Tuesday , October 16 2018
ಕೇಳ್ರಪ್ಪೋ ಕೇಳಿ
Home / Film News / ಮದುವೆ ಬಳಿಕ ಮತ್ತೆ ಬಣ್ಣದ ಲೋಕಕ್ಕೆ ಮರಳಿದ ಬೆಡಗಿ

ಮದುವೆ ಬಳಿಕ ಮತ್ತೆ ಬಣ್ಣದ ಲೋಕಕ್ಕೆ ಮರಳಿದ ಬೆಡಗಿ

ಬೆಂಗಳೂರು : ಸಾಮಾನ್ಯವಾಗಿ ಮದುವೆಯ ಬಳಿಕ ನಟಿಯರ ಸಿನಿ ಪಯಣ ಕೊನೆಯಾಗುತ್ತದೆ ಎಂಬುದು ಬಹಳ ಹಿಂದಿನಿಂದಲೂ ಇರುವ ನಂಬಿಕೆ. ಆದರೆ, ಇತ್ತೀಚಿನ ದಿನಗಳಲ್ಲಿ ಹಲವು ನಟಿಯರು ಈ ನಂಬಿಕೆಯನ್ನು ಸುಳ್ಳಾಗಿದ್ದಾರೆ. ಅಲ್ಲದೆ, ಮದುವೆಯ ಬಳಿಕವೂ ಬಣ್ಣದ ಲೋಕದಲ್ಲಿ ತಮ್ಮದೇ ಆದ ಛಾಪನ್ನು ಮೂಡಿಸಿದ್ದಾರೆ. ಇದೀಗ ಇದೇ ಸಾಲಿಗೆ ನಟಿ ಭಾವನಾ ಕೂಡಾ ಸೇರುತ್ತಾರೆ.

ಇತ್ತೀಚೆಗಷ್ಟೇ ಕನ್ನಡ ಚಿತ್ರ ನಿರ್ಮಾಪಕ ನವೀನ್‍ರನ್ನು ವರಿಸಿರುವ ಮಲಯಾಳಂ ಬೆಡಗಿ ಭಾವನಾ ಮದುವೆ ಬಳಿಕವೂ ಚಿತ್ರರಂಗದಲ್ಲಿ ಮುಂದುವರಿಯುತ್ತೇನೆ ಎಂದು ಸ್ಪಷ್ಟಪಡಿಸಿದ್ದಾರೆ. ಅಲ್ಲದೆ, ಕರ್ನಾಟಕದ ಸೊಸೆಯಾದ ಭಾವನಾ ಮದುವೆಯ ಬಳಿಕ ಒಪ್ಪಿಕೊಂಡಿರುವ ಚಿತ್ರ ಕೂಡಾ ಕನ್ನಡದ್ದೇ. ಪ್ರಜ್ವಲ್ ದೇವರಾಜ್ ಅಭಿನಯದ ‘ಇನ್ಸ್ ಪೆಕ್ಟರ್ ವಿಕ್ರಮ್’ ಚಿತ್ರದಲ್ಲಿ ಭಾವನಾ ನಾಯಕಿಯಾಗಿ ಅಭಿನಯಿಸಲಿದ್ದಾರೆ. ಈ ಚಿತ್ರವನ್ನು ನರಸಿಂಹ ನಿರ್ದೇಶನ ಮಾಡಲಿದ್ದಾರೆ. ಇದೇ ಮೊದಲ ಬಾರಿಗೆ ಪ್ರಜ್ವಲ್ ಮತ್ತು ಭಾವನಾ ಜೊತೆಯಾಗುತ್ತಿದ್ದಾರೆ. ಈ ಚಿತ್ರದ ಶೂಟಿಂಗ್ ಕೂಡಾ ಆರಂಭವಾಗಿದೆ. ಮುಂದಿನ ದಿನಗಳಲ್ಲಿ ಭಾವನಾ ಈ ಟೀಂ ಸೇರಲಿದ್ದಾರೆ. ಬಹುತೇಕ ಫೆಬ್ರವರಿ 9 ರ ಬಳಿಕ ಭಾವನಾ ಶೂಟಿಂಗ್‍ನಲ್ಲಿ ಪಾಲ್ಗೊಳ್ಳಲಿದ್ದಾರೆ.

About sudina

Check Also

ಮೀ ಟೂ ಬಿಸಿ : ಗಾಯಕ ರಘು ದೀಕ್ಷಿತ್ ವಿರುದ್ಧ ಆರೋಪ : ರಘು ಕ್ಷಮೆಯಾಚನೆ…!

ಬೆಂಗಳೂರು : ಮೀ ಟೂ ಅಭಿಯಾನದ ಬಿಸಿ ಈಗ ಖ್ಯಾತ ಗಾಯಕ ರಘು ದೀಕ್ಷಿತ್ ಅವರಿಗೂ ತಟ್ಟಿದೆ. ಗಾಯಕಿ ಚಿನ್ಮಯಿ …

Leave a Reply

Your email address will not be published. Required fields are marked *

error: Content is protected !!