Wednesday , March 27 2019
ಕೇಳ್ರಪ್ಪೋ ಕೇಳಿ
Home / Film News / Bollywood / ರಾಖಿ ಸಾವಂತ್ ವಿರುದ್ಧ ಅರೆಸ್ಟ್ ವಾರೆಂಟ್

ರಾಖಿ ಸಾವಂತ್ ವಿರುದ್ಧ ಅರೆಸ್ಟ್ ವಾರೆಂಟ್

ಮುಂಬೈ : ಬಾಲಿವುಡ್ ನ ಐಟಂ ಬಾಂಬ್ ರಾಖಿ ಸಾವಂತ್ ಗೆ ಈಗ ಸಂಕಷ್ಟ ಶುರುವಾಗಿದೆ. ವಾಲ್ಮೀಕಿ ಸಮುದಾಯದ ವಿರುದ್ಧ ಅವಹೇಳನ ಮಾಡಿರುವ ಆರೋಪ ಎದುರಿಸುತ್ತಿರುವ ರಾಖಿ ಸಲ್ಲಿಸಿದ್ದ ನಿರೀಕ್ಷಣಾ ಜಾಮೀನು ಅರ್ಜಿಯನ್ನು ವಜಾ ಮಾಡಿರುವ ಪಂಜಾಬ್​ನ ನ್ಯಾಯಾಲಯ, ಅರೆಸ್ಟ್ ವಾರೆಂಟ್ ಜಾರಿ ಮಾಡಿದೆ. ನ್ಯಾಯಾಲಯಕ್ಕೆ ವಿಚಾರಣೆಗೆ ಹಾಜರಾಗಲು ವಿಫಲವಾದ ಹಿನ್ನೆಲೆಯಲ್ಲಿ ರಾಖಿ ವಿರುದ್ಧ ಈ ವಾರೆಂಟ್ ಜಾರಿ ಮಾಡಲಾಗಿದೆ.

ಜ್ಯುಡಿಶಿಯಲ್ ಮ್ಯಾಜಿಸ್ಟ್ರೇಟ್ ವಿಶಾಲ್ ಗುಪ್ತಾ ರಾಖಿ ವಿರುದ್ಧ ಅರೆಸ್ಟ್ ವಾರೆಂಟ್ ಮಾಡಿ ವಿಚಾರಣೆಯನ್ನು ಸೆಪ್ಟೆಂಬರ್ 5ಕ್ಕೆ ಮುಂದೂಡಿದ್ದಾರೆ.

ಈ ನಡುವೆ, ರಾಖಿ ಸಾವಂತ್ ಪರ ವಕೀಲರು ಜಿಲ್ಲಾ ಸೆಷನ್ಸ್ ನ್ಯಾಯಾಲಯದ ಮುಂದೆ ಅರ್ಜಿ ಸಲ್ಲಿಸಿದ್ದು, ರಾಖಿ ಅಮೇರಿಕಾದಲ್ಲಿ ಇರುವುದರಿಂದ ಇವತ್ತು ನ್ಯಾಯಾಲಯಕ್ಕೆ ಹಾಜರಾಗಲು ಸಾಧ್ಯವಾಗುತ್ತಿಲ್ಲ ಎಂದು ಮನವಿ ಮಾಡಿದ್ದಾರೆ. ಇದಕ್ಕೆ ಕಾರಣವೂ ಇದೆ. ಆಗಸ್ಟ್ 5 ರಂದು ರಾಖಿಗೆ ಜಾಮೀನು ನೀಡಿದ್ದ ಜಿಲ್ಲಾ ನ್ಯಾಯಾಲಯ ಆಗಸ್ಟ್ 7 ರಂದು ವಿಚಾರಣಾ ನ್ಯಾಯಾಲಯಕ್ಕೆ ಹಾಜರಾಗಲು ಆದೇಶಿಸಿತ್ತು.

ಕಳೆದ ವರ್ಷದ ಜುಲೈ 9 ರಂದು ವಕೀಲ ನರೇಂದರ್ ಆದಿತ್ಯಾ ರಾಖಿ ವಿರುದ್ಧ ದೂರು ನೀಡಿದ್ದರು. ಖಾಸಗಿ ವಾಹಿನಿಯಲ್ಲಿ ವಾಲ್ಮೀಕಿ ಸಮುದಾಯದ ಬಗ್ಗೆ ರಾಖಿ ಅವಹೇಳನ ಮಾಡಿದ್ದರು ಎಂದು ದೂರಿನಲ್ಲಿ ಆರೋಪಿಸಲಾಗಿತ್ತು.

About sudina

Check Also

ಹಿಂದಿ ಬಿಗ್​ಬಾಸ್​​ನಲ್ಲಿ ಮಾಟ ಮಂತ್ರ…!!!

ಮುಂಬೈ : ಖಾಸಗಿ ವಾಹಿನಿಯಲ್ಲಿ ಪ್ರಸಾರವಾಗುವ ಬಿಗ್​ಬಾಸ್​ ರಿಯಾಲಿಟಿ ಶೋ ಈಗ ಸಖತ್​​ ಕ್ರೇಜ್ ಹುಟ್ಟಿಸಿದೆ. ಹಿಂದಿಯಲ್ಲಿ ಈ ರಿಯಾಲಿಟಿ …

Leave a Reply

Your email address will not be published. Required fields are marked *

error: Content is protected !!