ಮೂಡಬಿದಿರೆ : ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದಲ್ಲಿ ಸ್ವಾತಂತ್ರ್ಯೋತ್ಸವವನ್ನು ಸಂಭ್ರಮದಿಂದ ಆಚರಿಸಲಾಯಿತು. ತ್ರಿವರ್ಣ ಧ್ವಜ ಹಿಡಿದಿದ್ದ ಸಾವಿರಾರು ವಿದ್ಯಾರ್ಥಿಗಳು ಇಲ್ಲಿನ ರಂಗನ್ನು ಇಮ್ಮಡಿಯಾಗಿಸಿದ್ದರು. ಪುತ್ತಿಗೆಯಲ್ಲಿ ನಡೆದ ಈ ಕಾರ್ಯಕ್ರಮದಲ್ಲಿ ಒಂದು ಸುಂದರ ಲೋಕವೇ ಅನಾವರಣಗೊಂಡಿತ್ತು.
ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷ ಡಾ.ಮೋಹನ್ ಆಳ್ವ, ಉದ್ಯಮಿ ಡಾ.ಬಿ.ಆರ್.ಶೆಟ್ಟಿ, ನಿಟ್ಟೆ ಶಿಕ್ಷಣ ಸಂಸ್ಥೆಗಳ ಅಧ್ಯಕ್ಷ ವಿನಯ್ ಹೆಗ್ಡೆ, ಶಾಸಕ ಅಭಯಚಂದ್ರ ಜೈನ್, ಮಾಜಿ ಸಚಿವ ಅಮರನಾಥ ಶೆಟ್ಟಿ ಸೇರಿದಂತೆ ಹಲವರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.
ಇದೇ ಸಂದರ್ಭದಲ್ಲಿ ಯುಪಿಎಸ್ಸಿ ಪರೀಕ್ಷೆಯಲ್ಲಿ ಪ್ರಥಮ ರ್ಯಾಂಕ್ ಗಳಿಸಿರುವ ಕಾಲೇಜಿನ ಹಳೆ ವಿದ್ಯಾರ್ಥಿನಿ ನಂದಿನಿ ಕೆ.ಆರ್ ಅವರನ್ನು ಸನ್ಮಾನಿಸಲಾಯಿತು. ಸನ್ಮಾನ ಸ್ವೀಕರಿಸಿ ಮಾತನಾಡಿದ ನಂದಿನಿ, ತಾನು ಕಲಿತ ಕಾಲೇಜಿನಲ್ಲಿ ಸನ್ಮಾನಿ ಸ್ವೀಕರಿಸುವುದು ಹೆಮ್ಮೆ ಮತ್ತು ಸಂತಸದ ಕ್ಷಣ ಎಂದು ಹೇಳಿದರು.
25 ಸಾವಿರ ವಿದ್ಯಾರ್ಥಿಗಳು ಸೇರಿದಂತೆ ಸುಮಾರು 30 ಸಾವಿರ ಮಂದಿ ಈ ಸುಂದರ ಕಾರ್ಯಕ್ರಮಕ್ಕೆ ಸಾಕ್ಷಿಯಾದರು.