Saturday , October 20 2018
ಕೇಳ್ರಪ್ಪೋ ಕೇಳಿ
Home / Film News / Coastalwood / ಹಸೆಮಣೆಯಲ್ಲಿ ನಿರೂಪಕಿ ಅನುಶ್ರೀ…!

ಹಸೆಮಣೆಯಲ್ಲಿ ನಿರೂಪಕಿ ಅನುಶ್ರೀ…!

ಉಡುಪಿ: ಕಿರುತೆರೆ ನಿರೂಪಕಿ ಅನುಶ್ರೀ ಮದುವೆ ಆಗಿದ್ದಾರೆ…! ಅರೇ ಅನುಶ್ರೀ ಯಾಕೆ ಗುಟ್ಟಾಗಿ ಮದುವೆ ಅದ್ರು ಅಂತ ಕೇಳ್ತೀದಿದ್ದಾರಾ.. ಸ್ವಲ್ಪ ತಡೆಯಿರಿ.. ಇದು ರಿಯಲ್ ಮದುವೆ ಅಲ್ಲ, ರೀಲ್ ಮದುವೆ..

ಅನುಶ್ರೀ ತುಳು ಚಿತ್ರವೊಂದರಲ್ಲಿ ನಟಿಸುತ್ತಿದ್ದಾರೆ. ಈ ಚಿತ್ರದ ಮದುವೆ ಸನ್ನಿವೇಶವನ್ನು ಉಡುಪಿಯ ಮಣಿಪಾಲದ ಆರ್‍ಎಸ್‍ಬಿ ಸಭಾ ಭವನದಲ್ಲಿ ಚಿತ್ರೀಕರಿಸಲಾಗಿದೆ.. ಕರಾವಳಿಯವರಾದರೂ ಇದೇ ಮೊದಲ ಬಾರಿಗೆ ಅನುಶ್ರೀ ಕೋಸ್ಟಲ್​ವುಡ್​​ನಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ.

‘ಕೋರಿ ರೊಟ್ಟಿ’ ಅನುಶ್ರೀ ಅಭಿನಯದ ತುಳು ಚಿತ್ರ. ಉಡುಪಿಯ ರಜನೀಶ್ ನಾಯಕನಾಗಿ ನಟಿಸಿ ಈ ಚಿತ್ರವನ್ನು ನಿರ್ದೇಶನ ಮಾಡುತ್ತಿದ್ದಾರೆ. ತುಳು ಚಿತ್ರರಂಗದ ಪ್ರಸಿದ್ಧ ನಟರಾದ ನವೀನ್ ಡಿ ಪಡೀಲ್, ಭೋಜರಾಜ್ ವಾಮಂಜೂರ್, ಅರವಿಂದ ಬೋಳಾರ್, ಕನ್ನಡದ ನಟ ಹರೀಶ್ ರಾಯ್, ಇಳಾ ವಿಟ್ಲ- ಸ್ಥಳೀಯ ರಂಗಭೂಮಿ ನಟ, ನಟಿಯರು ಈ ಚಿತ್ರದಲ್ಲಿ ನಟಿಸುತ್ತಿದ್ದಾರೆ.

About sudina

Check Also

ನಾಳೆ ‘ನೇಮೋದ ಬೂಳ್ಯ’ ಸಿನೆಮಾ ರಿಲೀಸ್​

ಮಂಗಳೂರು : ಕೋಸ್ಟಲ್​ವುಡ್​ನಲ್ಲಿ ಬಹಳ ನಿರೀಕ್ಷೆ ಮೂಡಿಸಿರುವ ‘ನೇಮೋದ ಬೂಳ್ಯ’ ಸಿನೆಮಾ ಬಿಡುಗಡೆಗೆ ಕ್ಷಣಗಣನೆ ಶುರುವಾಗಿದೆ. ನಾಳೆ ಅಂದರೆ, ಸೆಪ್ಟೆಂಬರ್ …

Leave a Reply

Your email address will not be published. Required fields are marked *

error: Content is protected !!