Wednesday , March 20 2019
ಕೇಳ್ರಪ್ಪೋ ಕೇಳಿ
Home / News NOW / ಲಂಡನ್ : ಸುರಂಗ ಮೆಟ್ರೋ ನಿಲ್ದಾಣದಲ್ಲಿ ಸ್ಫೋಟ…! : ಉಗ್ರರ ಕೈವಾಡ ದೃಢ

ಲಂಡನ್ : ಸುರಂಗ ಮೆಟ್ರೋ ನಿಲ್ದಾಣದಲ್ಲಿ ಸ್ಫೋಟ…! : ಉಗ್ರರ ಕೈವಾಡ ದೃಢ

ಲಂಡನ್ : ನೈರುತ್ಯ ಲಂಡನ್​​ನ ಸುರಂಗ ಮೆಟ್ರೋ ನಿಲ್ದಾಣದಲ್ಲಿ ಸ್ಫೋಟ ಸಂಭವಿಸಿದೆ. ಪಾರ್ಸನ್ಸ್ ಗ್ರೀನ್ ನಿಲ್ದಾಣದಲ್ಲಿ ಈ ಘಟನೆ ನಡೆದೆ. ಪರಿಣಾಮ ಹಲವರಿಗೆ ಗಾಯಗಳಾಗಿವೆ. ಸ್ಫೋಟದ ಶಬ್ದ ಕೇಳಿದ ತಕ್ಷಣ ಭಯಭೀತರಾದ ಪ್ರಯಾಣಿಕರು ದಿಕ್ಕಾಪಾಲಾಗಿ ಓಡಿದ್ದರಿಂದ ಗಾಯಗೊಂಡವರ ಸಂಖ್ಯೆ ಅಧಿಕವಾಗಿದೆ. ಈ ಘಟನೆಯ ಹಿಂದೆ ಉಗ್ರರ ಕೈವಾಡ ದೃಢವಾಗಿದೆ ಎಂದು ಅಲ್ಲಿನ ಅಧಿಕಾರಿಗಳು ತಿಳಿಸಿದ್ದಾರೆ.


ಈ ಘಟನೆ ಬಳಿಕ ಎರ್ಲ್ಸ್ ಕೋರ್ಟ್ ಮತ್ತು ವಿಂಬಲ್ಡನ್ ನಡುವಿನ ರೈಲು ಸಂಚಾರವನ್ನು ಸ್ಥಗಿತಗೊಳಿಸಲಾಗಿದೆ. ಸಂಪರ್ಕವನ್ನು ಸ್ಥಗಿತಗೊಳಿಸಲಾಗಿದೆ ಎಂದು ತಿಳಿದುಬಂದಿದೆ. ಸ್ಥಳೀಯ ಕಾಲಮಾನ  ಬೆಳಗ್ಗೆ 8.30ರ ಸುಮಾರಿಗೆ ಈ ಘಟನೆ ಸಂಭವಿಸಿದೆ. ರೈಲಿನೊಳಗೆಯೇ ಈ ಸ್ಫೋಟ ಸಂಭವಿಸಿದೆ ಎಂದು ಹೇಳಲಾಗುತ್ತಿದೆ.

About sudina

Check Also

ಖಡಕ್ ಐಪಿಎಸ್ ಅಧಿಕಾರಿ ಮಧುಕರ್ ಶೆಟ್ಟಿ ವಿಧಿವಶ

ಹೈದರಾಬಾದ್ : ಖಡಕ್ ಮತ್ತು ಜನಾನುರಾಗಿ ಎಂದು ಹೆಸರು ಪಡೆದಿದ್ದ ಹಿರಿಯ ಐಪಿಎಸ್ ಅಧಿಕಾರಿ ಮಧುಕರ್ ಶೆಟ್ಟಿ ವಿಧಿವಶರಾಗಿದ್ದಾರೆ. ಅವರಿಗೆ …

Leave a Reply

Your email address will not be published. Required fields are marked *

error: Content is protected !!