Friday , April 20 2018
Home / News NOW / ಲವ್​ಜಿಹಾದ್​​​ ಆರೋಪ ಪ್ರಕರಣ : ಎನ್​ಐಎ ತನಿಖೆಗೆ ಸುಪ್ರೀಂಕೋರ್ಟ್ ಆದೇಶ

ಲವ್​ಜಿಹಾದ್​​​ ಆರೋಪ ಪ್ರಕರಣ : ಎನ್​ಐಎ ತನಿಖೆಗೆ ಸುಪ್ರೀಂಕೋರ್ಟ್ ಆದೇಶ

ನವದೆಹಲಿ : ಕೇರಳದಲ್ಲಿ ನಡೆದಿದೆ ಎನ್ನಲಾದ ಲವ್​ ಜಿಹಾದ್ ಪ್ರಕರಣಕ್ಕೆ ಸಂಬಂಧಿಸಿದಂತೆ ಸುಪ್ರೀಂಕೋರ್ಟ್ ಮಹತ್ವದ ಆದೇಶ ಪ್ರಟಿಸಿದೆ. ಇಸ್ಲಾಂ ಧರ್ಮಕ್ಕೆ ಮತಾಂತರಗೊಂಡು ಮುಸ್ಲಿಂ ಯುವಕನನ್ನು ಯುವತಿ ವರಿಸಿದ್ದ ಪ್ರಕರಣವನ್ನು ರಾಷ್ಟ್ರೀಯ ತನಿಖಾ ದಳ ತನಿಖೆ ಮಾಡುವಂತೆ ಸುಪ್ರೀಂಕೋರ್ಟ್​ ಆದೇಶ ನೀಡಿದೆ.ಮುಖ್ಯ ನ್ಯಾಯಮೂರ್ತಿ ಜಗದೀಶ್ ಸಿಂಗ್ ಖೇಹರ್ ಮತ್ತು ನ್ಯಾಯಮೂರ್ತಿ ಡಿ ವೈ ಚಂದ್ರಾಚೂಡ್​ ಅವರಿದ್ದ ಪೀಠ ಈ ನಿರ್ದೇಶನ ನೀಡಿದೆ.

2016ರಲ್ಲಿ ಹಿಂದೂ ಯುವತಿ ಇಸ್ಲಾಂಗೆ ಮತಾಂತರಗೊಂಡು ಮುಸ್ಲಿಂ ಯುವಕನನ್ನು ಮದುವೆಯಾಗಿದ್ದಳು. ಮತಾಂತರ ಬಳಿಕ ಈಕೆಯ ಹೆಸರನ್ನೂ ಇಸ್ಲಾಂ ಧರ್ಮಕ್ಕೆ ಅನುಗುಣವಾಗಿ ಇಡಲಾಗಿತ್ತು. ಇದಾದ ಬಳಿಕ ಯುವತಿ ತಂದೆ ಮಗಳನ್ನು ಬಲವಂತವಾಗಿ ಅಪಹರಿಸಿ ಮತಾಂತರ ಮಾಡಲಾಗಿದೆ ಎಂದು ಕೇರಳ ಹೈಕೋರ್ಟ್​ ಮೊರೆ ಹೋಗಿದ್ದರು. ವಿಚಾರಣೆ ನಡೆಸಿದ ನ್ಯಾಯಾಲಯ ಈ ಪ್ರಕರಣದ ತನಿಖಾ ಹೊಣೆಯನ್ನು ಪೊಲೀಸರಿಗೆ ಒಪ್ಪಿಸಿತ್ತು.

ಇದು ಭಾರತ ಮಹಿಳಾ ಸ್ವಾತಂತ್ರ್ಯಕ್ಕೆ ಮಾಡಿದ ಅಪಮಾನ ಎಂದು ಆರೋಪಿಸಿ ಯುವತಿಯ ಪತಿ ಸುಪ್ರೀಂಕೋರ್ಟ್​ ಮೆಟ್ಟಿಲೇರಿದ್ದ. ವಿಚಾರಣೆ ನಡೆಸಿದ ನ್ಯಾಯಾಲಯ ಇದೊಂದು ಸೂಕ್ಷ್ಮ ಪ್ರಕರಣವಾಗಿದ್ದು, ಯುವತಿಗೆ ಸಂಬಂಧಿಸಿದ ಎಲ್ಲಾ ಸಾಕ್ಷಿ ಆಧಾರಗಳನ್ನು ನೀಡಬೇಕೆಂದು ಆದೇಶಿಸಿತ್ತು. ಈಗ ನ್ಯಾಯಪೀಠ ಈ ಪ್ರಕರಣದ ತನಿಖೆಯನ್ನು ಎನ್​ಐಎಗೆ ಒಪ್ಪಿಸಿದೆ.

About sudina

Check Also

ಸ್ಪೈಸ್ ಜೆಟ್ ತಾಗಿ ರನ್‍ವೇ ಲೈಟ್‍ಗಳಿಗೆ ಹಾನಿ : ಒಂದೂವರೆ ಗಂಟೆ ಏರ್ ಪೋರ್ಟ್ ಬಂದ್…

ಬೆಂಗಳೂರು : ದೇವನಹಳ್ಳಿಯಲ್ಲಿರುವ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಸಣ್ಣ ದುರ್ಘಟನೆಯೊಂದು ಸಂಭವಿಸಿದೆ. ಹೈದರಾಬಾದ್‍ನಿಂದ ಬರುತ್ತಿದ್ದ ಸ್ಪೈಸ್ ಜೆಟ್ ವಿಮಾನ …

Leave a Reply

Your email address will not be published. Required fields are marked *

error: Content is protected !!