Wednesday , January 23 2019
ಕೇಳ್ರಪ್ಪೋ ಕೇಳಿ
Home / Mumbai Mail / ಮುಂಬೈಯಲ್ಲಿ ಮತ್ತೆ ಮಳೆಯ ಆರ್ಭಟ : ಶಾಲಾ ಕಾಲೇಜುಗಳಿಗೆ ರಜೆ, ಜನರಿಗೆ ನಡುಕ ಶುರು
file photo

ಮುಂಬೈಯಲ್ಲಿ ಮತ್ತೆ ಮಳೆಯ ಆರ್ಭಟ : ಶಾಲಾ ಕಾಲೇಜುಗಳಿಗೆ ರಜೆ, ಜನರಿಗೆ ನಡುಕ ಶುರು

ಮುಂಬೈ : ಇತ್ತೀಚೆಗಷ್ಟೇ ಮಹಾಮಳೆಗೆ ಸಾಕ್ಷಿಯಾದ ಮುಂಬೈಯಲ್ಲಿ ಮತ್ತೆ ಭಾರೀ ಮಳೆಯಾಗುತ್ತಿದೆ. ಕಳೆದೆರಡು ದಿನಗಳಿಂದ ಮುಂಬೈಯಲ್ಲಿ ಜೋರು ಮಳೆಯಾಗುತ್ತಿದ್ದು, ಮುಂದಿನ ಇಪತ್ತ ನಾಲ್ಕು ಗಂಟೆಗಳ ಕಾಲ ಪರಿಸ್ಥಿತಿ ಇದೇ ರೀತಿ ಇರಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಮಳೆಯ ಕಾರಣದಿಂದ ಶಾಲಾ ಕಾಲೇಜುಗಳಿಗೆ ರಜೆ ನೀಡಲಾಗಿದೆ. ಮುಂಜಾಗೃತಾ ಕ್ರಮವಾಗಿ ನಾಳೆ ಕೂಡಾ ಶಾಲೆಗಳಿಗೆ ರಜೆ ಇರಲಿದೆ. ಈ ಎರಡು ರಜೆಗಳ ಬದಲಾಗಿ ದೀಪಾವಳಿಯ ರಜೆಯ ಎರಡು ದಿನ ಶಾಲೆಗಳನ್ನು ತೆರೆಯಲು ನಿರ್ಧರಿಸಲಾಗಿದೆ.

ಮಳೆಯಿಂದಾಗಿ ಸಂಚಾರ ಕೂಡಾ ಅಸ್ತವ್ಯಸ್ಥವಾಗಿದೆ. ಬಸ್ಸು, ರೈಲು ಮತ್ತು ವಿಮಾನ ಸಂಚಾರದಲ್ಲಿ ವ್ಯತ್ಯಯ ಉಂಟಾಗಿದೆ. ಇವತ್ತು ಕನಿಷ್ಟ 13 ವಿಮಾನಗಳ ಸಂಚಾರದಲ್ಲಿ ವ್ಯತ್ಯಯವಾಗಿತ್ತು. 15 ವಿಮಾನಗಳು ಪ್ರಯಾಣವನ್ನೇ ರದ್ದುಗೊಳಿಸಿವೆ.

About sudina

Check Also

ದಾವೂದ್ ಪಾಕಿಸ್ತಾನದಲ್ಲೇ ಇದ್ದಾನೆ : ನಾಲ್ಕೈದು ವಿಳಾಸ ನೀಡಿದ್ದಾನೆ ಸಹೋದರ ಇಕ್ಬಾಲ್

ಮುಂಬೈ : ಭಾರತದ ಮೋಸ್ಟ್ ವಾಂಟೆಡ್ ಕ್ರಿಮಿನಲ್ ದಾವೂದ್ ಇಬ್ರಾಹಿಂ ಪಾಕಿಸ್ತಾನದಲ್ಲೇ ಅಡಗಿ ಕುಳಿತಿದ್ದಾನೆ ಎಂಬುದಕ್ಕೆ ಮತ್ತೊಂದು ಸಾಕ್ಷ್ಯ ಸಿಕ್ಕಿದೆ. …

Leave a Reply

Your email address will not be published. Required fields are marked *

error: Content is protected !!