Thursday , April 19 2018
Home / News NOW / ಸ್ವಯಂಘೋಷಿತ ದೇವಮಾನವ ಅತ್ಯಾಚಾರ ಆರೋಪ ಸಾಬೀತು : ಹರಿಯಾಣದ ಪಂಚಕುಲದಲ್ಲಿ ಭುಗಿಲೆದ್ದ ಹಿಂಸಾಚಾರ

ಸ್ವಯಂಘೋಷಿತ ದೇವಮಾನವ ಅತ್ಯಾಚಾರ ಆರೋಪ ಸಾಬೀತು : ಹರಿಯಾಣದ ಪಂಚಕುಲದಲ್ಲಿ ಭುಗಿಲೆದ್ದ ಹಿಂಸಾಚಾರ

ಸಿರ್ಸಾ: ಸ್ವಯಂಘೋಷಿತ ದೇವಮಾನವ ಡೇರಾ ಸಚ್ಚಾ ಸೌದಾ ಮುಖ್ಯಸ್ಥ ಗುರ್ಮೀತ್​ ರಾಮ್​ ರಹೀಂ ಸಿಂಗ್​ಗೆ ಈಗ ಸಂಕಷ್ಟ ಎದುರಾಗಿದೆ. 2002ರಲ್ಲಿ ಮಹಿಳಾ ಅನುಯಾಯಿ ಮೇಲೆ ಅತ್ಯಾಚಾರ ಮಾಡಿದ್ದ ಆರೋಪ ಈಗ ಸಾಬೀತಾಗಿದ್ದು, ಸಿಬಿಐ ವಿಶೇಷ ನ್ಯಾಯಾಲಯ ಏಳು ವರ್ಷ ಶಿಕ್ಷೆ ಪ್ರಕಟಿಸಿದೆ. ಈ ಶಿಕ್ಷೆ ಪ್ರಕಟ ಬಳಿಕ ಹರಿಯಾಣದ ಬಹುಭಾಗದಲ್ಲಿ ಹಿಂಸಾಚಾರ ಭುಗಿಲೆದ್ದಿದೆ. ಈ ಹಿಂಸಾಚಾರಕ್ಕೆ ಸುಮಾರು 32 ಮಂದಿ ಬಲಿಯಾಗಿದ್ದಾರೆ. ಅಪಾರ ಪ್ರಮಾಣದ ಸಾರ್ವಜನಿಕ ಆಸ್ತಿ ಪಾಸ್ತಿಗಳು ಹಾನಿಗೊಳಗಾಗಿವೆ. ಬಿಗಿಭದ್ರತೆಯ ನಡುವೆಯೂ ರಾಮ್​ ರಹೀಂ ಸಿಂಗ್ ಅನುಯಾಯಿಗಳು ಇಲ್ಲಿ ಹಿಂಸಾಚಾರದಲ್ಲಿ ತೊಡಗಿದ್ದಾರೆ.

ಇನ್ನು, ಈ ಹಿಂಸಾಚಾರ ಹಿನ್ನೆಲೆಯಲ್ಲಿ ಹರ್ಯಾಣ ಮತ್ತು ಪಂಜಾಬ್, ದೆಹಲಿ, ರಾಜಸ್ಥಾನಗಳಲ್ಲೂ ಹೈ ಅಲರ್ಟ್ ಘೋಷಿಸಲಾಗಿದೆ. ಇನ್ನು, ಬೆಂಗಳೂರಿನ ಆಶ್ರಮಕ್ಕೂ ಬಿಗಿ ಭದ್ರತೆ ಕಲ್ಪಿಸಲಾಗಿದೆ. ಹಿಂಸಾಚಾರ ಜಾಸ್ತಿಯಾದ ಹಿನ್ನೆಲೆಯಲ್ಲಿ ಪಂಚಕುಲ, ಬಟಿಂಡಾ, ಫಿರೋಜ್ ಪುರ್ ಮತ್ತು ಮಾನ್ಸಾದಲ್ಲಿ ಕರ್ಫ್ಯೂ ಜಾರಿಗೊಳಿಸಲಾಗಿದೆ.

About sudina

Check Also

ಸ್ಪೈಸ್ ಜೆಟ್ ತಾಗಿ ರನ್‍ವೇ ಲೈಟ್‍ಗಳಿಗೆ ಹಾನಿ : ಒಂದೂವರೆ ಗಂಟೆ ಏರ್ ಪೋರ್ಟ್ ಬಂದ್…

ಬೆಂಗಳೂರು : ದೇವನಹಳ್ಳಿಯಲ್ಲಿರುವ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಸಣ್ಣ ದುರ್ಘಟನೆಯೊಂದು ಸಂಭವಿಸಿದೆ. ಹೈದರಾಬಾದ್‍ನಿಂದ ಬರುತ್ತಿದ್ದ ಸ್ಪೈಸ್ ಜೆಟ್ ವಿಮಾನ …

Leave a Reply

Your email address will not be published. Required fields are marked *

error: Content is protected !!