Sunday , July 22 2018
ಕೇಳ್ರಪ್ಪೋ ಕೇಳಿ
Home / News NOW / ಹಳಿ ತಪ್ಪಿದ ಉತ್ಕಲ್ ಎಕ್ಸ್ ಪ್ರೆಸ್: ಹಲವರ ದುರ್ಮರಣ

ಹಳಿ ತಪ್ಪಿದ ಉತ್ಕಲ್ ಎಕ್ಸ್ ಪ್ರೆಸ್: ಹಲವರ ದುರ್ಮರಣ

ಮುಜಾಫರ್ ನಗರ : ಉತ್ತರ ಪ್ರದೇಶದ ಮುಜಾಫರ್ ನಗರ್ ನಲ್ಲಿ ಭೀಕರ ರೈಲು ದುರಂತ ಸಂಭವಿಸಿದೆ. ಉತ್ಕಲ್ ಎಕ್ಸ್ ಪ್ರೆಸ್ ರೈಲು ಇಲ್ಲಿ ಹಳಿ ತಪ್ಪಿದ್ದು 23 ಮಂದಿ ಸಾವನ್ನಪ್ಪಿ, 72 ಮಂದಿ ಗಾಯಗೊಂಡಿದ್ದಾರೆ.

ಪುರಿ ಹರಿದ್ವಾರ್ ಕಳಿಂಗ ಉತ್ಕಲ್ ಎಕ್ಸ್ ಪ್ರೆಸ್ ರೈಲಿನ 6 ಬೋಗಿಗಳು ಹಳಿ ತಪ್ಪಿದ ಪರಿಣಾಮ ಈ ದುರಂತ ಸಂಭವಿಸಿದೆ. ಮುಜಾಫರ್ ನಗರ ಸಮೀಪದ ಕಟೌಲಿ ಎಂಬಲ್ಲಿ ಈ ದುರಂತ ನಡೆದಿದೆ. ಹಳಿ ತುಂಡಾಗಿದ್ದರಿಂದ ಈ ದುರಂತ ಸಂಭವಿಸಿದೆ ಎಂದು ಶಂಕಿಸಲಾಗಿದೆ.

ಇನ್ನು ಘಟನೆ ಬಗ್ಗೆ ಪ್ರತಿಕ್ರಿಯಿಸಿದ ಪ್ರಧಾನಿ ನರೇಂದ್ರ ಮೋದಿ, ತೀವ್ರ ಬೇಸರ ವ್ಯಕ್ತಪಡಿಸಿದ್ದಾರೆ. ಸಂಜೆ 5.45 ಸುಮಾರಿಗೆ ಈ ದುರಂತ ಸಂಭವಿಸಿದ್ದು, ಈ ಬಗ್ಗೆ ರೈಲ್ವೆ ಸಚಿವ ಸುರೇಶ್ ಪ್ರಭು ತನಿಖೆಗೆ ಆದೇಶಿಸಿದ್ದಾರೆ. ಸುದ್ದಿ ತಿಳಿದ ತಕ್ಷಣ ಉತ್ತರ ಪ್ರದೇಶ ಮುಖ್ಯಮಂತ್ತಿ ಯೋಗಿ ಆದಿತ್ಯನಾಥ್ ತನ್ನ ಸಂಪುಟದ ಇಬ್ಬರು ಸಚಿವರೊಂದಿಗೆ ಸ್ಥಳಕ್ಕಾಗಮಿಸಿ ರಕ್ಷಣಾ ಕಾರ್ಯವನ್ನು ಪರಿಶೀಲಿಸಿದ್ದಾರೆ.

ಗಾಯಾಳುಗಳನ್ನು ಉತ್ತರ ಪ್ರದೇಶದ ವಿವಿಧ ಆಸ್ಪತ್ರೆಗೆ ದಾಖಲಿಸಲಾಗಿದೆ. ಇದೇ ಮಾರ್ಗವಾಗಿ ಸಂಚರಿಸುತ್ತಿದ್ದ ಹಲವು ರೈಲುಗಳ ಮಾರ್ಗ ಬದಲಿಸಲಾಗಿದೆ.

About sudina

Check Also

ಸ್ಮಾರ್ಟ್ ಸಿಟಿಗಳ ಅಭಿವೃದ್ಧಿಗೆ ಮುಂದೆ ಬಂದ ನೂರಾರು ಕಂಪೆನಿಗಳು

ಬೆಂಗಳೂರು : ರಾಜ್ಯದ ಹಲವು ನಗರಗಳಿಗೆ ಸ್ಮಾರ್ಟ್ ಸಿಟಿ ಭಾಗ್ಯ ಸಿಕ್ಕಿದೆ. ಇದರಿಂದ ಕೋಟ್ಯಂತರ ರೂಪಾಯಿ ವೆಚ್ಚದ ಯೋಜನೆಗಳು, ಕಾಮಗಾರಿಗಳು …

Leave a Reply

Your email address will not be published. Required fields are marked *

error: Content is protected !!