ಪಲ್ಲೆಕಿಲೆ: ಶ್ರೀಲಂಕಾ ವಿರುದ್ಧದ ಟೆಸ್ಟ್ ಸರಣಿಯಲ್ಲಿ ಟೀಂ ಇಂಡಿಯಾ ಗೆಲುವಿನ ಸಿಹಿಯನ್ನು ದಾಖಲಿಸಿದೆ. ಮೂರು ಪಂದ್ಯಗಳಲ್ಲಿ ಜಯ ಗಳಿಸುವ ಮೂಲಕ ಟೀಂ ಇಂಡಿಯಾ ವೈಟ್ ವಾಶ್ ಮಾಡಿದೆ. ಇದು ಕ್ರಿಕೆಟ್ ಅಭಿಮಾನಿಗಳಲ್ಲಿ ಸಂಭ್ರಮ ಮೂಡಿಸಿದೆ.
ಪಲ್ಲೆಕಿಲೆ ಮೈದಾನದಲ್ಲಿ ನಡೆದ ಮೂರನೇ ಟೆಸ್ಟ್ ಪಂದ್ಯದಲ್ಲಿ ಭಾರತ ಇನ್ನಿಂಗ್ಸ್ ಮತ್ತು 171 ರನ್ ಗಳಿಂದ ಜಯ ಸಾಧಿಸಿದೆ. ಟಾಸ್ ಗೆದ್ದು ಮೊದಲು ಮೊದಲು ಬ್ಯಾಟಿಂಗ್ ಮಾಡಿದ್ದ ಟೀಂ ಇಂಡಿಯಾ 487 ರನ್ ಗಳಿಗೆ ಆಲೌಟ್ ಆಗಿತ್ತು. ಈ ಮೊತ್ತ ಬೆನ್ನಟ್ಟಿದ್ದ ಶ್ರೀಲಂಕಾ ಮೊದಲ ಇನ್ನಿಂಗ್ಸ್ ನಲ್ಲಿ ಕೇವಲ 135ಕ್ಕೆ ಆಲೌಟ್ ಆಗಿತ್ತು. ಫಾಲೋ ಆನ್ ಗೆ ಒಳಪಟ್ಟ ಶ್ರೀಲಂಕಾ ಮತ್ತೆ ದ್ವಿತೀಯ ಇನ್ನಿಂಗ್ಸ್ ನಲ್ಲಿ 181 ರನ್ ಮಾಡಲಷ್ಟೇ ಶಕ್ತವಾಗಿತ್ತು.