Monday , September 24 2018
ಕೇಳ್ರಪ್ಪೋ ಕೇಳಿ
Home / Film News / Mollywood / ಓಣಂ ದಿನ ಗೋ ಮಾಂಸ ಭಕ್ಷಣೆ : ರಾಷ್ಟ್ರಪ್ರಶಸ್ತಿ ವಿಜೇತ ನಟಿ ವಿರುದ್ಧ ಹಲವರು ಗರಂ

ಓಣಂ ದಿನ ಗೋ ಮಾಂಸ ಭಕ್ಷಣೆ : ರಾಷ್ಟ್ರಪ್ರಶಸ್ತಿ ವಿಜೇತ ನಟಿ ವಿರುದ್ಧ ಹಲವರು ಗರಂ

ತಿರುವನಂತಪುರ: ರಾಷ್ಟ್ರಪ್ರಶಸ್ತಿ ವಿಜೇತ ಮಲಯಾಳಂ ನಟಿ ಸುರಭಿ ಲಕ್ಷ್ಮಿ ಈಗ ಹಲವರ ಕೆಂಗಣ್ಣಿಗೆ ಗುರಿಯಾಗಿದ್ದಾರೆ. ಓಣಂ ದಿನ ಖಾಸಗಿ ವಾಹಿನಿಯಲ್ಲಿ ಪ್ರಸಾರವಾದ ಕಾರ್ಯಕ್ರಮದಲ್ಲಿ ಗೋಮಾಂಸ ಭಕ್ಷಣೆ ಮಾಡಿದ್ದಾರೆ ಎಂಬ ಕಾರಣಕ್ಕೆ ಸುರಭಿ ಲಕ್ಷ್ಮಿ ವಿರುದ್ಧ ಹಲವರು ತಿರುಗಿಬಿದ್ದಿದ್ದಾರೆ. ಸಾಮಾಜಿಕ ಜಾಲತಾಣದಲ್ಲಿ ಈಗ ಇದೇ ವಿಷಯ ಬಗ್ಗೆ ವ್ಯಾಪಕ ಚರ್ಚೆ ನಡೆಯುತ್ತಿದೆ. ಪರ ವಿರೋಧ ಅಭಿಪ್ರಾಯ ವ್ಯಕ್ತವಾಗಿದೆ.

ಮಲಯಾಳಂನ ಮೀಡಿಯಾ ವನ್ ಚಾನೆಲ್ನಲ್ಲಿ ಈ ಕಾರ್ಯಕ್ರಮ ಪ್ರಸಾರವಾಗಿತ್ತು. ಈ ಕಾರ್ಯಕ್ರಮದಲ್ಲಿ ಕೇರಳ ಪರೋಟ ಜೊತೆಗೆ ಸುರಭಿ ಲಕ್ಷ್ಮಿ ಗೋಮಾಂಸ ಕೂಡಾ ಸೇವಿಸಿದ್ದರು ಎಂದು ಹೇಳಲಾಗುತ್ತಿದೆ. ಇದಕ್ಕೆ ಹಲವರು ಆಕ್ರೋಶ ವ್ಯಕ್ತಪಡಿಸಿದ್ದು, ಅವರನ್ನು ನಿಷೇಧಿಸಬೇಕು ಎಂದು ಆಗ್ರಹಿಸಿದ್ದಾರೆ.
ಇನ್ನು, ಸುರಭಿ ಲಕ್ಷ್ಮಿ ಅವರ ಪ್ರಕಾರ ಈ ಕಾರ್ಯಕ್ರಮ ಓಣಂಗಿಂತ ಮೂರು ವಾರಗಳ ಹಿಂದೆಯೇ ಶೂಟ್ ಮಾಡಲಾಗಿತ್ತಂತೆ.

About sudina

Check Also

ನಟಿಗೆ ಲೈಂಗಿಕ ಕಿರುಕುಳ ಪ್ರಕರಣ : ಕಾವ್ಯಾ ಮಾಧವನ್​ ವಿರುದ್ಧ ತನಿಖೆ

ಕೊಚ್ಚಿ : ಬಹುಭಾಷಾ ನಟಿಗೆ ಲೈಂಗಿಕ ಕಿರುಕುಳ ನೀಡಿದ ಪ್ರಕರಣದಲ್ಲಿ ಬಹುಭಾಷಾ ನಟಿ ಕಾವ್ಯಾ ಮಾಧವನ್​ಗೆ ಈಗ ಸಂಕಷ್ಟ ಶುರುವಾಗಿದೆ. …

Leave a Reply

Your email address will not be published. Required fields are marked *

error: Content is protected !!