Wednesday , December 12 2018
ಕೇಳ್ರಪ್ಪೋ ಕೇಳಿ
Home / News NOW / ಡಾ.ಮೋಹನ್ ಆಳ್ವ ಪರ ಬೃಹತ್​ ಜಾಥಾ : ಸಭೆಗೆ ವ್ಯಾಪಕ ಬೆಂಬಲ

ಡಾ.ಮೋಹನ್ ಆಳ್ವ ಪರ ಬೃಹತ್​ ಜಾಥಾ : ಸಭೆಗೆ ವ್ಯಾಪಕ ಬೆಂಬಲ

ಮೂಡುಬಿದಿರೆ : ವಿದ್ಯಾರ್ಥಿನಿ ಕಾವ್ಯಾ ಸಾವಿನ ವಿಚಾರದಲ್ಲಿ ಆಳ್ವಾಸ್​ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷ ಡಾ.ಮೋಹನ್ ಆಳ್ವರ ತೇಜೋವಧೆ ಮಾಡಲಾಗುತ್ತಿದೆ ಎಂದು ಆರೋಪಿಸಿ ಮೂಡುಬಿದಿರೆಯಲ್ಲಿ ಡಾ.ಮೋಹನ್ ಆಳ್ವ ಪರ ಬೃಹತ್ ಬೆಂಬಲ ಸಭೆ ನಡೆದಿದೆ. ಈ ಸಭೆಗೆ ವ್ಯಾಪಕ ಬೆಂಬಲ ವ್ಯಕ್ತವಾಗಿದೆ.
ಸ್ವರಾಜ್​ ಮೈದಾನದಲ್ಲಿ ನಡೆದ ಈ ಕಾರ್ಯಕ್ರಮದಲ್ಲಿ ಕರಾವಳಿಯ ವಿವಿಧ ಕ್ಷೇತ್ರದ ಗಣ್ಯರು ಪಾಲ್ಗೊಂಡಿದ್ದು ಡಾ. ಆಳ್ವರಿಗೆ ಬೆಂಬಲ ವ್ಯಕ್ತಪಡಿಸಿದ್ದಾರೆ. ಅಲ್ಲದೆ, ಈ ಕಾರ್ಯಕ್ರಮದಲ್ಲಿ 9 ಸಾವಿರಕ್ಕೂ ಅಧಿಕ ಮಂದಿ ಭಾಗವಹಿಸಿದ್ದರು.

ನಿಟ್ಟೆ ಸಮೂಹ ಶಿಕ್ಷಣ ಸಂಸ್ಥೆಗಳ ಮುಖ್ಯಸ್ಥ ವಿನಯ ಹೆಗ್ಡೆ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಕಾವ್ಯಾ ಸಾವಿನ ತನಿಖೆ ಕಾನೂನಿನ ಚೌಕಟ್ಟಿನಲ್ಲಿ ಆಗಬೇಕಾಗಿದೆ. ಹಾಗಂತ, ಡಾ.ಆಳ್ವ ಮತ್ತು ಸಂಸ್ಥೆಯ ತೇಜೋವಧೆ ಸರಿಯಲ್ಲ ಎಂದು ಹೇಳಿದ್ದಾರೆ. ಇನ್ನು, ಹಂಪಿ ವಿಶ್ವವಿದ್ಯಾನಿಲಯದ ವಿಶ್ರಾಂತ ಕುಲಪತಿ ಡಾ.ಬಿ. ಎ. ವಿವೇಕ್ ರೈ ಮಾತನಾಡಿ, ಮೋಹನ್​ ಆಳ್ವರ ಸಂಸ್ಥೆ ಸರ್ಕಾರಕ್ಕೆ ಮಾದರಿಯಾಗಬೇಕು ಎಂದು ಹೇಳಿದರು.

ಖ್ಯಾತ ಲೇಖಕಿ ವೈದೇಹಿ ಅವರೂ ಈ ಸಭೆಯಲ್ಲಿ ಪಾಲ್ಗೊಂಡು ಮೋಹನ್ ಆಳ್ವರಿಗೆ ಬೆಂಬಲ ವ್ಯಕ್ತಪಡಿಸಿದರು. ಇನ್ನು, ಮಾಜಿ ಸಚಿವ ಅಮರನಾಥ ಶೆಟ್ಟಿ, ಮೂಲ್ಕಿ ಪ್ಯಾರಿಶ್​ನ ಧರ್ಮಗುರು ಫಾದರ್ ಫ್ರಾನ್ಸಿಸ್, ಯನಪೋಯ ವಿಶ್ವವಿದ್ಯಾಲಯದ ಕುಲಪತಿ ವೈ. ಅಬುಲ್ಲಾ ಕುಂಞ, ಬ್ರಿಗೇಡಿಯರ್ ಐ.ಎನ್.ರೈ, ಸಹ್ಯಾದ್ರಿ ಶಿಕ್ಷಣ ಸಂಸ್ಥೆಗಳ ಮುಖ್ಯಸ್ಥ ಮತ್ತು ಕಾಂಗ್ರೆಸ್ ಮುಖಂಡ ಮಂಜುನಾಥ ಭಂಡಾರಿ, ಮೂಡಬಿದಿರೆ ಚೌಟರ ಅರಮನೆಯ ಕುಲದೀಪ್ ಎಂ, ಶಾರದಾ ವಿದ್ಯಾಲಯದ ಸಂಚಾಲಕ ಎಂ.ಬಿ.ಪುರಾಣಿಕ್, ಆಥ್ಲಿಟ್ ಸಹನಾ ಪೂಜಾರಿ ಮುಂತಾದವರು ಭಾಗವಹಿಸಿ ಮೋಹನ್ ಆಳ್ವರಿಗೆ ಬೆಂಬಲ ವ್ಯಕ್ತಪಡಿಸಿದರು.

About sudina

Check Also

ಪತ್ನಿಯನ್ನು ಕೊಂದು ತಲೆಮರೆಸಿಕೊಂಡಿದ್ದ ಟೆಕ್ಕಿ 15 ವರ್ಷದ ಬಳಿಕ ಸೆರೆ…!

ಬೆಂಗಳೂರು : 2003ರಲ್ಲಿ ಗುಜರಾತ್‍ನಲ್ಲಿ ಪತ್ನಿಯನ್ನು ಕೊಂದು ಹೆಸರು ಬದಲಾಯಿಸಿಕೊಂಡು ಬೆಂಗಳೂರಿನ ಪ್ರತಿಷ್ಠಿತ ಐಟಿ ಕಂಪೆನಿಯಲ್ಲಿ ಕೆಲಸ ಮಾಡುತ್ತಿದ್ದ ಟೆಕ್ಕಿಯನ್ನು …

Leave a Reply

Your email address will not be published. Required fields are marked *

error: Content is protected !!