ಬಂಟ್ವಾಳ : ಕ್ರೀಡೆಯು ವಿದ್ಯಾರ್ಥಿಯ ದೈಹಿಕ ಮತ್ತು ಮಾನಸಿಕ ಸುದೃಢತೆಗೆ ಸಹಕಾರಿ ಎಂದು ಎಸ್.ವಿ.ಎಸ್ ಪ.ಪೂ. ಕಾಲೇಜಿನ ಪ್ರಾಂಶುಪಾಲೆ ಶಶಿಕಲಾ ಕೆ. ಹೇಳಿದರು. ಅವರು ಶ್ರೀ ವೆಂಕಟರಮಣ ಸ್ವಾಮಿ ಪದವಿ ಪೂರ್ವ ಕಾಲೇಜಿನಲ್ಲಿ ಜರಗಿದ ಬಂಟ್ವಾಳ ತಾಲೂಕು ಮಟ್ಟದ ಪ.ಪೂ. ಕಾಲೇಜು ವಿದ್ಯಾರ್ಥಿ-ವಿದ್ಯಾರ್ಥಿನಿಯರ ಟೇಬಲ್ ಟೆನ್ನಿಸ್ ಪಂದ್ಯಾಟದ ಬಹುಮಾನ ವಿತರಣಾ ಕಾರ್ಯಕ್ರಮದಲ್ಲಿ ಅಧ್ಯಕ್ಷತೆ ವಹಿಸಿ ಮಾತನಾಡಿದರು.
ವೇದಿಕೆಯಲ್ಲಿ ವಿದ್ಯಾರ್ಥಿ ಕ್ಷೇಮಾಪಾಲನಾಧಿಕಾರಿ ಬಾಲಕೃಷ್ಣ ಗೌಡ, ಎಸ್.ವಿ.ಎಸ್ ಪದವಿ ಕಾಲೇಜಿನ ರಾಜ್ಯಶಾಸ್ತ್ರ ಉಪನ್ಯಾಸಕಿ ಫೌಜಿಯಾ ಬಿ. ಎ. ಉಪಸ್ಥಿತರಿದ್ದರು. ಎಸ್.ವಿ.ಎಸ್ ಪ.ಪೂ. ಕಾಲೇಜಿನ ಹುಡುಗಿಯರ ಟೇಬಲ್ ಟೆನ್ನಿಸ್ ತಂಡವು ವಿನ್ನರ್ಸ್ ಆಗಿ ಜಿಲ್ಲಾ ಮಟ್ಟ ಸ್ಪರ್ಧೆಗೆ ಆಯ್ಕೆ ಪಡೆದುಕೊಂಡಿತು. ಹುಡುಗರ ಟೇಬಲ್ ಟೆನ್ನಿಸ್ ತಂಡವು ರನ್ನರ್ಸ್ ಆಗಿ ದ್ವಿತೀಯ ಸ್ಥಾನವನ್ನು ಪಡೆದುಕೊಂಡಿತು.
ಕಾರ್ಯಕ್ರಮದಲ್ಲಿ ತಾರಾನಾಥ ಜಿ. ಎಸ್ ಮತ್ತು ರೂಪ ಉಪಸ್ಥಿತರಿದ್ದರು. ಎಸ್.ವಿ.ಎಸ್ ಕಾಲೇಜಿನ ದೈಹಿಕ ಶಿಕ್ಷಣ ನಿರ್ದೇಶಕ ಲೆಪ್ಟಿನೆಂಟ್ ಸುಂದರ್ ಸ್ವಾಗತಿಸಿ, ಕಾರ್ಯಕ್ರಮ ನಿರೂಪಿಸಿದರು. ಅರ್ಥಶಾಸ್ತ್ರ ಉಪನ್ಯಾಸಕ ಹಾಗೂ ಕ್ರೀಡಾ ಸಲಹೆಗಾರ ಪ್ರದೀಪ್ ಪೂಜಾರಿ ವಂದಿಸಿದರು.
ವರದಿ : ಯಾದವ್ ಕುಲಾಲ್, ಬಿ.ಸಿ.ರೋಡ್