Monday , September 24 2018
ಕೇಳ್ರಪ್ಪೋ ಕೇಳಿ
Home / News NOW / ಜಯಲಲಿತಾ ಸಾವಿನ ತನಿಖೆಗೆ ಆದೇಶ : ಸಮಿತಿ ರಚನೆ

ಜಯಲಲಿತಾ ಸಾವಿನ ತನಿಖೆಗೆ ಆದೇಶ : ಸಮಿತಿ ರಚನೆ

ಚೆನ್ನೈ : ಮಹತ್ವದ ಬೆಳವಣಿಗೆಯಲ್ಲಿ ತಮಿಳುನಾಡಿನ ಮಾಜಿ ಮುಖ್ಯಮಂತ್ರಿ ಜಯಲಲಿತಾ ಸಾವಿನ ತನಿಖೆಗೆ ಸಮಿತಿಯೊಂದನ್ನು ರಚಿಸಲಾಗಿದೆ. ತಮಿಳುನಾಡು ಮುಖ್ಯಮಂತ್ರಿ ಪಳನಿಸ್ವಾಮಿ ಈ ಆದೇಶ ಹೊರಡಿಸಿದ್ದಾರೆ.

ಎಐಎಡಿಎಂಕೆ ಅಧಿನಾಯಕಿಯಾಗಿದ್ದ ಜಯಲಲಿತಾ ಸಾವಿನ ಬಗ್ಗೆ ಹಲವಾರು ಅನುಮಾನಗಳು ಇದ್ದ ಕಾರಣದಿಂದ ಈ ತನಿಖಾ ಸಮಿತಿಯನ್ನು ರಚಿಸಲಾಗಿದೆ. ನಿವೃತ್ತ ನ್ಯಾಯಾಧೀಶರ ನೇತೃತ್ವದಲ್ಲಿ ಸಮಿತಿಯನ್ನು ಸಿಎಂ ರಚಿಸಿದ್ದಾರೆ.

ಕಳೆದ ವರ್ಷ ಜಯ ಸಾವನ್ನಪ್ಪಿದ್ದ ಬಳಿಕ ಇವರ ಸಾವಿನ ಬಗ್ಗೆ ಹಲವರು ಸಂಶಯ ವ್ಯಕ್ತಪಡಿಸಿದ್ದರು. ಮಾಜಿ ಮುಖ್ಯಮಂತ್ರಿ ಪನ್ನೀರ್​ ಸೆಲ್ವಂ ಕೂಡಾ ಜಯ ಸಾವಿನ ಪ್ರಕರಣದ ತನಿಖೆಗೆ ಒತ್ತಾಯ ಮಾಡಿದ್ದರು.

About sudina

Check Also

ಬಂಟ್ವಾಳ : ವಿವಿಧ ಸುದ್ದಿಗಳ ಒಂದು ನೋಟ

ಸೋಣ ಅಮಾವಾಸ್ಯೆ ತೀರ್ಥಸ್ನಾನ : ಭೂಲೋಕದ ಕೈಲಾಸವೆಂದೇ ಪ್ರಖ್ಯಾತವಾದ ನರಹರಿ ಪರ್ವತದಲ್ಲಿ ಸೆಪ್ಟೆಂಬರ್ 9ರ ಭಾನುವಾರ ಬೆಳಗ್ಗೆ 5 ಗಂಟೆಯಿಂದ …

Leave a Reply

Your email address will not be published. Required fields are marked *

error: Content is protected !!