Sunday , September 23 2018
ಕೇಳ್ರಪ್ಪೋ ಕೇಳಿ
Home / Sandalwood / ಕೆಂಪೇಗೌಡ 2 ಚಿತ್ರದ ಶೂಟಿಂಗ್ ವೇಳೆ ಅವಘಡ : ಕ್ವಾಡ್​ ಬೈಕ್​ನಿಂದ ಬಿದ್ದು ಯೋಗಿ, ಕೋಮಲ್​ಗೆ ಗಾಯ : ಇಲ್ಲಿದೆ ವೀಡಿಯೋ

ಕೆಂಪೇಗೌಡ 2 ಚಿತ್ರದ ಶೂಟಿಂಗ್ ವೇಳೆ ಅವಘಡ : ಕ್ವಾಡ್​ ಬೈಕ್​ನಿಂದ ಬಿದ್ದು ಯೋಗಿ, ಕೋಮಲ್​ಗೆ ಗಾಯ : ಇಲ್ಲಿದೆ ವೀಡಿಯೋ

ಚೆನ್ನೈ : ಕೆಂಪೇಗೌಡ 2 ಚಿತ್ರದ ಶೂಟಿಂಗ್ ಸಂದರ್ಭದಲ್ಲಿ ಅವಘಡ ಸಂಭವಿಸಿದೆ. ಕ್ವಾಡ್​ ಬೈಕ್​ನಲ್ಲಿ ಚೇಸಿಂಗ್ ದೃಶ್ಯದ ಶೂಟಿಂಗ್ ಸಂದರ್ಭದಲ್ಲಿ ನಟ ಕೋಮಲ್ ಮತ್ತು ಯೋಗಿ ಬಿದ್ದು ಗಾಯ ಮಾಡಿಕೊಂಡಿದ್ದಾರೆ. ಚೆನ್ನೈನ ಮಹಾಬಲಿಪುರಂನಲ್ಲಿ ಈ ಚಿತ್ರದ ಶೂಟಿಂಗ್ ನಡೆಯುತ್ತಿದ್ದು, ಇಬ್ಬರು ನಟರಿಗೂ ಗಾಯಗಳಾಗಿದೆ. ತಕ್ಷಣ ಇವರನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗಿದೆ.

ಕೋಮಲ್ ಮತ್ತು ಯೋಗಿ ಈ ಕ್ವಾಡ್​ ಬೈಕ್​ನಲ್ಲಿ ಸವಾರಿ ಮಾಡುತ್ತಿದ್ದರು. ಈ ಸಂದರ್ಭದಲ್ಲಿ ಬೈಕ್​ ಪಲ್ಟಿ ಹೊಡೆದಿದೆ. ಆದರೆ, ಮುನ್ನೆಚ್ಚರಿಕಾ ಕ್ರಮಗಳನ್ನು ತೆಗೆದುಕೊಂಡಿದ್ದರಿಂದ ದೊಡ್ಡ ಮಟ್ಟದ ಅಪಾಯ ಆಗಿಲ್ಲ.

ಕೋಮಲ್​ ಪೊಲೀಸ್ ಅಧಿಕಾರಿಯಾಗಿ ಈ ಚಿತ್ರದಲ್ಲಿ ನಟಿಸುತ್ತಿದ್ದಾರೆ. ಕ್ರಿಕೆಟಿಗ ಶ್ರೀಕಾಂತ್​ ಕೂಡಾ ಈ ಚಿತ್ರದಲ್ಲಿ ನಟಿಸುತ್ತಿದ್ದಾರೆ. ಶಂಕರೇಗೌಡ ಈ ಚಿತ್ರ ನಿರ್ಮಾಣ ಮಾಡುತ್ತಿದ್ದಾರೆ.

About sudina

Check Also

ನಿರ್ದೇಶಕಿ ಪೂರ್ಣಿಮಾ ಮೋಹನ್ ವಿಧಿವಶ

ಬೆಂಗಳೂರು : ಸ್ಯಾಂಡಲ್​ವುಡ್​ ನಿರ್ದೇಶಕಿ ಪೂರ್ಣಿಮಾ ಮೋಹನ್​ ವಿಧಿವಶರಾಗಿದ್ದಾರೆ. ಶುಕ್ರವಾರ ಅವರು ಹೃದಯಾಘಾತದಿಂದ ಕೊನೆಯುಸಿರೆಳೆದಿದ್ದಾರೆ. 48 ವರ್ಷದ ಪೂರ್ಣಿಮಾ ಅವರನ್ನು …

Leave a Reply

Your email address will not be published. Required fields are marked *

error: Content is protected !!