Wednesday , March 20 2019
ಕೇಳ್ರಪ್ಪೋ ಕೇಳಿ
Home / Film News / Mollywood / ಶೀಘ್ರ ವಿಲನ್ ಟ್ರೇಲರ್​ ರಿಲೀಸ್​…?

ಶೀಘ್ರ ವಿಲನ್ ಟ್ರೇಲರ್​ ರಿಲೀಸ್​…?

ತಿರುವನಂತಪುರಂ : ಮಲಯಾಳಂ ಸೂಪರ್​ಸ್ಟಾರ್ ಮೋಹನ್​​ಲಾಲ್ ಅಭಿನಯದ ವಿಲನ್​ ಚಿತ್ರದ ಟೀಸರ್​ ಶೀಘ್ರ ರಿಲೀಸ್ ಆಗಲಿದೆ. ಬಿ ಉನ್ನಿಕೃಷ್ಣನ್​ ಈ ಚಿತ್ರವನ್ನು ನಿರ್ದೇಶನ ಮಾಡುತ್ತಿದ್ದು, ತಮಿಳು ನಟ ವಿಶಾಲ್​ ಕೂಡಾ ಅಭಿನಯಿಸುತ್ತಿದ್ದಾರೆ. ಹನ್ಸಿಕಾ ಮೋಟ್ವಾನಿ ಈ ಚಿತ್ರದ ನಾಯಕಿ. ಶೀಘ್ರದಲ್ಲೇ ಈ ಸಿನೆಮಾ ತೆರೆಗೆ ಬರಲು ಸಜ್ಜಾಗಿದೆ. ಈ ತಿಂಗಳಾಂತ್ಯದಲ್ಲಿ ಟೀಸರ್ ಬಿಡುಗಡೆಗೆ ನಿರ್ಧಾರ ಮಾಡಲಾಗಿದೆ ಎಂದು ನಿರ್ದೇಶಕ ಉನ್ನಿಕೃಷ್ಣನ್ ತಿಳಿಸಿದ್ದಾರೆ. ಇನ್ನು, ಮಂಜು ವಾರಿಯರ್ ಕೂಡಾ ಈ ಚಿತ್ರದಲ್ಲಿ ಪ್ರಮುಖ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ. ರಾಕ್​ಲೈನ್​ ವೆಂಕಟೇಶ್​ ಈ ಚಿತ್ರವನ್ನು ನಿರ್ಮಾಣ ಮಾಡುತ್ತಿದ್ದಾರೆ.

About sudina

Check Also

ನಟಿಗೆ ಲೈಂಗಿಕ ಕಿರುಕುಳ ಪ್ರಕರಣ : ಕಾವ್ಯಾ ಮಾಧವನ್​ ವಿರುದ್ಧ ತನಿಖೆ

ಕೊಚ್ಚಿ : ಬಹುಭಾಷಾ ನಟಿಗೆ ಲೈಂಗಿಕ ಕಿರುಕುಳ ನೀಡಿದ ಪ್ರಕರಣದಲ್ಲಿ ಬಹುಭಾಷಾ ನಟಿ ಕಾವ್ಯಾ ಮಾಧವನ್​ಗೆ ಈಗ ಸಂಕಷ್ಟ ಶುರುವಾಗಿದೆ. …

Leave a Reply

Your email address will not be published. Required fields are marked *

error: Content is protected !!