Monday , October 22 2018
ಕೇಳ್ರಪ್ಪೋ ಕೇಳಿ
Home / News NOW / ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣ : ಮೂವರು ಶಂಕಿತರ ರೇಖಾಚಿತ್ರ ಬಿಡುಗಡೆ

ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣ : ಮೂವರು ಶಂಕಿತರ ರೇಖಾಚಿತ್ರ ಬಿಡುಗಡೆ

ಬೆಂಗಳೂರು : ಹಿರಿಯ ಪತ್ರಕರ್ತೆ ಗೌರಿ ಲಂಕೇಶ್​​​ ಹತ್ಯೆ ಪ್ರಕರಣ ಆಗಿ ಒಂದು ತಿಂಗಳು ಕಳೆದರೂ ಹಂತಕರ ಸುಳಿವು ಪತ್ತೆ ಆಗಿಲ್ಲ. ಪೊಲೀಸರು ಹಂತಕರ ಬೇಟೆಯನ್ನು ಮುಂದುವರಿಸಿದ್ದು, ಇದೀಗ ಮೂವರು ಶಂಕಿತರ ರೇಖಾಚಿತ್ರಗಳನ್ನು ಬಿಡುಗಡೆ ಮಾಡಿದ್ದಾರೆ. ಈ ಹಂತಕರು ಒಂದು ವಾರದ ಹಿಂದೆಯೇ ಬೆಂಗಳೂರಿಗೆ ಬಂದು ಗೌರಿ ಅವರ ಚಲನವಲನವನ್ನು ಗಮನಿಸಿದ್ದರು ಎಂದು ಎಸ್​ಐಟಿ ಮುಖ್ಯಸ್ಥ ಬಿ.ಕೆ.ಸಿಂಗ್ ತಿಳಿಸಿದ್ದಾರೆ. 7.65 ಎಂ ಎಂ ಕಂಟ್ರಿಮೇಡ್​ ಪಿಸ್ತೂಲ್​ನಿಂದ ಗೌರಿ ಹತ್ಯೆ ಮಾಡಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಇನ್ನು, ಹಂತಕರ ಬಗ್ಗೆ ಯಾರಿಗಾದರೂ ಸುಳಿವು ಸಿಕ್ಕರೆ ತಕ್ಷಣ ಪೊಲೀಸರನ್ನು ಸಂಪರ್ಕಿಸುವಂತೆಯೇ ಅಧಿಕಾರಿಗಳು ಮನವಿ ಮಾಡಿಕೊಂಡಿದ್ದಾರೆ. ಆರೋಪಿಗಳ ಸುಳಿವು ಸಿಕ್ಕರೆ, ಕೂಡಲೇ ವಿಶೇಷ ತನಿಖಾ ತಂಡ, ಸಿ.ಐ.ಡಿ., ಬೆಂಗಳೂರು, ಅಥವಾ 9480800202 ಮೊಬೈಲ್ ಸಂಖ್ಯೆ ಅಥವಾ sit.glankesh@ksp.gov.in ಗೆ ಮಾಹಿತಿ ನೀಡಲು ಅಧಿಕಾರಿಗಳು ಕೇಳಿಕೊಂಡಿದ್ದಾರೆ. ಅಲ್ಲದೆ, ಮಾಹಿತಿ ನೀಡಿದವರ ವಿವರವನ್ನು ಗೌಪ್ಯವಾಗಿಡಲಾಗುವುದು ಮತ್ತು ಸರ್ಕಾರ ನಿಗದಿಪಡಿಸಿರುವ ಬಹುಮಾನವನ್ನು ನೀಡಲಾಗುವುದು ಎಂದೂ ತಿಳಿಸಿದ್ದಾರೆ.

About sudina

Check Also

ಮಾಜಿ ಪ್ರೇಯಸಿ ಮೇಲೆ ಸೇಡು : ವೈದ್ಯೆ ಜೊತೆಗಿನ `ಸರಸ’ದ ಫೋಟೋ ಇಂಟರ್‍ನೆಟ್ ನಲ್ಲಿ ಹರಿಬಿಟ್ಟ ಲವರ್…!

ಬೆಂಗಳೂರು : ತನ್ನ ವಿರುದ್ಧ ದೂರು ಕೊಟ್ಟರು ಎಂಬ ಕಾರಣಕ್ಕೆ ಮಾಜಿ ಪ್ರಿಯಕರನೊಬ್ಬ ವೈದ್ಯೆಯೊಂದಿಗಿನ ತನ್ನ ಸರಸದ ಫೋಟೋವನ್ನು ಸಾಮಾಜಿಕ …

Leave a Reply

Your email address will not be published. Required fields are marked *

error: Content is protected !!