Monday , February 18 2019
ಕೇಳ್ರಪ್ಪೋ ಕೇಳಿ
Home / News NOW / ಹಿರಿಯ ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ

ಹಿರಿಯ ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ

ಬೆಂಗಳೂರು : ಹಿರಿಯ ಪತ್ರಕರ್ತೆ, ಪ್ರಗತಿಪರ ಚಿಂತಕಿ ಗೌರಿ ಲಂಕೇಶ್ ದುಷ್ಕರ್ಮಿಗಳ ಗುಂಡಿಗೆ ಬಲಿಯಾಗಿದ್ದಾರೆ. ಬೆಂಗಳೂರಿನ ರಾಜರಾಜೇಶ್ವರಿ ನಗರದ ಮನೆಯಲ್ಲೇ ಗೌರಿ ಲಂಕೇಶ್ ಮೇಲೆ ಗುಂಡಿನ ದಾಳಿ ನಡೆದಿದೆ. ಸುಮಾರು ರಾತ್ರಿ 8.10ಕ್ಕೆ ಈ ಘಟನೆ ನಡೆದಿದ್ದು, ಗುಂಡೇಟು ಬಿದ್ದ ತಕ್ಷಣ ಕುಸಿದು ಬಿದ್ದ ಗೌರಿ ಲಂಕೇಶ್ ಸ್ಥಳದಲ್ಲೇ ಕೊನೆಯುಸಿರೆಳೆದಿದ್ದಾರೆ.

ಎರಡು ವರ್ಷದ ಹಿಂದೆ ನಡೆದಿದ್ದ ಚಿಂತಕ ಎಂ.ಎಂ.ಕಲಬುರ್ಗಿ ಹತ್ಯೆ ಮಾದರಿಯಲ್ಲೇ ಗೌರಿ ಲಂಕೇಶ್ ಕೊಲೆ ಕೂಡಾ ನಡೆದಿದೆ. ಮೂವರು ದುಷ್ಕರ್ಮಿಗಳು ಈ ದಾಳಿ ನಡೆಸಿದ್ದಾರೆ ಎಂದು ಹೇಳಲಾಗುತ್ತಿದೆ. ಬೈಕ್‍ನಲ್ಲಿ ಕಾರಿನಲ್ಲಿ ಗೌರಿ ಅವರನ್ನು ಫಾಲೋ ಮಾಡಿದ್ದರು ಎನ್ನಲಾಗುತ್ತಿದೆ. ಅಲ್ಲದೆ, ಓರ್ವ ಮನೆಯ ಬಳಿಯೇ ದಾಳಿಗೆ ಹೊಂಚು ಹಾಕುತ್ತಿದ್ದನಂತೆ.

ಮನೆಯಲ್ಲಿ ಗೌರಿ ಅವರು ಒಬ್ಬರೇ ವಾಸವಾಗಿದ್ದರು. ಇವತ್ತು ಕಚೇರಿಯಿಂದ ಮನೆಗೆ ಬರುತ್ತಿದ್ದ ಗೌರಿ ಕಾರಿನಿಂದ ಇಳಿದು ಮನೆಯೊಳಗೆ ಹೋಗುವ ಸಂದರ್ಭದಲ್ಲಿ ದುಷ್ಕರ್ಮಿಗಳು, ತಲೆ ಮತ್ತು ಎದೆ ಭಾಗಕ್ಕೆ ಗುಂಡಿನ ದಾಳಿ ನಡೆಸಿ ಗೌರಿ ಲಂಕೇಶ್ ಹತ್ಯೆ ಮಾಡಿದ್ದಾರೆ. ಒಂದು ನಿಮಿಷದಲ್ಲಿ 6 ಸುತ್ತಿನ ಗುಂಡಿನ ದಾಳಿ ನಡೆದಿದೆ ಎಂದು ಹೇಳಲಾಗುತ್ತಿದೆ.

ಸಾಹಿತಿ, ಪತ್ರಕರ್ತ ದಿವಂಗತ ಲಂಕೇಶ್ ಅವರ ಪುತ್ರಿ ಆಗಿರುವ ಗೌರಿ ಅವರು ಗೌರಿ ಲಂಕೇಶ್ ಪತ್ರಿಕೆ ಎಂಬ ವಾರ ಪತ್ರಿಕೆಯನ್ನು ಇವರು ನಡೆಸುತ್ತಿದ್ದರು. ಇನ್ನು, ಗೌರಿ ಲಂಕೇಶ್ ಹತ್ಯೆಗೆ ವ್ಯಾಪಕ ಖಂಡನೆ ವ್ಯಕ್ತವಾಗಿದೆ. ಅಲ್ಲದೆ, ದುಷ್ಕರ್ಮಿಗಳನ್ನು ಉಗ್ರ ಶಿಕ್ಷೆಗೆ ಗುರಿಪಡಿಸಬೇಕೆಂದು ಎಲ್ಲರೂ ಒತ್ತಾಯಿಸಿದ್ದಾರೆ.

ಇನ್ನು, ತನಿಖೆಗೆ ಮೂರು ತಂಡಗಳನ್ನು ರಚಿಸಿದ್ದು, ಬೆಂಗಳೂರಿನ ತುಂಬಾ ನಾಕಾಬಂಧಿ ಹಾಕಲಾಗಿದೆ.

About sudina

Check Also

ಖಡಕ್ ಐಪಿಎಸ್ ಅಧಿಕಾರಿ ಮಧುಕರ್ ಶೆಟ್ಟಿ ವಿಧಿವಶ

ಹೈದರಾಬಾದ್ : ಖಡಕ್ ಮತ್ತು ಜನಾನುರಾಗಿ ಎಂದು ಹೆಸರು ಪಡೆದಿದ್ದ ಹಿರಿಯ ಐಪಿಎಸ್ ಅಧಿಕಾರಿ ಮಧುಕರ್ ಶೆಟ್ಟಿ ವಿಧಿವಶರಾಗಿದ್ದಾರೆ. ಅವರಿಗೆ …

Leave a Reply

Your email address will not be published. Required fields are marked *

error: Content is protected !!