Thursday , June 21 2018
ಕೇಳ್ರಪ್ಪೋ ಕೇಳಿ
Home / News NOW / ಬಂಟ್ವಾಳ : ವಿವಿದೆಡೆ ಸ್ವಾತಂತ್ರ್ಯೋತ್ಸವ ಸಂಭ್ರಮ

ಬಂಟ್ವಾಳ : ವಿವಿದೆಡೆ ಸ್ವಾತಂತ್ರ್ಯೋತ್ಸವ ಸಂಭ್ರಮ

ಬಂಟ್ವಾಳ : ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ಸುತ್ತಮುತ್ತ ಸ್ವಾತಂತ್ರ್ಯೋತ್ಸವವನ್ನು ಸಂಭ್ರಮದಿಂದ ಆಚರಿಸಲಾಯಿತು…

ಸುಜೀರು : ಇಲ್ಲಿನ ಸುಜೀರು ಪ್ರೌಢಶಾಲೆಯಲ್ಲಿ ಸ್ವಾತಂತ್ರ್ಯೋತ್ಸವವನ್ನು ಸಂಭ್ರಮದಿಂದಲೇ ಆಚರಿಸಲಾಯಿತು. ಧ್ವಜಾರೋಹಣ ಮಾಡಿ ಮಾತನಾಡಿದ ಶಾಲೆಯ ಎಸ್​​ಡಿಎಂಸಿ ಅಧ್ಯಕ್ಷ ಹಾಗೂಜಿಲ್ಲಾ ಪಂಚಾಯತ್ ಮಾಜಿ ಸದಸ್ಯ ಉಮ್ಮರ್ ಫಾರೂಕ್​​, ನಮ್ಮ ಹಿರಿಯರ ತ್ಯಾಗ ಬಲಿದಾನ ಹಾಗೂ ಒಗ್ಗಟ್ಟಿನ ಫಲವಾಗಿ ಇಂದು ದೇಶ ಸ್ವತಂತ್ರಗೊಂಡಿದೆ. ಈ ಸ್ವಾತಂತ್ರ್ಯವನ್ನು ಉಳಿಸಿಕೊಳ್ಳುವುದು ಯುವಜನಾಂಗದ ಜವಾಬ್ದಾರಿಯಾಗಿದೆ ಎಂದು ಹೇಳಿದರು.

ವೇದಿಕೆಯಲ್ಲಿ ತಾ.ಪಂ. ಸದಸ್ಯೆ ಪದ್ಮಶ್ರೀ, ಪುದು ಗ್ರಾ.ಪಂ. ಉಪಾಧ್ಯಕ್ಷ ಹಾಶೀರ್ ಪೇರಿಮಾರ್, ಸದಸ್ಯ ರಮ್ಲಾನ್, ಮನೋರಮಾ, ಹಿರಿಯರಾದ ಎಫ್. ಎ. ಖಾದರ್, ಸಾಹಿತಿ ಮಹಮ್ಮದ್ ಮಾರಿಪಳ್ಳ, ಜಬ್ಬಾರ್ ಮಾರಿಪಳ್ಳ, ಎಸ್ ಡಿ ಎಂ ಸಿ ಸದಸ್ಯರಾದ ಕಿಶೋರ್, ಜುಬೈರ್, ಬಶೀರ್, ಮಜೀದ್ ಫರಂಗಿಪೇಟೆ, ಅಬೂಬಕ್ಕರ್ ಫರಂಗಿಪೇಟೆ, ಇಕ್ಬಾಲ್ ಮಾರಿಪಳ್ಳ, ರಫೀಕ್, ಮಾಲತಿ, ಇಂದಿರ, ಹುಸೈನ್ ಮತ್ತಿತರರು ಹಾಜರಿದ್ದರು. ಈ ಸಂದರ್ಭ ವಿದ್ಯಾರ್ಥಿಗಳು ಹಾಗೂ ಗಣ್ಯರು ಸ್ವಚ್ಚತಾ ಪ್ರತಿಜ್ಞೆ ಸ್ವೀಕರಿಸಿದರು.

ಬಳಿಕ ವಿದ್ಯಾರ್ಥಿಗಳಿಗೆ ಶೂ ವಿತರಣ ಕಾರ್ಯಕ್ರಮ ನಡೆಯಿತು.ಮುಖ್ಯ ಶಿಕ್ಷಕಿ ಶಶಿಮಂಗಳ ಸ್ವಾಗತಿಸಿದರು, ಜ್ಯೋತಿರಾವ್ ವಂದಿಸಿದರು. ಜಯಪ್ರಕಾಶ್ ಕಾರ್ಯಕ್ರಮ ನಿರೂಪಿಸಿದರು.

ಮಾಣಿ : ಇನ್ನು, ಮಾಣಿ ಗ್ರಾಮ ಪಂಚಾಯತ್ ಕಚೇರಿ ಆವರಣದಲ್ಲಿ 71ನೇ ಸ್ವಾತಂತ್ರ್ಯೋತ್ಸವ ದಿನವನ್ನು ಆಚರಿಸಲಾಯಿತು. ಗ್ರಾಮ ಪಂಚಾಯತ್ ಅಧ್ಯಕ್ಷರಾದ ಶ್ರೀಮತಿ ಮಮತಾ ಎಸ್. ಶೆಟ್ಟಿ, ಶಂಭುಗ ಧ್ವಜಾರೋಹಣ ನೆರವೇರಿಸಿದರು.

ಮಾಣಿ ಗ್ರಾಮ ಪಂಚಾಯತ್ ಉಪಾಧ್ಯಕ್ಷರಾದ ಶ್ರೀಮತಿ ಸಂಪಾವತಿ, ಪಂಚಾಯತ್ ಅಭಿವೃದ್ಧಿ ಅಧಿಕಾರಿ ಶ್ರೀ ದಿನೇಶ್ ಕುಮಾರ್, ಗ್ರಾ.ಪಂ. ಸದಸ್ಯರುಗಳು ಮತ್ತು ಗ್ರಾ.ಪಂ. ಸಿಬ್ಬಂದಿಗಳು, ಮಾಣಿ ದ.ಕ.ಜಿ.ಪಂ.ಮಾ. ಹಿರಿಯ ಪ್ರಾಥಮಿಕ ಶಾಲಾ ಶಿಕ್ಷಕರು, ಶಾಲಾಭಿವೃದ್ಧಿ ಸಮಿತಿ ಅಧ್ಯಕ್ಷರು/ಸದಸ್ಯರು, ಶಾಲಾ ಮಕ್ಕಳು, ಅಂಗನವಾಡಿ ಕಾರ್ಯಕರ್ತೆಯರು, ಅಂಗನವಾಡಿ ಮಕ್ಕಳು ಹಾಗೂ ಗ್ರಾಮಸ್ಥರು ಉಪಸ್ಥಿತರಿದ್ದರು.

ಆಲಾಡಿ : ದ.ಕ.ಹಿ.ಪ್ರಾಥಮಿಕ ಶಾಲೆಯಲ್ಲಿ ನಡೆದ ಸ್ವಾತಂತೋತ್ಸವದಲ್ಲಿ ಶಾಲಾಭಿವೃದ್ಧಿ ಸಮಿತಿ ಅಧ್ಯಕ್ಷ ತಾ.ಪಂ. ಮಾಜಿ ಸದಸ್ಯ ಮಹಮ್ಮದ್ ಶರೀಫ್ ಧ್ವಜಾರೋಹಣ ನೆರವೇರಿಸಿದರು. ಧಾರ್ಮಿಕ ಮುಂದಾಳು ಎಂ. ಸುಬ್ರಹ್ಮಣ್ಯ ಭಟ್, ಮಾಜಿ ಗ್ರಾ.ಪಂ.ಅಧ್ಯಕ್ಷ ಪರಮೇಶ್ವರ ಮೂಲ್ಯ, ಶಾಲಾಭಿವೃದ್ಧಿ ಸಮಿತಿ ಸದಸ್ಯರಾದ ಬದ್ರುದ್ದೀನ್, ಇಸ್ಮಾಯಿಲ್ ಮೊದಲಾದವರು ಉಪಸ್ಥಿತರಿದ್ದರು.

ಮಯ್ಯರಬ್ಯಲು : ಇಲ್ಲಿನ ಅಂಗನವಾಡಿ ಕೇಂದ್ರದಲ್ಲಿ 71 ನೇ ಸ್ವಾತಂತ್ರೋತ್ಸವ ಕಾರ್ಯಕ್ರಮ ನಡೆಯಿತು. ಹಿರಿಯ ಮೇಲ್ವಿಚಾರಕಿ ಗಾಯತ್ರಿ ಕಂಬಳಿ ದ್ವಜಾರೋಹಣಗೈದರು. ಪುರಸಭಾ ಸದಸ್ಯ ಜಗದೀಶ ಕುಂದರ್, ಶಿವಾಜಿ ಪ್ರೆಂಡ್ಸ್​ನ ಸದಸ್ಯರು, ಬಾಲವಿಕಾಶ ಸಮಿತಿ ಸದಸ್ಯರು, ಮಕ್ಕಳ ತಾಯಂದಿರು, ಅಂಗನವಾಡಿ ಕಾರ್ಯಕರ್ತೆ ವಿಶಾಲಾಕ್ಷಿ , ಅಂಗನವಾಡಿ ಸಹಾಯಕಿ ಗೀತಾ ಮತ್ತಿತತರು ಉಪಸ್ಥಿತರಿದ್ದರು.

ಇನ್ನು, ಬಂಟ್ವಾಳ ಹೆಚ್ಚುವರಿ ಸಿವಿಲ್ ನ್ಯಾಯಾಧೀಶರು ಮತ್ತು ಪ್ರಥಮ ದರ್ಜೆ ನ್ಯಾಯಿಕ ದಂಡಾಧಿಕಾರಿಯವರ ನ್ಯಾಯಾಲಯದ ಆವರಣದಲ್ಲಿ 71ನೇ ಸ್ವಾತಂತ್ರ್ಯೋತ್ಸವ ಸಂದರ್ಭದಲ್ಲಿ ಹಿರಿಯ ಸಿವಿಲ್ ನ್ಯಾಯಾಧೀಶರಾದ ಚಂದ್ರಶೇಖರ ಯು. ಧ್ವಜಾರೋಹಣಗೈದರು. ಹೆಚ್ಚುವರಿ ಸಿವಿಲ್ ನ್ಯಾಯಾಧೀಶರಾದ ಪ್ರಕಾಶ್ ಸಿ.ಡಿ., ವಕೀಲರ ಸಂಘದ ಅಧ್ಯಕ್ಷ ವೆಂಕಟ್ರಮಣ ಶೆಣೈ, ವಕೀಲರುಗಳು ಹಾಗೂ ನ್ಯಾಯಾಲಯ ಸಿಬ್ಬಂದಿ ವರ್ಗ ಉಪಸ್ಥಿತರಿದ್ದರು.

ಮತ್ತೊಂದು ಕಡೆ, ಬಂಟ್ವಾಳ ಸುಭಾಷ್ ಯುವಕ ಮಂಡಲ ಸಜೀಪ ಮೂಡ ಇವರ ವತಿಯಿಂದ ನಡೆದ 71ನೇ ಸ್ವಾತಂತ್ರ್ಯೋತ್ಸವ ಆಚರಣೆಯ ಅಂಗವಾಗಿ ಮಾಜಿ ಜಿಪಂ ಅಧ್ಯಕ್ಷ ಸದಾನಂದ ಪೂಂಜಾ ಅವರು ದ್ವಜಾರೋಹಣ ಮಾಡಿದರು. ಸುಭಾಷ್ ಯುವಕ ಮಂಡಲದ ಅಧ್ಯಕ್ಷ ಶ್ರೀಕಾಂತ್ ಶೆಟ್ಟಿ, ಮಾಜಿ ಗ್ರಾ.ಪಂ.ಅಧ್ಯಕ್ಷ ದೇವಿಪ್ರಸಾದ್ ಪೂಂಜಾ, ಹಿರಿಯ ಪ್ರಾಥಮಿಕ ಶಾಲೆಯ ಮುಖ್ಯೋಪಾದ್ಯಾಯಿನಿ ವತ್ಸಲಾ, ಗ್ರಾ.ಪಂ.ಸದಸ್ಯರಾದ ಯೋಗೀಶ್ ಬೆಲ್ಚಾಡ, ಕರೀಂ, ಉಮರಬ್ಬ, ಶಾಲಾಭಿವೃದ್ದಿ ಸಮಿತಿ ಅಧ್ಯಕ್ಷ ಚೆನ್ನಪ್ಪ, ಧಾರ್ಮಿಕ ಮುಂದಾಳು ಎಂ. ಸುಬ್ರಹ್ಮಣ್ಯ ಭಟ್, ಶಾರದಾ ಪೂಜಾ ಸಮಿತಿ ಅಧ್ಯಕ್ಷ ರಮೇಶ್ ಸುವರ್ಣ ಮೊದಲಾದವರು ಉಪಸ್ಥಿತರಿದ್ದರು.

ಇತ್ತ, ಮಂಚಿ ಕೊಳ್ನಾಡು ಸರ್ಕಾರಿ ಪ್ರೌಢ ಶಾಲೆಯಲ್ಲಿ ಸ್ವಾತಂತ್ರ್ಯ ದಿನಾಚರಣೆಯನ್ನು ಆಚರಿಸಲಾಯಿತು. ಎಸ್.ಡಿ.ಎಂ.ಸಿ ಕಾರ್ಯಾಧ್ಯಕ್ಷ ಮಹಮ್ಮದ್ ಸಾಲೆ ಧ್ವಜಾರೋಹಣ ಮಾಡಿದರು. ಈ ವೇಳೆ, ಶಾಲಾಭಿವೃದ್ಧಿ ಸಮಿತಿಯ ಸದಸ್ಯರು ಹಾಜರಿದ್ದರು.

About sudina

Check Also

ಪಣಂಬೂರು ಕಡಲ ಕಿನಾರೆಯಲ್ಲಿ ಸುಂಟರ ಗಾಳಿ…! : ಇಲ್ಲಿದೆ ವೀಡಿಯೋ

ಮಂಗಳೂರು : ಪಣಂಬೂರು ಸಮುದ್ರ ಕಿನಾರೆಯಲ್ಲಿ ಸುಂಟರಗಾಳಿ ಕಾಣಿಸಿಕೊಂಡು ಭೀತಿಯ ವಾತಾವರಣ ಸೃಷ್ಟಿಸಿತ್ತು. ಈ ಸುಂಟರಗಾಳಿಯಿಂದ ಕಡಲ ತೀರದಲ್ಲಿ ಇದ್ದ …

Leave a Reply

Your email address will not be published. Required fields are marked *

error: Content is protected !!