Monday , October 22 2018
ಕೇಳ್ರಪ್ಪೋ ಕೇಳಿ
Home / Mumbai Mail / ಪ್ರತಿಭಾ ಪುರಸ್ಕಾರ, ವಿದ್ಯಾರ್ಥಿ ವೇತನಕ್ಕೆ ಅರ್ಜಿ ಆಹ್ವಾನ : ಆಗಸ್ಟ್​ 31 ಕೊನೆಯ ದಿನ

ಪ್ರತಿಭಾ ಪುರಸ್ಕಾರ, ವಿದ್ಯಾರ್ಥಿ ವೇತನಕ್ಕೆ ಅರ್ಜಿ ಆಹ್ವಾನ : ಆಗಸ್ಟ್​ 31 ಕೊನೆಯ ದಿನ

ಮುಂಬೈ : ಬಿಲ್ಲವ ಸೇವಾ ಸಂಘ ಕುಂದಾಪುರ ಮುಂಬೈ ವತಿಯಿಂದ ಪ್ರತಿವರ್ಷ ಪ್ರತಿಭಾ ಪುರಸ್ಕಾರ ಮತ್ತು ವಿದ್ಯಾರ್ಥಿ ವೇತನ ನೀಡಲಾಗುತ್ತದೆ. ಈ ಪುರಸ್ಕಾರಕ್ಕೆ ಈ ಬಾರಿಯೂ ಅರ್ಜಿ ಆಹ್ವಾನಿಸಲಾಗಿದೆ. ಮುಂಬೈ ಮತ್ತು ಉಪನಗರದಲ್ಲಿ ನೆಲೆಸಿರುವ ಬಿಲ್ಲವ ಸಂಘದ ಸದಸ್ಯರು ಮತ್ತು ಸದಸ್ಯರ ಮಕ್ಕಳು ಇಲ್ಲಿ ಅರ್ಜಿ ಸಲ್ಲಿಸಬಹುದುದಾಗಿದೆ.

ವಿವಿಧ ತರಗತಿಗಳಿಗೆ ಅನುಗುಣವಾಗಿ ಶೇಕಡಾವಾರು ಅಂಕಗಳನ್ನು ಪ್ರತಿಭಾ ಪುರಸ್ಕಾರಕ್ಕೆ ನಿಗದಿ ಮಾಡಲಾಗಿದೆ. ಈ ಅರ್ಜಿ ಸಲ್ಲಿಸಲು ಆಗಸ್ಟ್​ 31 ಕೊನೆ ದಿನವಾಗಿದೆ. ಕೊನೆಯ ದಿನದ ಒಳಗಾಗಿ ಭರ್ತಿಗೊಳಿಸಿದ ಅರ್ಜಿಯನ್ನು ಅಂಕಪಟ್ಟಿ ದೃಢೀಕರಿಸಿದ ಪ್ರತಿಯೊಂದಿಗೆ ಸಂಘದ ಕಾರ್ಯಾಲಯಕ್ಕೆ ತಲುಪಿಸಲು ಕೋರಲಾಗಿದೆ. ಬಡವಿದ್ಯಾರ್ಥಿಗಳಿಗೆ ನೀಡುವ ವಿದ್ಯಾರ್ಥಿ ವೇತನಕ್ಕೂ ಅರ್ಹರು ಸಂಬಂಧಿಸಿದ ಸೂಕ್ತ ದಾಖಲೆಯೊಂದಿಗೆ ಅರ್ಜಿ ಸಲ್ಲಿಸಬಹುದು.

ಸೆಪ್ಟೆಂಬರ್ 10 ರಂದು ವಡಾಲದ ಎನ್​ಕೆಇಎಸ್​ ಹೈಸ್ಕೂಲ್​ ಸಭಾಂ​ಗಣದಲ್ಲಿ ಈ ವಿದ್ಯಾರ್ಥಿ ವೇತನ ಮತ್ತು ಪ್ರತಿಭಾ ಪುರಸ್ಕಾರ ವಿತರಣಾ ಕಾರ್ಯಕ್ರಮ ನಡೆಯಲಿದೆ.

ಅರ್ಜಿ ನಮೂನೆ ಮತ್ತು ಹೆಚ್ಚಿನ ಮಾಹಿತಿಗಾಗಿ ಇಲ್ಲಿ ಕ್ಲಿಕ್ ಮಾಡಿ : www.billavasevasanghakundapuramumbai.com

About sudina

Check Also

ದಾವೂದ್ ಪಾಕಿಸ್ತಾನದಲ್ಲೇ ಇದ್ದಾನೆ : ನಾಲ್ಕೈದು ವಿಳಾಸ ನೀಡಿದ್ದಾನೆ ಸಹೋದರ ಇಕ್ಬಾಲ್

ಮುಂಬೈ : ಭಾರತದ ಮೋಸ್ಟ್ ವಾಂಟೆಡ್ ಕ್ರಿಮಿನಲ್ ದಾವೂದ್ ಇಬ್ರಾಹಿಂ ಪಾಕಿಸ್ತಾನದಲ್ಲೇ ಅಡಗಿ ಕುಳಿತಿದ್ದಾನೆ ಎಂಬುದಕ್ಕೆ ಮತ್ತೊಂದು ಸಾಕ್ಷ್ಯ ಸಿಕ್ಕಿದೆ. …

Leave a Reply

Your email address will not be published. Required fields are marked *

error: Content is protected !!