ಬೆಂಗಳೂರು : ಮುನಿರತ್ನ ಕುರುಕ್ಷೇತ್ರ ಚಿತ್ರದಲ್ಲಿ ಬ್ಯುಸಿ ಇರುವ ಚಾಲೆಂಜಿಂಗ್ ಸ್ಟಾರ್ ದರ್ಶನ್ ಅವರ 51ನೇ ಸಿನೆಮಾ ಕೂಡಾ ಸೆಟ್ಟೇರಿದೆ. ರಶ್ಮಿಕಾ ಮಂದಣ್ಣ ಈ ಚಿತ್ರದ ನಾಯಕಿಯಾಗಿದ್ದಾರೆ. ಮೀಡಿಯಾ ಹೌಸ್ ಸ್ಟುಡಿಯೋ ಬ್ಯಾನರ್ನಲ್ಲಿ ಬಿ ಸುರೇಶ್ ಹಾಗೂ ಶೈಲಜಾ ನಾಗ್ ಅವರು ಈ ಚಿತ್ರವನ್ನು ನಿರ್ಮಾಣ ಮಾಡುತ್ತಿದ್ದಾರೆ. ಪಿ ಕುಮಾರನ್ ಈ ಚಿತ್ರದ ನಿರ್ದೇಶಕ. ವಿ. ಹರಿಕೃಷ್ಣ ಸಂಗೀತ ನೀಡಿರುವ ಈ ಚಿತ್ರಕ್ಕೆ ಭರ್ಜರಿ ಚಿತ್ರದ ನಿರ್ದೇಶಕ ಸಂಭಾಷಣೆ ಬರೆದಿದ್ದಾರೆ.
