Wednesday , December 12 2018
ಕೇಳ್ರಪ್ಪೋ ಕೇಳಿ
Home / Sandalwood / ಮತ್ತೊಂದು ತೆಲುಗು ಚಿತ್ರದಲ್ಲಿ ಮಿಂಚಲಿದ್ದಾರೆ ರಶ್ಮಿಕಾ ಮಂದಣ್ಣ

ಮತ್ತೊಂದು ತೆಲುಗು ಚಿತ್ರದಲ್ಲಿ ಮಿಂಚಲಿದ್ದಾರೆ ರಶ್ಮಿಕಾ ಮಂದಣ್ಣ

ಬೆಂಗಳೂರು : ರಕ್ಷಿತ್ ಶೆಟ್ಟಿ ಮನದನ್ನೆ, ಕಿರಿಕ್ ಪಾರ್ಟಿಯ ಬೆಡಗಿ ರಶ್ಮಿಕಾ ಮಂದಣ್ಣ ಈಗ ಬ್ಯುಸಿ ಆಗುತ್ತಿದ್ದಾರೆ. ಕನ್ನಡದಲ್ಲಿ ಮಾತ್ರವಲ್ಲದೆ, ಬೇರೆ ಬೇರೆ ಭಾಷೆಗಳಲ್ಲೂ ಈ ಸುಂದರಿ ಮಿಂಚುತ್ತಿದ್ದಾರೆ.

ಕನ್ನಡದಲ್ಲಿ ಪುನೀತ್ ರಾಜ್​ಕುಮಾರ್ ಜೊತೆ ಅಂಜನೀಪುತ್ರದಲ್ಲಿ ಕಾಣಿಸಿಕೊಳ್ಳುತ್ತಿರುವ ಈ ಬೆಡಗಿ, ತೆಲುಗಿನಲ್ಲಿ ಅಲ್ಲು ಅರ್ಜುನ್ ಜೊತೆಗೆ ‘ನಾ ಪೇರು ಸೂರ್ಯ, ನಾ ಇಲ್ಲು ಇಂಡಿಯಾ‘ ಎಂಬ ಚಿತ್ರದಲ್ಲೂ ಮಿಂಚುತ್ತಿದ್ದಾರೆ. ಇಂತಹ ಚೆಲುವೆಗೆ ಈಗ ಟಾಲಿವುಡ್​ನಿಂದ ಮತ್ತೊಂದು ಅವಕಾಶ ಬಂದಿದೆ.

ಗೀತಾ ಆರ್ಟ್ಸ್​ ಎಂಬ ಚಿತ್ರದಲ್ಲೂ ರಶ್ಮಿಕಾ ನಟಿಸುತ್ತಿದ್ದು, ಈ ಬಗ್ಗೆ ಅವರೇ ತಮ್ಮ ಸಾಮಾಜಿಕ ಜಾಲತಾಣದ ಖಾತೆಯಲ್ಲಿ ಬರೆದುಕೊಂಡಿದ್ದಾರೆ. ಪರಶುರಾಮ್​ ಈ ಚಿತ್ರದ ನಿರ್ದೇಶಕನಾಗಿದ್ದು, ವಿಜಯ್ ದೇವರಕೊಂಡ ಹೀರೋ ಆಗಿ ಕಾಣಿಸಿಕೊಳ್ಳಲಿದ್ದಾರೆ.

About sudina

Check Also

ನಿರ್ದೇಶಕಿ ಪೂರ್ಣಿಮಾ ಮೋಹನ್ ವಿಧಿವಶ

ಬೆಂಗಳೂರು : ಸ್ಯಾಂಡಲ್​ವುಡ್​ ನಿರ್ದೇಶಕಿ ಪೂರ್ಣಿಮಾ ಮೋಹನ್​ ವಿಧಿವಶರಾಗಿದ್ದಾರೆ. ಶುಕ್ರವಾರ ಅವರು ಹೃದಯಾಘಾತದಿಂದ ಕೊನೆಯುಸಿರೆಳೆದಿದ್ದಾರೆ. 48 ವರ್ಷದ ಪೂರ್ಣಿಮಾ ಅವರನ್ನು …

Leave a Reply

Your email address will not be published. Required fields are marked *

error: Content is protected !!