Wednesday , March 27 2019
ಕೇಳ್ರಪ್ಪೋ ಕೇಳಿ
Home / News NOW / ತ್ರಿವಳಿ ತಲಾಖ್ ರದ್ದು : ಸುಪ್ರೀಂಕೋರ್ಟ್ ಮಹತ್ವದ ತೀರ್ಪು : ಪ್ರಧಾನಿ ಸ್ವಾಗತ

ತ್ರಿವಳಿ ತಲಾಖ್ ರದ್ದು : ಸುಪ್ರೀಂಕೋರ್ಟ್ ಮಹತ್ವದ ತೀರ್ಪು : ಪ್ರಧಾನಿ ಸ್ವಾಗತ

ನವದೆಹಲಿ : ತೀವ್ರ ಚರ್ಚೆ ಮತ್ತು ಕುತೂಹಲಕ್ಕೆ ಕಾರಣವಾಗಿದ್ದ ತ್ರಿವಳಿ ತಲಾಖ್ ಪದ್ಧತಿಯನ್ನು ಸುಪ್ರೀಂಕೋರ್ಟ್ನ ಸಾಂವಿಧಾನಿಕ ಪೀಠ ರದ್ದು ಮಾಡುವ ಮೂಲಕ ಮಹತ್ವದ ತೀರ್ಪು ನೀಡಿದೆ. ಮುಸ್ಲಿಂ ವೈಯಕ್ತಿಕ ಮಂಡಳಿಗೆ ಸಾಂವಿಧಾನಿಕ ಮಾನ್ಯತೆ ಇಲ್ಲವಾದ್ದರಿಂದ ತ್ರಿವಳಿ ತಲಾಖ್ ಅಸಂವಿಧಾನಿಕ ಎಂದು ಈ ಪ್ರಕರಣದ ವಿಚಾರಣೆ ಮಾಡಿದ ಪಂಚ ನ್ಯಾಯಮೂರ್ತಿಗಳ ಪೀಠದಲ್ಲಿದ್ದ ಮೂವರು ನ್ಯಾಯಮೂರ್ತಿಗಳು ಅಭಿಪ್ರಾಯಪಟ್ಟಿದ್ದಾರೆ. ಈ ಮೂಲಕ ನ್ಯಾಯಮೂರ್ತಿಗಳ ಬಹುಮತದ ಆಧಾರದ ಮೇಲೆ ತ್ರಿವಳಿ ತಲಾಖ್ ಅನ್ನು ಸುಪ್ರೀಂಕೋರ್ಟ್ ರದ್ದು ಮಾಡಿದೆ.

ಮುಖ್ಯ ನ್ಯಾಯಮೂರ್ತಿ ಜೆ.ಎಸ್.ಖೇಹರ್ ನೇತೃತ್ವದಲ್ಲಿ ನ್ಯಾ. ಅಬ್ದುಲ್ ನಜೀರ್, ನ್ಯಾ.ಕುರಿಯನ್ ಜೋಸೆಫ್, ನ್ಯಾ. ಆರ್.ಎಫ್. ನಾರಿಮನ್ ಮತ್ತು ನ್ಯಾ.ಉದಯ್ ಲಲಿತ್ ಈ ತ್ರಿವಳಿ ತಲಾಖ್ನ ವಿಚಾರಣೆ ನಡೆಸಿದರು. ಇದರಲ್ಲಿ ಮುಖ್ಯ ನ್ಯಾಯಮೂರ್ತಿ ಜೆಎಸ್ ಖೇಹರ್ ಹಾಗೂ ನ್ಯಾ.ಅಬ್ದುಲ್ ನಜೀರ್ ಅವರು ತ್ರಿವಳಿ ತಲಾಖ್ ಮಾನ್ಯತೆಯನ್ನು ಎತ್ತಿಹಿಡಿದಿದ್ದರು ಎಂದು ಹೇಳಲಾಗುತ್ತಿದೆ. ಆದರೆ, ಬಾಕಿ ಉಳಿದ ಮೂವರು ನ್ಯಾಯಮೂರ್ತಿಗಳು ತ್ರಿವಳಿ ತಲಾಖ್ ಅನ್ನು ಅಸಾಂವಿಧಾನಿಕ ಎಂದು ತೀರ್ಪು ನೀಡಿದ್ದಾರೆ… ಹೀಗಾಗಿ, ಬಹುಮತದ ಆಧಾರದ ಮೇಲೆ ಈ ಪದ್ಧತಿ ರದ್ದುಗೊಂಡಿದೆ. ತ್ರಿವಳಿ ತಲಾಖೆ ವಿರೋಧಿಸಿ ಮುಸ್ಲಿಂ ಸಮುದಾಯದ ಕೆಲ ಮಹಿಳೆಯರು ನ್ಯಾಯಾಲಯದ ಮೆಟ್ಟಿಲೇರಿದ್ದರು. ಇವರಿಗೆ ಕೇಂದ್ರ ಸರ್ಕಾರವೂ ಬೆಂಬಲ ನೀಡಿತ್ತು.

ಪ್ರಧಾನಿ ಸ್ವಾಗತ : ಇನ್ನು, ಸುಪ್ರೀಂ ಕೋರ್ಟ್ ನೀಡಿರುವ ಆದೇಶದಿಂದ ಮುಸ್ಲಿಂ ಮಹಿಳೆಯರಿಗೆ ಸಮಾನತೆ ದೊರೆತಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಅಭಿಪ್ರಾಯಪಟ್ಟಿದ್ದಾರೆ. ಇದೊಂದು ಐತಿಹಾಸಿಕ ತೀರ್ಪು ಎಂದು ಪ್ರಧಾನಿ ಬಣ್ಣಿಸಿದ್ದಾರೆ. ಜೊತೆಗೆ, ಬಿಜೆಪಿ, ಕಾಂಗ್ರೆಸ್ ಸೇರಿದಂತೆ ಬಹುತೇಕ ರಾಜಕೀಯ ಪಕ್ಷಗಳು ಈ ತೀರ್ಪನ್ನು ಸ್ವಾಗತಿಸಿವೆ.

About sudina

Check Also

ಖಡಕ್ ಐಪಿಎಸ್ ಅಧಿಕಾರಿ ಮಧುಕರ್ ಶೆಟ್ಟಿ ವಿಧಿವಶ

ಹೈದರಾಬಾದ್ : ಖಡಕ್ ಮತ್ತು ಜನಾನುರಾಗಿ ಎಂದು ಹೆಸರು ಪಡೆದಿದ್ದ ಹಿರಿಯ ಐಪಿಎಸ್ ಅಧಿಕಾರಿ ಮಧುಕರ್ ಶೆಟ್ಟಿ ವಿಧಿವಶರಾಗಿದ್ದಾರೆ. ಅವರಿಗೆ …

Leave a Reply

Your email address will not be published. Required fields are marked *

error: Content is protected !!