧ್ಯತೆ ಇದೆ.
