Monday , May 21 2018
Home / Film News / ಹಿರಿಯ ನಟ, ನಿರ್ದೇಶಕ, ನಿರ್ಮಾಪಕ ಕಾಶಿನಾಥ್ ಇನ್ನಿಲ್ಲ

ಹಿರಿಯ ನಟ, ನಿರ್ದೇಶಕ, ನಿರ್ಮಾಪಕ ಕಾಶಿನಾಥ್ ಇನ್ನಿಲ್ಲ

ಬೆಂಗಳೂರು : ಕನ್ನಡ ಚಿತ್ರರಂಗದಲ್ಲಿ ಟ್ರೆಂಡ್ ಸೆಟ್ಟರ್, ಹಲವು ಶಿಷ್ಯರನ್ನು ಹುಟ್ಟುಹಾಕಿದ್ದ ಹಿರಿಯ ನಟ, ನಿರ್ದೇಶಕ ಕಾಶಿನಾಥ್ ವಿಧಿವಶರಾಗಿದ್ದಾರೆ. ಬೆಂಗಳೂರಿನ ಶ್ರೀಶಂಕರ ಕ್ಯಾನ್ಸರ್ ಆಸ್ಪತ್ರೆಯಲ್ಲಿ ಕಾಶಿನಾಥ್ ಕೊನೆಯುಸಿರೆಳೆದಿದ್ದಾರೆ. ಕಳೆದ ಎರಡು ದಿನಗಳಿಂದ ಇವರು ಈ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ರಿಯಲ್ ಸ್ಟಾರ್ ಉಪೇಂದ್ರ, ಸುನಿಲ್ ಕುಮಾರ್ ದೇಸಾಯಿ, ವಿ ಮನೋಹರ್ ಸೇರಿದಂತೆ ಹಲವರನ್ನು ಬೆಳೆಸಿದವರು ಕಾಶಿನಾಥ್.

1975ರಲ್ಲಿ `ಅಪರೂಪದ ಅತಿಥಿಗಳು’ ಚಿತ್ರ ನಿರ್ದೇಶನ ಮಾಡುವ ಮೂಲಕ ಇವರು ಚಿತ್ರರಂಗವನ್ನು ಕಾಶಿನಾಥ್ ಪ್ರವೇಶಿಸಿದ್ದರು. 1984ರಲ್ಲಿ ರಿಲೀಸ್ ಆದ `ಅನುಭವ’ ಚಿತ್ರ ಬ್ಲಾಕ್‍ಬಸ್ಟರ್ ಮೂವಿಯಾಗಿ ಹೊರಹೊಮ್ಮಿತ್ತು. ಇದಲ್ಲದೆ ಸಾಕಷ್ಟು ಹಿಟ್ ಚಿತ್ರಗಳನ್ನು ಕೊಟ್ಟವರು ಕಾಶಿನಾಥ್. ಕಾಶಿನಾಥ್ ಅಭಿನಯಿಸಿರುವ ಕಡೆಯ ಚಿತ್ರ `ಚೌಕ’. ಕಾಶಿನಾಥ್ ಅವರ ಅಗಲಿಕೆಗೆ ಚಿತ್ರರಂಗದ ಹಲವು ಗಣ್ಯರು ಕಂಬನಿ ಮಿಡಿದಿದ್ದಾರೆ.

About sudina

Check Also

ಸ್ಥಳೀಯ ಪ್ರತಿಭೆಗಳಿಗೆ ಇಲ್ಲ ಮನ್ನಣೆ, ನನ್ನ ಪತಿಗೂ ಈ ನೋವಿತ್ತು : ದಿವಂಗತ ಗಾಯಕ ಎಲ್​.ಎನ್.ಶಾಸ್ತ್ರಿ ಪತ್ನಿ ಬೇಸರ

ಬೆಂಗಳೂರು : ಕನ್ನಡ ಸಿನಿಲೋಕದಲ್ಲಿ ಗಾಯಕ ಎಲ್.ಎನ್.ಶಾಸ್ತ್ರಿ ತನ್ನದೇ ಆ ಛಾಪನ್ನು ಮೂಡಿಸಿದ್ದರು. ಹಲವಾರು ಹಿಟ್ ಹಾಡುಗಳಿಗೆ ಧ್ವನಿಯಾಗಿದ್ದವರು ಎಲ್.ಎನ್.ಶಾಸ್ತ್ರಿ. …

Leave a Reply

Your email address will not be published. Required fields are marked *

error: Content is protected !!