Wednesday , March 27 2019
ಕೇಳ್ರಪ್ಪೋ ಕೇಳಿ
Home / Sandalwood / ಸಂಗೊಳ್ಳಿ ರಾಯಣ್ಣ ಚಿತ್ರ ನಿರ್ಮಾಪಕ ಆನಂದ್ ಅಪ್ಪುಗೊಳ್ ಬಂಧನ

ಸಂಗೊಳ್ಳಿ ರಾಯಣ್ಣ ಚಿತ್ರ ನಿರ್ಮಾಪಕ ಆನಂದ್ ಅಪ್ಪುಗೊಳ್ ಬಂಧನ

ಬೆಳಗಾವಿ : ಸ್ಯಾಂಡಲ್​ವುಡ್​​ ಸೂಪರ್​ಹಿಟ್​ ಸಂಗೊಳ್ಳಿ ರಾಯಣ್ಣ ಚಿತ್ರದ ನಿರ್ಮಾಪಕ ಆನಂದ್ ಅಪ್ಪಿಗೊಳ್ ಬಂಧನಕ್ಕೊಳಗಾಗಿದ್ದಾರೆ. ಕೋ ಆಪರೇಟಿವ್ ಸೊಸೈಟಿಯಿಂದ ಗ್ರಾಹಕರಿಗೆ ವಂಚನೆ ಆರೋಪ ಮೇಲೆ ಆನಂದ್ ಅವರನ್ನು ಬಂಧಿಸಲಾಗಿದೆ. ಸುಮಾರು ೩೦೦ ಕೋಟಿಗೂ ಹೆಚ್ಚು ಹಣ ವಂಚನೆ ಮಾಡಿದ ಆರೋಪ ಇವರ ಮೇಲಿತ್ತು.

ಬ್ಯಾಂಕ್​ನ ಗ್ರಾಹಕರು ಕಳೆದ ತಿಂಗಳಿಂದ ತಮ್ಮ ಹಣಕ್ಕಾಗಿ ಪರದಾಡುತ್ತಿದ್ದರು. ಅಲ್ಲದೆ, ಅಪ್ಪುಗೊಳ್ ವಿರುದ್ಧ ದೂರು ನೀಡಿದ್ದರು. ಇದಾದ ಬಳಿಕ ಆನಂದ್ ಅವರು ತಲೆ ಮರೆಸಿಕೊಂಡಿದ್ದರು. ಹೀಗಾಗಿ, ಆನಂದ್ ಅವರಿಗಾಗಿ ಹುಡುಕಾಟ ನಡೆಸಿದ್ದ ಪೊಲೀಸರು ಮುಂಬೈಯಲ್ಲಿ ಇವರನ್ನು ಬಂಧಿಸಿದ್ದಾರೆ. ಚಾಲೆಂಜಿಂಗ್ ಸ್ಟಾರ್ ದರ್ಶನ್ ಸಂಗೊಳ್ಳಿ ರಾಯಣ್ಣ ಚಿತ್ರದಲ್ಲಿ ನಟಿಸಿದ್ದರು. ಈ ಚಿತ್ರ ಸಾಕಷ್ಟು ಹೆಸರು ಮಾಡಿತ್ತು.

About sudina

Check Also

ನಿರ್ದೇಶಕಿ ಪೂರ್ಣಿಮಾ ಮೋಹನ್ ವಿಧಿವಶ

ಬೆಂಗಳೂರು : ಸ್ಯಾಂಡಲ್​ವುಡ್​ ನಿರ್ದೇಶಕಿ ಪೂರ್ಣಿಮಾ ಮೋಹನ್​ ವಿಧಿವಶರಾಗಿದ್ದಾರೆ. ಶುಕ್ರವಾರ ಅವರು ಹೃದಯಾಘಾತದಿಂದ ಕೊನೆಯುಸಿರೆಳೆದಿದ್ದಾರೆ. 48 ವರ್ಷದ ಪೂರ್ಣಿಮಾ ಅವರನ್ನು …

Leave a Reply

Your email address will not be published. Required fields are marked *

error: Content is protected !!