Thursday , October 18 2018
ಕೇಳ್ರಪ್ಪೋ ಕೇಳಿ
Home / News NOW / ಕರ್ತವ್ಯ ನಿರತ ಗ್ರಾಮ ಸಹಾಯಕನ ಮೇಲೆ ಹಲ್ಲೆ

ಕರ್ತವ್ಯ ನಿರತ ಗ್ರಾಮ ಸಹಾಯಕನ ಮೇಲೆ ಹಲ್ಲೆ

ಬಂಟ್ವಾಳ : ಮಾಣಿ ಪಂಚಾಯತ್ ಗ್ರಾಮ ಸಹಾಯಕನ ಮೇಲೆ ಗ್ರಾ. ಪಂ. ಕಾಂಗ್ರೆಸ್ ಸದಸ್ಯರು ಹಲ್ಲೆ ಮಾಡಿರುವ ಘಟನೆ ನಡೆದಿದೆ. ಹಲ್ಲೆಗೊಳಗಾದ ಗ್ರಾಮ ಸಹಾಯಕರನ್ನು ವಿಶ್ವನಾಥ್ ನಾಯಕ್ ಎಂದು ಗುರುತಿಸಲಾಗಿದೆ. ಮಾಣಿ ಗ್ರಾಮ ಪಂಚಾಯತ್ ವಠಾರದಲ್ಲೇ ಈ ಘಟನೆ ನಡೆದಿದ್ದು, ವಿಶ್ವನಾಥ್ ಅವರನ್ನು ಪುತ್ತೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.

ಇನ್ನು, ಸರ್ಕಾರಿ ಕರ್ತವ್ಯಕ್ಕೆ ಅಡ್ಡಿ ಮಾಡಿದ ಆರೋಪದಲ್ಲಿ ಗ್ರಾ.ಪಂ. ಸದಸ್ಯರಾದ ಸುದೀಪ್ ಕುಮಾರ್ ಹಾಗೂ ಮಾಣಿ ವಲಯ ಕಾಂಗ್ರೆಸ್ ಸಮಿತಿಯ ಯುವ ಕಾಂಗ್ರೆಸ್ ಅಧ್ಯಕ್ಷ ವಿವೇಕ್ ಶೆಟ್ಟಿ ಎಂಬುವವರ ವಿರುದ್ಧ ಬಂಟ್ವಾಳ ತಹಸೀಲ್ದಾರ್ ಅವರಿಗೆ ದೂರು ನೀಡಲಾಗಿದೆ. ಆರೋಪಿತರ ವಿರುದ್ಧ ಕಾನೂನು ಕ್ರಮ ಕೈಗೊಳ್ಳುವಂತೆ ಅರ್ಜಿಯಲ್ಲಿ ಮನವಿ ಮಾಡಲಾಗಿದೆ. ಪ್ರಕರಣದ ಬಗ್ಗೆ ವಿಟ್ಲ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

ವರದಿ : ಯಾದವ್ ಕುಲಾಲ್, ಬಿ.ಸಿ.ರೋಡ್

About sudina

Check Also

ಮಾಜಿ ಪ್ರೇಯಸಿ ಮೇಲೆ ಸೇಡು : ವೈದ್ಯೆ ಜೊತೆಗಿನ `ಸರಸ’ದ ಫೋಟೋ ಇಂಟರ್‍ನೆಟ್ ನಲ್ಲಿ ಹರಿಬಿಟ್ಟ ಲವರ್…!

ಬೆಂಗಳೂರು : ತನ್ನ ವಿರುದ್ಧ ದೂರು ಕೊಟ್ಟರು ಎಂಬ ಕಾರಣಕ್ಕೆ ಮಾಜಿ ಪ್ರಿಯಕರನೊಬ್ಬ ವೈದ್ಯೆಯೊಂದಿಗಿನ ತನ್ನ ಸರಸದ ಫೋಟೋವನ್ನು ಸಾಮಾಜಿಕ …

Leave a Reply

Your email address will not be published. Required fields are marked *

error: Content is protected !!